Wednesday, November 4, 2026
HomeDistrictsBallariನ.11 ರಂದು ಜಿಲ್ಲಾಡಳಿತದಿಂದ ಒನಕೆ ಓಬವ್ವ ಜಯಂತಿ ಅರ್ಥಪೂರ್ಣ ಆಚರಣೆ

ನ.11 ರಂದು ಜಿಲ್ಲಾಡಳಿತದಿಂದ ಒನಕೆ ಓಬವ್ವ ಜಯಂತಿ ಅರ್ಥಪೂರ್ಣ ಆಚರಣೆ

ಬಳ್ಳಾರಿ,ನ.04:ನಾಡಿನ ಸ್ವಾಭಿಮಾನ, ಅಪ್ರತಿಮ ಸಾಹಸ ಹಾಗೂ ದೇಶಭಕ್ತಿಯ ಸಂಕೇತವಾಗಿರುವ ವೀರವನಿತೆ ಒನಕೆ ಓಬವ್ವ ಅವರ ಜಯಂತಿಯನ್ನು ನ.11 ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಹಾಯಕ ಆಯುಕ್ತರ ಕಚೇರಿಯ ತಹಶೀಲ್ದಾರ ಶೇಕ್ಷಾವಲಿ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಒನಕೆ ಓಬವ್ವ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಒನಕೆ ಓಬವ್ವ ಯಾವುದೇ ಒಂದು ನಿರ್ದಿಷ್ಟ ಸಮುದಾಯಕ್ಕೆ ಸೀಮಿತರಲ್ಲ, ಅವರು ಇಡೀ ದೇಶವೇ ಹೆಮ್ಮೆಪಡುವಂತಹ ವೀರನಾರಿ. ಅವರ ಜಯಂತಿಯನ್ನು ಕೇವಲ ಸರ್ಕಾರಿ ಕಾರ್ಯಕ್ರಮವನ್ನಾಗಿ ಮಾತ್ರವಲ್ಲದೆ ಸಾರ್ವಜನಿಕರೆಲ್ಲರೂ ಸ್ವಯಂಪ್ರೇರಿತರಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಶಿಷ್ಟಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ, ಗಣ್ಯರನ್ನು ಆಹ್ವಾನಿಸಬೇಕು. ಒನಕೆ ಓಬವ್ವ ಅವರ ಶೌರ್ಯ, ತ್ಯಾಗ ಮತ್ತು ಸ್ವಾಭಿಮಾನದ ಬದುಕಿನ ಕುರಿತು ವಿಶೇಷ ಉಪನ್ಯಾಸ ನೀಡಲು ನುರಿತ ಉಪನ್ಯಾಸಕರನ್ನು ನಿಯೋಜಿಸಬೇಕು. ಕಾರ್ಯಕ್ರಮದಲ್ಲಿ ಸುಗಮ ಸಂಗೀತ ಇರಲಿದೆ ಎಂದರು.

ವೇದಿಕೆ ಕಾರ್ಯಕ್ರಮದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸುವಂತೆ ಡಿಡಿಪಿಯು ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.

ಇದೇ ವೇಳೆ ಸಮುದಾಯದ ಮುಖಂಡರು ಭಾಗವಹಿಸಿ ತಮ್ಮ ಸಲಹೆ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು, ಇತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments