Wednesday, January 14, 2026
HomeDistrictsBallariಡಿ.07 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ; ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಸುತ್ತ-ಮುತ್ತ...

ಡಿ.07 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ; ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಸುತ್ತ-ಮುತ್ತ ನಿರ್ಬಂಧ

ಬಳ್ಳಾರಿ,ಡಿ.05: ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ಡಿ.07 ರಂದು ಬೆಳಿಗ್ಗೆ 09.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 02 ರಿಂದ ಸಂಜೆ 04.30 ರ ವರೆಗೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಭಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments