Warning: Cannot modify header information - headers already sent by (output started at /home1/a360dlo1/public_html/haisandur.com/index.php:1) in /home1/a360dlo1/public_html/haisandur.com/wp-includes/feed-rss2.php on line 8
ಕೊಡಗು Archives - Hai Sandur kannada fortnightly news paper https://haisandur.com/category/ಕೊಡಗು/ Hai Sandur News.Karnataka India Tue, 20 Feb 2024 13:59:57 +0000 en-US hourly 1 https://haisandur.com/wp-content/uploads/2022/01/cropped-IMG_20211107_051359-32x32.jpg ಕೊಡಗು Archives - Hai Sandur kannada fortnightly news paper https://haisandur.com/category/ಕೊಡಗು/ 32 32 ಜಿಲ್ಲಾಡಳಿತದಿಂದ ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ https://haisandur.com/2024/02/20/%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e0%b2%a1%e0%b2%b3%e0%b2%bf%e0%b2%a4%e0%b2%a6%e0%b2%bf%e0%b2%82%e0%b2%a6-%e0%b2%b8%e0%b2%82%e0%b2%a4%e0%b2%95%e0%b2%b5%e0%b2%bf-%e0%b2%b8%e0%b2%b0/ https://haisandur.com/2024/02/20/%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e0%b2%a1%e0%b2%b3%e0%b2%bf%e0%b2%a4%e0%b2%a6%e0%b2%bf%e0%b2%82%e0%b2%a6-%e0%b2%b8%e0%b2%82%e0%b2%a4%e0%b2%95%e0%b2%b5%e0%b2%bf-%e0%b2%b8%e0%b2%b0/#respond Tue, 20 Feb 2024 13:59:56 +0000 https://haisandur.com/?p=34646 ಮಡಿಕೇರಿ ಫೆ.20:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ನಗರದ ಗಾಂಧಿ ಭವನದಲ್ಲಿ ಮಂಗಳವಾರ ಆಚರಿಸಲಾಯಿತು.ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿ ಸಂತ ಕವಿ ಶ್ರೇಷ್ಠ ದಾರ್ಶನಿಕ ಕವಿ ಸರ್ವಜ್ಞ ಅವರು ಕನ್ನಡದಲ್ಲಿ ತ್ರಿಪದಿ ಸಾಲುಗಳ ಪದ್ಯ ಬರೆಯುವ ಮೂಲಕ ಮನೆ ಮಾತಾಗಿದ್ದಾರೆ ಎಂದು ತಿಳಿಸಿದರು.ಛತ್ರಪತಿ ಶಿವಾಜಿ ಮಹಾರಾಜರು ಮಹಾರಾಷ್ಟ್ರದ […]

The post ಜಿಲ್ಲಾಡಳಿತದಿಂದ ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ appeared first on Hai Sandur kannada fortnightly news paper.

]]>
ಮಡಿಕೇರಿ ಫೆ.20:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ನಗರದ ಗಾಂಧಿ ಭವನದಲ್ಲಿ ಮಂಗಳವಾರ ಆಚರಿಸಲಾಯಿತು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿ ಸಂತ ಕವಿ ಶ್ರೇಷ್ಠ ದಾರ್ಶನಿಕ ಕವಿ ಸರ್ವಜ್ಞ ಅವರು ಕನ್ನಡದಲ್ಲಿ ತ್ರಿಪದಿ ಸಾಲುಗಳ ಪದ್ಯ ಬರೆಯುವ ಮೂಲಕ ಮನೆ ಮಾತಾಗಿದ್ದಾರೆ ಎಂದು ತಿಳಿಸಿದರು.
ಛತ್ರಪತಿ ಶಿವಾಜಿ ಮಹಾರಾಜರು ಮಹಾರಾಷ್ಟ್ರದ ಪುಣೆ ಬಳಿಯ ಶಿವನೇರಿ ಗ್ರಾಮದಲ್ಲಿ ಜನಿಸಿ ಭಾರತದ ರಾಷ್ಟ್ರ ನಿರ್ಮಾಣಕ್ಕೆ ಹೋರಾಡಿದ್ದಾರೆ ಎಂದು ತಿಳಿಸಿದರು.

ಕವಿ ಸರ್ವಜ್ಞ ಮತ್ತು ಛತ್ರಪತಿ ಶಿವಾಜಿ ಮಹಾರಾಜರು ಜನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಈ ಎಲ್ಲಾ ಮಹನೀಯರ ಜೀವನ ಸಂದೇಶಗಳನ್ನು ತಿಳಿದುಕೊಂಡು ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಹೇಳಿದರು.
ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರಾದ ವೆಂಕಟನಾಯಕ್ ಅವರು ಮಾತನಾಡಿ ಕವಿ ಸರ್ವಜ್ಞ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರು ಅಂಬಲೂರುನಲ್ಲಿ ಜನಿಸಿದ್ದಾರೆ ಎಂದು ತಿಳಿಸಿದರು.
ಕವಿ ಸರ್ವಜ್ಞ ಅವರು ಸಾವಿರಕ್ಕೂ ಹೆಚ್ಚು ತ್ರಿಪದಿಗಳನ್ನು ಬರೆದಿದ್ದಾರೆ. ಇವರ ಬರಹಗಳು ಇಂದಿಗೂ ಸಹ ಪ್ರಸ್ತುತವಾಗಿದೆ ಎಂದು ವೆಂಕಟ್ ನಾಯಕ್ ಅವರು ತಿಳಿಸಿದರು.

ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಅದ್ಭುತ ತ್ರಿಪದಿಗಳನ್ನು ರಚಿಸಿದ್ದಾರೆ. ಕವಿ ಸರ್ವಜ್ಞ ಅವರ ಪದ್ಯಗಳನ್ನು ಮಕ್ಕಳಿಗೆ ತಿಳಿಸಬೇಕು. ಕವಿ ಸರ್ವಜ್ಞ ಅವರು ಕನ್ನಡ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತ್ರಿಪದಿ ಸಾಲುಗಳ ಮೂಲಕ ವೈಚಾರಿಕತೆ ಮತ್ತು ವೈಜ್ಞಾನಿಕತೆ ಮೂಲಕ ಜಾಗೃತಿ ಮೂಡಿಸಿದ್ದಾರೆ ಎಂದು ಹೇಳಿದರು.
ಛತ್ರಪತಿ ಶಿವಾಜಿ ಮಹಾರಾಜರು ರಾಷ್ಟ್ರದಲ್ಲಿ ತಮ್ಮದೇ ಆದ ಪ್ರಭಾವ ಬೀರಿ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಹೇಳಿದರು.
17 ನೇ ಶತಮಾನದಲ್ಲಿ ಶಿವಾಜಿ ಪೂರ್ವ ಭಾರತದಲ್ಲಿ ರಾಜ್ಯಬಾರ ಮಾಡುತ್ತಿದ್ದರು. ಅವರ ತಾಯಿ ಜೀಜಾ ಮಾತೆಯು ಶಿವಾಜಿಗೆ ಸಣ್ಣ ವಯಸ್ಸಿನಿಂದಲೂ ನಾಮಜಪವನ್ನು ಮಾಡಿಸುತ್ತಿದ್ದರು. ಒಬ್ಬ ರಾಜನಿಗೆ ಬೇಕಾದ ಎಲ್ಲಾ ಯುದ್ಧ ಕಲೆಗಳನ್ನು ಜೀಜಾಮಾತೆಯು ಕಲಿಸುತ್ತಿದ್ದರು ಎಂದು ವೆಂಕಟ್ ನಾಯಕ್ ತಿಳಿಸಿದರು.

ಕುಲಾಲ/ಕುಂಬಾರ ಮಡಿಕೆ ತಯಾರಿಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ.ಪಿ.ದಿನೇಶ್ ಅವರು ಮಾತನಾಡಿ ಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಅವರ ವಿಚಾರಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು. ಕವಿ ಸರ್ವಜ್ಞರು ಜನ ಸಾಮಾನ್ಯರಿಗೆ ಒಪ್ಪಿಗೆ ಆಗುವ ರೀತಿಯಲ್ಲಿ ತ್ರಿಪದಿಗಳನ್ನು ಬರೆದು ಜಾಗೃತಿ ಮೂಡಿಸಿದ್ದಾರೆ ಎಂದು ಹೇಳಿದರು.
‘ಕವಿ ಸರ್ವಜ್ಞ ಅವರ ಜೀವಿತಾವದಿಯಲ್ಲಿ ಅಸ್ಪøಶ್ಯತೆ, ಜಾತಿಯತೆ ವಿರುದ್ದ ಹೋರಾಟ ಮಾಡಿದ್ದಾರೆ. ಸಮಾಜದಲ್ಲಿ ಮೂರು ಸಾಲುಗಳ ತ್ರಿಪದಿ ಬರೆಯುವ ಮೂಲಕ ಶಾಂತಿ ದೂತರಾಗಿ ಕೆಲಸ ಮಾಡಿದ್ದಾರೆ. ಬಸವಣ್ಣ ಅವರು ನೀಡಿದ ವಚನಗಳು, ಕವಿ ಸರ್ವಜ್ಞ ಅವರು ನೀಡಿದ ತ್ರಿಪದಿ ಸಾಲುಗಳು ಕನ್ನಡ ನಾಡಿನಲ್ಲಿ ತಮ್ಮದೇ ಆದ ಹೆಸರು ಹೊಂದಿವೆ ಎಂದು ಕೆ.ಪಿ.ದಿನೇಶ್ ಅವರು ಹೇಳಿದರು.’

ಮರಾಠ ಸಮಾಜದ ಜಿಲ್ಲಾಧ್ಯಕ್ಷರಾದ ಎಸ್.ಆರ್.ಅರುಣ್ ರಾವ್ ಅವರು ಮಾತನಾಡಿ ಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರು ಸಮಾಜಕ್ಕೆ ನೀಡಿರುವ ಸಂದೇಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.
ಛತ್ರಪತಿ ಶಿವಾಜಿ ಮಹಾರಾಜರು ಮಹಿಳೆಯರಿಗೆ ಸಮಾನ ಅವಕಾಶ ಮತ್ತು ರಕ್ಷಣೆಗೆ ಒತ್ತು ನೀಡಿದ್ದರು. ಶಿವಾಜಿ ಮಹಾರಾಜರು ಹಿಂದೂ ಸಾಮ್ರಜ್ಯದ ದೊರೆಯಾಗಿದ್ದಾರೆ ಎಂದು ಹೇಳಿದರು.
ಕುಂಬಾರ ಕುಲಾಲ ಸಂಘದ ಮಾಜಿ ಅಧ್ಯಕ್ಷರಾದ ನಾಣಯ್ಯ ಪ್ರಮುಖರಾದ ಕುಶಾಲಪ್ಪ, ಚಂದ್ರಶೇಖರ್, ದಾಮೋದರ ಇತರರು ಇದ್ದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಸ್ವಾಗತಿಸಿದರು. ನಿವೃತ್ತ ಅಧ್ಯಾಪಕರಾದ ಬಿ.ಸಿ.ಶಂಕರಯ್ಯ ಅವರು ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

The post ಜಿಲ್ಲಾಡಳಿತದಿಂದ ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ appeared first on Hai Sandur kannada fortnightly news paper.

]]>
https://haisandur.com/2024/02/20/%e0%b2%9c%e0%b2%bf%e0%b2%b2%e0%b3%8d%e0%b2%b2%e0%b2%be%e0%b2%a1%e0%b2%b3%e0%b2%bf%e0%b2%a4%e0%b2%a6%e0%b2%bf%e0%b2%82%e0%b2%a6-%e0%b2%b8%e0%b2%82%e0%b2%a4%e0%b2%95%e0%b2%b5%e0%b2%bf-%e0%b2%b8%e0%b2%b0/feed/ 0
ಭಾರತೀಯ ಕ್ರೀಡಾ ಪ್ರಾಧಿಕಾರದ ವಿದ್ಯಾರ್ಥಿನಿಯರಿಗೆ ಆತ್ಮೀಯ ಸನ್ಮಾನ https://haisandur.com/2024/02/20/%e0%b2%ad%e0%b2%be%e0%b2%b0%e0%b2%a4%e0%b3%80%e0%b2%af-%e0%b2%95%e0%b3%8d%e0%b2%b0%e0%b3%80%e0%b2%a1%e0%b2%be-%e0%b2%aa%e0%b3%8d%e0%b2%b0%e0%b2%be%e0%b2%a7%e0%b2%bf%e0%b2%95%e0%b2%be%e0%b2%b0%e0%b2%a6/ https://haisandur.com/2024/02/20/%e0%b2%ad%e0%b2%be%e0%b2%b0%e0%b2%a4%e0%b3%80%e0%b2%af-%e0%b2%95%e0%b3%8d%e0%b2%b0%e0%b3%80%e0%b2%a1%e0%b2%be-%e0%b2%aa%e0%b3%8d%e0%b2%b0%e0%b2%be%e0%b2%a7%e0%b2%bf%e0%b2%95%e0%b2%be%e0%b2%b0%e0%b2%a6/#respond Tue, 20 Feb 2024 13:57:18 +0000 https://haisandur.com/?p=34643 ಮಡಿಕೇರಿ ಫೆ.20:-ಭಾರತೀಯ ಕ್ರೀಡಾ ಪ್ರಾಧಿಕಾರದ ಚಿನ್ನದ ಪದಕ ವಿಜೇತ 19 ಹಾಕಿ ಕ್ರೀಡಾಪಟುಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಆತ್ಮೀಯವಾಗಿ ಗೌರವಿಸಲಾಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ ಸನ್ಮಾನಿಸಿದರು.ಇತ್ತೀಚೆಗೆ ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ(ಸಾಯಿ) ನಡೆದ ಅಖಿಲ ಭಾರತ ಮಟ್ಟದ ಅಂತರ್ ಸಾಯಿ ಹಾಕಿ ಪಂದ್ಯಾವಳಿಯಲ್ಲಿ ಮಡಿಕೇರಿ ಕ್ರೀಡಾ ಪ್ರಾಧಿಕಾರದ ವಿದ್ಯಾರ್ಥಿನಿಯರು ಪಾಲ್ಗೊಂಡು ಚಿನ್ನದ ಪದಕ ಪಡೆದಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮೆಚ್ಚುಗೆ […]

The post ಭಾರತೀಯ ಕ್ರೀಡಾ ಪ್ರಾಧಿಕಾರದ ವಿದ್ಯಾರ್ಥಿನಿಯರಿಗೆ ಆತ್ಮೀಯ ಸನ್ಮಾನ appeared first on Hai Sandur kannada fortnightly news paper.

]]>
ಮಡಿಕೇರಿ ಫೆ.20:-ಭಾರತೀಯ ಕ್ರೀಡಾ ಪ್ರಾಧಿಕಾರದ ಚಿನ್ನದ ಪದಕ ವಿಜೇತ 19 ಹಾಕಿ ಕ್ರೀಡಾಪಟುಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಆತ್ಮೀಯವಾಗಿ ಗೌರವಿಸಲಾಯಿತು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ ಸನ್ಮಾನಿಸಿದರು.
ಇತ್ತೀಚೆಗೆ ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ(ಸಾಯಿ) ನಡೆದ ಅಖಿಲ ಭಾರತ ಮಟ್ಟದ ಅಂತರ್ ಸಾಯಿ ಹಾಕಿ ಪಂದ್ಯಾವಳಿಯಲ್ಲಿ ಮಡಿಕೇರಿ ಕ್ರೀಡಾ ಪ್ರಾಧಿಕಾರದ ವಿದ್ಯಾರ್ಥಿನಿಯರು ಪಾಲ್ಗೊಂಡು ಚಿನ್ನದ ಪದಕ ಪಡೆದಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಡಗು ಜಿಲ್ಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇಲ್ಲಿನ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಿರುವುದು ಕೊಡಗು ಜಿಲ್ಲೆಗೆ ಹೆಮ್ಮೆ ತರುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಹಾಕಿ ಕ್ರೀಡೆಯಲ್ಲಿ ಮತ್ತಷ್ಟು ಸಾಧನೆ ಮಾಡುವಂತಾಗಬೇಕು ಎಂದು ಸಲಹೆ ಮಾಡಿದರು. ಭಾರತೀಯ ಕ್ರೀಡಾ ಪ್ರಾಧಿಕಾರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಮಿನಿ ಉನ್ನಿರಾಜ್, ಸಹಾಯಕ ಹಾಕಿ ತರಬೇತುದಾರರಾದ ಬಿ.ಎಂ.ಕೋಮಲ ಇತರರು ಇದ್ದರು.

The post ಭಾರತೀಯ ಕ್ರೀಡಾ ಪ್ರಾಧಿಕಾರದ ವಿದ್ಯಾರ್ಥಿನಿಯರಿಗೆ ಆತ್ಮೀಯ ಸನ್ಮಾನ appeared first on Hai Sandur kannada fortnightly news paper.

]]>
https://haisandur.com/2024/02/20/%e0%b2%ad%e0%b2%be%e0%b2%b0%e0%b2%a4%e0%b3%80%e0%b2%af-%e0%b2%95%e0%b3%8d%e0%b2%b0%e0%b3%80%e0%b2%a1%e0%b2%be-%e0%b2%aa%e0%b3%8d%e0%b2%b0%e0%b2%be%e0%b2%a7%e0%b2%bf%e0%b2%95%e0%b2%be%e0%b2%b0%e0%b2%a6/feed/ 0
ಹೋಂ ಸ್ಟೇ ನೋಂದಣಿ ಪ್ರಮಾಣ ಪತ್ರ ವಿತರಣೆ https://haisandur.com/2023/12/19/%e0%b2%b9%e0%b3%8b%e0%b2%82-%e0%b2%b8%e0%b3%8d%e0%b2%9f%e0%b3%87-%e0%b2%a8%e0%b3%8b%e0%b2%82%e0%b2%a6%e0%b2%a3%e0%b2%bf-%e0%b2%aa%e0%b3%8d%e0%b2%b0%e0%b2%ae%e0%b2%be%e0%b2%a3-%e0%b2%aa%e0%b2%a4/ https://haisandur.com/2023/12/19/%e0%b2%b9%e0%b3%8b%e0%b2%82-%e0%b2%b8%e0%b3%8d%e0%b2%9f%e0%b3%87-%e0%b2%a8%e0%b3%8b%e0%b2%82%e0%b2%a6%e0%b2%a3%e0%b2%bf-%e0%b2%aa%e0%b3%8d%e0%b2%b0%e0%b2%ae%e0%b2%be%e0%b2%a3-%e0%b2%aa%e0%b2%a4/#respond Tue, 19 Dec 2023 13:34:14 +0000 https://haisandur.com/?p=34113 ಮಡಿಕೇರಿ ಡಿ.19:-ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಆನ್‍ಲೈನ್ ಪೋರ್ಟಲ್ ನಲ್ಲಿ ನೂತನವಾಗಿ ನೋಂದಣಿಗೊಂಡಿರುವ ಹೋಂ-ಸ್ಟೇಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಮಂಗಳವಾರ ಕುಶಾಲನಗರದ ಶಾಸಕರ ಕಚೇರಿಯಲ್ಲಿ ಪ್ರಮಾಣ ಪತ್ರ ವಿತರಿಸಿದರು.ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಣಿಗೊಳ್ಳುವುದರ ಮುಖಾಂತರ ಉತ್ತಮ ಆದಾಯ ಗಳಿಸಲು ಮತ್ತು ಸುಸ್ಥಿರ ಮತ್ತು ಜವಾಬ್ದಾರಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೋರಿದರು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇ, ಹೋಟೆಲ್ ಮತ್ತು ರೆಸಾರ್ಟ್‍ಗಳು ಕೂಡ ನಿಯಮಗಳನ್ನು ಪಾಲಿಸಿ […]

The post ಹೋಂ ಸ್ಟೇ ನೋಂದಣಿ ಪ್ರಮಾಣ ಪತ್ರ ವಿತರಣೆ appeared first on Hai Sandur kannada fortnightly news paper.

]]>
ಮಡಿಕೇರಿ ಡಿ.19:-ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಆನ್‍ಲೈನ್ ಪೋರ್ಟಲ್ ನಲ್ಲಿ ನೂತನವಾಗಿ ನೋಂದಣಿಗೊಂಡಿರುವ ಹೋಂ-ಸ್ಟೇಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಮಂಗಳವಾರ ಕುಶಾಲನಗರದ ಶಾಸಕರ ಕಚೇರಿಯಲ್ಲಿ ಪ್ರಮಾಣ ಪತ್ರ ವಿತರಿಸಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಣಿಗೊಳ್ಳುವುದರ ಮುಖಾಂತರ ಉತ್ತಮ ಆದಾಯ ಗಳಿಸಲು ಮತ್ತು ಸುಸ್ಥಿರ ಮತ್ತು ಜವಾಬ್ದಾರಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೋರಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇ, ಹೋಟೆಲ್ ಮತ್ತು ರೆಸಾರ್ಟ್‍ಗಳು ಕೂಡ ನಿಯಮಗಳನ್ನು ಪಾಲಿಸಿ ಪ್ರವಾಸೋದ್ಯಮ ಇಲಾಖೆಯ ಕೆ.ಟಿ.ಟಿ.ಎಫ್ ಆನ್‍ಲೈನ್ ಪೋರ್ಟಲ್ ನಲ್ಲಿ ನೋಂದಾಯಿಸಿಗೊಳ್ಳುವಂತೆ ಕರೆ ನೀಡಿದರು. ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಅನಿತಾ ಭಾಸ್ಕರ್ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರಾದ ಜತೀನ್ ಬೋಪಣ್ಣ ಇತರರು ಉಪಸ್ಥಿತರಿದ್ದರು.

The post ಹೋಂ ಸ್ಟೇ ನೋಂದಣಿ ಪ್ರಮಾಣ ಪತ್ರ ವಿತರಣೆ appeared first on Hai Sandur kannada fortnightly news paper.

]]>
https://haisandur.com/2023/12/19/%e0%b2%b9%e0%b3%8b%e0%b2%82-%e0%b2%b8%e0%b3%8d%e0%b2%9f%e0%b3%87-%e0%b2%a8%e0%b3%8b%e0%b2%82%e0%b2%a6%e0%b2%a3%e0%b2%bf-%e0%b2%aa%e0%b3%8d%e0%b2%b0%e0%b2%ae%e0%b2%be%e0%b2%a3-%e0%b2%aa%e0%b2%a4/feed/ 0
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸಂಶೋಧನಾ ಪ್ರವೃತ್ತಿ ಬೆಳೆಸಲು ಜಿ.ಪಂ.ಸಿಇಒ ಕರೆ https://haisandur.com/2023/11/21/%e0%b2%b5%e0%b2%bf%e0%b2%a6%e0%b3%8d%e0%b2%af%e0%b2%be%e0%b2%b0%e0%b3%8d%e0%b2%a5%e0%b2%bf%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%b5%e0%b3%88%e0%b2%9c%e0%b3%8d%e0%b2%9e%e0%b2%be/ https://haisandur.com/2023/11/21/%e0%b2%b5%e0%b2%bf%e0%b2%a6%e0%b3%8d%e0%b2%af%e0%b2%be%e0%b2%b0%e0%b3%8d%e0%b2%a5%e0%b2%bf%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%b5%e0%b3%88%e0%b2%9c%e0%b3%8d%e0%b2%9e%e0%b2%be/#respond Tue, 21 Nov 2023 10:47:27 +0000 https://haisandur.com/?p=33936 ಮಡಿಕೇರಿ ನ.21:-ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಕಲಿಕೆಯೊಂದಿಗೆ ವೈಜ್ಞಾನಿಕ ಮನೋಭಾವ ಹಾಗೂ ತಾರ್ಕಿಕ ಪ್ರಜ್ಞೆಯೊಂದಿಗೆ ವಿಜ್ಞಾನದ ಅನ್ವೇಷಣೆ, ಸಂಶೋಧನಾ ಪ್ರವೃತ್ತಿ ಬೆಳೆಸುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡುವಂತೆ ಸಿದ್ಧಗೊಳಿಸಬೇಕು ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಕರೆ ನೀಡಿದ್ದಾರೆ.ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ (ಎನ್‍ಸಿಎಸ್‍ಟಿಸಿ), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪೆÇ್ರೀತ್ಸಾಹಕ ಸೊಸೈಟಿ (ಕೆ-ಸ್ಟೆಪ್ಸ್), ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ […]

The post ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸಂಶೋಧನಾ ಪ್ರವೃತ್ತಿ ಬೆಳೆಸಲು ಜಿ.ಪಂ.ಸಿಇಒ ಕರೆ appeared first on Hai Sandur kannada fortnightly news paper.

]]>
ಮಡಿಕೇರಿ ನ.21:-ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಕಲಿಕೆಯೊಂದಿಗೆ ವೈಜ್ಞಾನಿಕ ಮನೋಭಾವ ಹಾಗೂ ತಾರ್ಕಿಕ ಪ್ರಜ್ಞೆಯೊಂದಿಗೆ ವಿಜ್ಞಾನದ ಅನ್ವೇಷಣೆ, ಸಂಶೋಧನಾ ಪ್ರವೃತ್ತಿ ಬೆಳೆಸುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡುವಂತೆ ಸಿದ್ಧಗೊಳಿಸಬೇಕು ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಕರೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ (ಎನ್‍ಸಿಎಸ್‍ಟಿಸಿ), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪೆÇ್ರೀತ್ಸಾಹಕ ಸೊಸೈಟಿ (ಕೆ-ಸ್ಟೆಪ್ಸ್), ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ, ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ಘಟಕ, ಎನ್‍ಎಸ್‍ಎಸ್ ಘಟಕ ಹಾಗೂ ನಗರದ ಲಯನ್ಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಲಯನ್ಸ್ ಸಂಸ್ಥೆಯಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾಮಟ್ಟದ 31 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಜಿಲ್ಲಾಮಟ್ಟದ ಮಾರ್ಗದರ್ಶಿ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಅಧ್ಯಯನ ಮಾಡಬೇಕು. ವಿಜ್ಞಾನ ಸಮಾವೇಶವು ಮಕ್ಕಳ ಬೌದ್ಧಿಕ ವಿಕಸನ ಹಾಗೂ ಅನ್ವೇಷಣೆ ನಡೆಸಲು ಸಹಕಾರಿಯಾಗಿದೆ ಎಂದರು.
ಮಕ್ಕಳ ವಿಜ್ಞಾನ ಸಮಾವೇಶವು ವಿದ್ಯಾರ್ಥಿಗಳಲ್ಲಿ ಪರಿಸರದ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ಕಂಡುಕೊಂಡು ಉತ್ತಮ ಸಂಶೋದನೆಗಳನ್ನು ಕೈಗೊಳ್ಳಲು ನೆರವಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಸಂಶೋಧನೆ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಕಳಕಳಿಯನ್ನು ಬೆಳಸಲು ಸಹಾಯಕವಾಗುತ್ತದೆ ಎಂದು ಸಿಇಒ ವರ್ಣಿತ್ ನೇಗಿ ಹೇಳಿದರು.
ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವಿಜ್ಞಾನಿಗಳ ಅನ್ವೇಷಣೆ ಹಾಗೂ ಅವರ ಸಾಧನೆಗಳ ಬಗ್ಗೆ ಹೆಚ್ಚಿನ ಅಧ್ಯಯನ ಕೈಗೊಂಡು ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಅಸಕ್ತಿ ಬೆಳೆಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವಂತೆ ಅವರನ್ನು ಪ್ರೇರೇಪಿಸಬೇಕು. ಜಿಲ್ಲೆಯಲ್ಲಿ ವಿಜ್ಞಾನ ಪರಿಷತ್ತು ಕೈಗೊಳ್ಳುವ ವಿಜ್ಞಾನ ಹಾಗೂ ಪರಿಸರ ಚಟುವಟಿಕೆಗಳಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ಪೆÇ್ರೀತ್ಸಾಹಿಸಲಾಗುವುದು ಎಂದರು.
ಸಮಾವೇಶದ ಮಾರ್ಗದರ್ಶಿ ಕೈಪಿಡಿ ಬಿಡುಗಡೆಗೊಳಿಸಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ.ಚಂದ್ರಕಾಂತ್ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ ಮನೋಭಾವ ಬೆಳೆಸುವ ಮೂಲಕ ಅವರಲ್ಲಿ ಕಲಿಕಾ ಕುತೂಹಲ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗುವಂತೆ ಉತ್ತೇಜಿಸಬೇಕು ಎಂದರು.
ವಿದ್ಯಾರ್ಥಿಗಳು ಸೂಕ್ತ ಅವಕಾಶಗಳನ್ನು ಬಳಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು. ವಿದ್ಯಾರ್ಥಿಗಳು ಇಂತಹ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಶಿಕ್ಷಕರು ಪ್ರೇರೇಪಿಸಬೇಕು ಎಂದರು.

ಜಿಲ್ಲೆಯಲ್ಲಿ ವಿಜ್ಞಾನ ಸಂಘಟಕ ಟಿ.ಜಿ.ಪ್ರೇಮಕುಮಾರ್ ಮತ್ತು ತಂಡದವರು ಜಿಲ್ಲೆಯಲ್ಲಿ ವಿಜ್ಞಾನ ಹಾಗೂ ಪರಿಸರ ಕಾರ್ಯಕ್ರಮಗಳನ್ನು ಉತ್ತಮವಾಗಿ ಸಂಘಟಿಸುವ ಮೂಲಕ ಜನಜಾಗೃತಿ ಮೂಡಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಈ ಸಮಾವೇಶವು ಮಕ್ಕಳಲ್ಲಿ ವಿಜ್ಞಾನ ಕಲಿಕೆ ಹಾಗೂ ಸುತ್ತಲಿನ ಪರಿಸರ ಅಧ್ಯಯನ ಕೈಗೊಂಡು ಸ್ವತಃ ವೈಜ್ಞಾನಿಕ ಪರಿಹಾರ ಕಂಡುಕೊಳ್ಳುವಲ್ಲಿ ನೆರವಾಗಿದೆ ಎಂದರು.
ಜಿಲ್ಲೆಯಲ್ಲಿ ವಿಜ್ಞಾನ ಪರಿಷತ್ತು ವತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ವಿಜ್ಞಾನ ಹಾಗೂ ಪರಿಸರ ಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯವಾದುದು ಎಂದರು.
ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಉದ್ದೇಶ ವಿವರಿಸಿದ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ವಿಜ್ಞಾನ ಕಾರ್ಯಕ್ರಮದ ಸಂಘಟಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಮಕ್ಕಳ ವಿಜ್ಞಾನ ಸಮಾವೇಶವು ಮಕ್ಕಳಲ್ಲಿ ಮೂಲ ವಿಜ್ಞಾನ ಕಲಿಕೆಯೊಂದಿಗೆ ಸಮಾವೇಶದ ಕೇಂದ್ರ ವಿಷಯದಡಿ ತಮ್ಮ ಸುತ್ತಲಿನ ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಸ್ವತಃ ತಾವೇ ಪರಿಹಾರ ಕಂಡುಕೊಳ್ಳುವ ಮೂಲಕ ವೈಜ್ಞಾನಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಹಾಗೂ ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ರೂಪುಗೊಳ್ಳಲು ಉತ್ತಮ ವೇದಿಕೆ ಕಲ್ಪಿಸುತ್ತದೆ ಎಂದರು.
ಸುಸ್ಥಿರ ಅಭಿವೃದ್ಧಿಗೆ ವಿಜ್ಞಾನ-ತಂತ್ರಜ್ಞಾನ ಮತ್ತು ನವೀನ ಅನ್ವಯಗಳ ಬಳಕೆ ಆಶಯದೊಂದಿಗೆ ಆಯೋಜಿಸಿರುವ ಮಕ್ಕಳ ವಿಜ್ಞಾನ ಸಮಾವೇಶದ ಮೂಲಕ ನಾವು ಅಧ್ಯಯನ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಮಧುಕರ್ ಶೇಟ್ ಮಾತನಾಡಿ, ಇಂತಹ ವಿಜ್ಞಾನ ಸಮಾವೇಶಗಳು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕೆಗೆ ಹೆಚ್ಚಿನ ಪ್ರೇರೇಪಣೆ ನೀಡುತ್ತವೆ. ಇಂತಹ ಕಾರ್ಯಕ್ರಮಗಳಿಗೆ ತಮ್ಮ ಸಂಸ್ಥೆಯು ಪೆÇ್ರೀತ್ಸಾಹ ನೀಡುತ್ತದೆ ಎಂದರು.
ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸಂಪನ್ಮೂಲ ವ್ಯಕ್ತಿ ಜಿ.ಶ್ರೀನಾಥ್, ಶಿಕ್ಷಕರು ಮಕ್ಕಳಿಂದ ಸಮಾವೇಶದ ಕೇಂದ್ರ ವಿಷಯದಡಿ ವಿವಿಧ ಉಪ ವಿಷಯಗಳ ಕುರಿತು ಹೇಗೆ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ಸಿದ್ದಪಡಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಿದರು.
ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ (ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ) ಕೆ.ಎಂ.ಮರಿಸ್ವಾಮಿ ಅವರು ಅರಣ್ಯ, ವನ್ಯಜೀವಿಗಳು ಹಾಗೂ ಜೀವಿ ಪರಿಸರ ವ್ಯವಸ್ಥೆ ಕುರಿತು ಮಾಹಿತಿ ನೀಡಿದರು. ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ, ವಿಜ್ಞಾನ ಸಮಾವೇಶದ ರೂಪುರೇμÉ ಕುರಿತು ಮಾಹಿತಿ ನೀಡಿದರು.

ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಎಂ.ಮಹದೇವಸ್ವಾಮಿ, ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ ಸದಸ್ಯೆ ಕೆ.ಎಸ್.ಅಶ್ವಿನಿ ಇದ್ದರು.
ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಹಾಗೂ ಕೆಲವು ಶಾಲೆಗಳ ಕಿರಿಯ ವಿಜ್ಞಾನಿಗಳು ಇದ್ದರು. ಮಡಿಕೇರಿಯಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮ್ಮೇಳನ ದ ಕೈಪಿಡಿಯನ್ನು ಡಿಡಿಪಿಐ ಎಂ.ಚಂದ್ರಕಾಂತ್ ಬಿಡುಗಡೆಗೊಳಿಸಿದರು.

The post ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸಂಶೋಧನಾ ಪ್ರವೃತ್ತಿ ಬೆಳೆಸಲು ಜಿ.ಪಂ.ಸಿಇಒ ಕರೆ appeared first on Hai Sandur kannada fortnightly news paper.

]]>
https://haisandur.com/2023/11/21/%e0%b2%b5%e0%b2%bf%e0%b2%a6%e0%b3%8d%e0%b2%af%e0%b2%be%e0%b2%b0%e0%b3%8d%e0%b2%a5%e0%b2%bf%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%b5%e0%b3%88%e0%b2%9c%e0%b3%8d%e0%b2%9e%e0%b2%be/feed/ 0
ಆಯುಷ್ ಇಲಾಖೆ ನೂತನ ಕಟ್ಟಡ ಉದ್ಘಾಟಿಸಿದ ಶಾಸಕರು, 8 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ; ಆಯುರ್ವೇದ ಔಷಧಿಗೆ ತನ್ನದೇ ಮಹತ್ವ https://haisandur.com/2023/11/10/%e0%b2%86%e0%b2%af%e0%b3%81%e0%b2%b7%e0%b3%8d-%e0%b2%87%e0%b2%b2%e0%b2%be%e0%b2%96%e0%b3%86-%e0%b2%a8%e0%b3%82%e0%b2%a4%e0%b2%a8-%e0%b2%95%e0%b2%9f%e0%b3%8d%e0%b2%9f%e0%b2%a1-%e0%b2%89%e0%b2%a6/ https://haisandur.com/2023/11/10/%e0%b2%86%e0%b2%af%e0%b3%81%e0%b2%b7%e0%b3%8d-%e0%b2%87%e0%b2%b2%e0%b2%be%e0%b2%96%e0%b3%86-%e0%b2%a8%e0%b3%82%e0%b2%a4%e0%b2%a8-%e0%b2%95%e0%b2%9f%e0%b3%8d%e0%b2%9f%e0%b2%a1-%e0%b2%89%e0%b2%a6/#respond Fri, 10 Nov 2023 12:24:21 +0000 https://haisandur.com/?p=33862 ಮಡಿಕೇರಿ ನ.10:-ನಗರದ ಮಹದೇವ ಪೇಟೆಯ ಜಿಲ್ಲಾ ಆಯುಷ್ ಇಲಾಖೆ ವ್ಯಾಪ್ತಿಯ ನೂತನ ಕಚೇರಿಯನ್ನು ಶಾಸಕರಾದ ಡಾ.ಮಂತರ್‍ಗೌಡ ಅವರು ಶುಕ್ರವಾರ ಉದ್ಘಾಟಿಸಿದರು. 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಕಟ್ಟಡವನ್ನು ಶಾಸಕರು ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಮೈಸೂರು ಜೆಎಸ್‍ಎಸ್ ಆಯುರ್ವೇದ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಶಾನಂದ ಶರ್ಮ, ನಗರಸಭಾ ಸದಸ್ಯರಾದ ರಾಜೇಶ್ ಯಲ್ಲಪ್ಪ ಇತರರು ಇದ್ದರು.ಬಳಿಕ 8 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, […]

The post ಆಯುಷ್ ಇಲಾಖೆ ನೂತನ ಕಟ್ಟಡ ಉದ್ಘಾಟಿಸಿದ ಶಾಸಕರು, 8 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ; ಆಯುರ್ವೇದ ಔಷಧಿಗೆ ತನ್ನದೇ ಮಹತ್ವ appeared first on Hai Sandur kannada fortnightly news paper.

]]>
ಮಡಿಕೇರಿ ನ.10:-ನಗರದ ಮಹದೇವ ಪೇಟೆಯ ಜಿಲ್ಲಾ ಆಯುಷ್ ಇಲಾಖೆ ವ್ಯಾಪ್ತಿಯ ನೂತನ ಕಚೇರಿಯನ್ನು ಶಾಸಕರಾದ ಡಾ.ಮಂತರ್‍ಗೌಡ ಅವರು ಶುಕ್ರವಾರ ಉದ್ಘಾಟಿಸಿದರು.

35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಕಟ್ಟಡವನ್ನು ಶಾಸಕರು ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಮೈಸೂರು ಜೆಎಸ್‍ಎಸ್ ಆಯುರ್ವೇದ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಶಾನಂದ ಶರ್ಮ, ನಗರಸಭಾ ಸದಸ್ಯರಾದ ರಾಜೇಶ್ ಯಲ್ಲಪ್ಪ ಇತರರು ಇದ್ದರು.
ಬಳಿಕ 8 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಆಯುರ್ವೇದ ಔಷಧಿಗೆ ತನ್ನದೇ ಆದ ಮಹತ್ವ ಇದ್ದು, ಅದನ್ನು ಬಲಪಡಿಸುವತ್ತ ಗಮನಹರಿಸಬೇಕು ಎಂದು ಹೇಳಿದರು.

ಆಯುಷ್ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಆಯುರ್ವೇದ ವೈದ್ಯರ ಭರ್ತಿಗೆ ಕ್ರಮವಹಿಸಲಾಗುವುದು. ಹಾಗೆಯೇ ಆಯುರ್ವೇದ ಆಸ್ಪತ್ರೆಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ ಅವರು ಮಾತನಾಡಿ ಆಯುರ್ವೇದವು ವಿಶ್ವ ಆರೋಗ್ಯ ಸಂಸ್ಥೆಯಿಂದ ಸಾಂಪ್ರದಾಯಿಕ ಔಷಧ ವ್ಯವಸ್ಥೆಯಾಗಿ ಮಾನ್ಯತೆ ಪಡೆದಿದೆ. ಕೇಂದ್ರ ಆಯುಷ್ ಸಚಿವಾಲಯವು ಧನ್ವಂತರಿ ಜಯಂತಿಯನ್ನು 2016 ರ ಅಕ್ಟೋಬರ್, 26 ರಂದು ರಾಷ್ಟ್ರೀಯ ಆಯುರ್ವೇದ ದಿನವನ್ನಾಗಿ ಘೋಷಿಸಿದೆ ಎಂದು ತಿಳಿಸಿದರು.

‘ಪ್ರತಿದಿನ ಪ್ರತಿ ಮನೆಯಲ್ಲೂ ಆಯುರ್ವೇದ’. ಇದರ ಅಂಗವಾಗಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಮತ್ತು ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ರೈತರಿಗೆ, ಶಾಲೆಯ ಮಕ್ಕಳಿಗೆ ಮತ್ತು ಜನಸಾಮಾನ್ಯರಿಗೆ ವಿವಿಧ ಆಯುರ್ವೇದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಡಾ.ಅರುಣ್ ಸ್ವಾಗತಿಸಿದರು. ಡಾ.ಸರಸ್ವತಿ ಪ್ರಾರ್ಥಿಸಿದರು. ಡಾ.ಶ್ವೇತಾ ವಂದಿಸಿದರು.

The post ಆಯುಷ್ ಇಲಾಖೆ ನೂತನ ಕಟ್ಟಡ ಉದ್ಘಾಟಿಸಿದ ಶಾಸಕರು, 8 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ; ಆಯುರ್ವೇದ ಔಷಧಿಗೆ ತನ್ನದೇ ಮಹತ್ವ appeared first on Hai Sandur kannada fortnightly news paper.

]]>
https://haisandur.com/2023/11/10/%e0%b2%86%e0%b2%af%e0%b3%81%e0%b2%b7%e0%b3%8d-%e0%b2%87%e0%b2%b2%e0%b2%be%e0%b2%96%e0%b3%86-%e0%b2%a8%e0%b3%82%e0%b2%a4%e0%b2%a8-%e0%b2%95%e0%b2%9f%e0%b3%8d%e0%b2%9f%e0%b2%a1-%e0%b2%89%e0%b2%a6/feed/ 0
ಸರ್ಕಾರಿ ನೌಕರರು ಸಾರ್ವಜನಿಕರಿಗೆ ಸ್ಪಂದಿಸಿ: ಸುರೇಶ್ ಬಾಬು https://haisandur.com/2023/11/10/%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%bf-%e0%b2%a8%e0%b3%8c%e0%b2%95%e0%b2%b0%e0%b2%b0%e0%b3%81-%e0%b2%b8%e0%b2%be%e0%b2%b0%e0%b3%8d%e0%b2%b5%e0%b2%9c%e0%b2%a8%e0%b2%bf%e0%b2%95/ https://haisandur.com/2023/11/10/%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%bf-%e0%b2%a8%e0%b3%8c%e0%b2%95%e0%b2%b0%e0%b2%b0%e0%b3%81-%e0%b2%b8%e0%b2%be%e0%b2%b0%e0%b3%8d%e0%b2%b5%e0%b2%9c%e0%b2%a8%e0%b2%bf%e0%b2%95/#respond Fri, 10 Nov 2023 12:21:42 +0000 https://haisandur.com/?p=33858 ಮಡಿಕೇರಿ ನ.10:-ಸರ್ಕಾರಿ ನೌಕರರು ಸಾರ್ವಜನಿಕರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸಬೇಕು. ಅದನ್ನು ಬಿಟ್ಟು ಸತಾಯಿಸಬಾರದು ಎಂದು ಲೋಕಾಯುಕ್ತ ಎಸ್‍ಪಿ ಸುರೇಶ್ ಬಾಬು ಅವರು ಸಲಹೆ ಮಾಡಿದ್ದಾರೆ. ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿ ಅವರ ಸಮಸ್ಯೆಗಳನ್ನು ಆಲಿಸಿ ಬಳಿಕ ಅವರು ಮಾತನಾಡಿದರು.ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತುಂಬಾ ಎಚ್ಚರವಹಿಸಿ ನಿಯಮಾನುಸಾರಿ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸೇವೆಯನ್ನು ಸರ್ಕಾರದ ಸೇವೆ ಎಂದು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಸರ್ಕಾರಿ ಸೇವೆಗೆ ಸೇರಿದವರು ಸಾರ್ವಜನಿಕರ ಕರ್ತವ್ಯ ನಿರ್ವಹಿಸಲು […]

The post ಸರ್ಕಾರಿ ನೌಕರರು ಸಾರ್ವಜನಿಕರಿಗೆ ಸ್ಪಂದಿಸಿ: ಸುರೇಶ್ ಬಾಬು appeared first on Hai Sandur kannada fortnightly news paper.

]]>
ಮಡಿಕೇರಿ ನ.10:-ಸರ್ಕಾರಿ ನೌಕರರು ಸಾರ್ವಜನಿಕರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸಬೇಕು. ಅದನ್ನು ಬಿಟ್ಟು ಸತಾಯಿಸಬಾರದು ಎಂದು ಲೋಕಾಯುಕ್ತ ಎಸ್‍ಪಿ ಸುರೇಶ್ ಬಾಬು ಅವರು ಸಲಹೆ ಮಾಡಿದ್ದಾರೆ. ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಾರ್ವಜನಿಕರಿಂದ ದೂರು ಅರ್ಜಿ ಸ್ವೀಕರಿಸಿ ಅವರ ಸಮಸ್ಯೆಗಳನ್ನು ಆಲಿಸಿ ಬಳಿಕ ಅವರು ಮಾತನಾಡಿದರು.
ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತುಂಬಾ ಎಚ್ಚರವಹಿಸಿ ನಿಯಮಾನುಸಾರಿ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸೇವೆಯನ್ನು ಸರ್ಕಾರದ ಸೇವೆ ಎಂದು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಸರ್ಕಾರಿ ಸೇವೆಗೆ ಸೇರಿದವರು ಸಾರ್ವಜನಿಕರ ಕರ್ತವ್ಯ ನಿರ್ವಹಿಸಲು ಬಂದಿರುವುದು ಎಂಬುದನ್ನು ಅರಿತುಕೊಳ್ಳಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. ಕಳೆದ ಲೋಕಾಯುಕ್ತ ಸಭೆ ಸಂದರ್ಭದಲ್ಲಿ ಸ್ವೀಕರಿಸಿದ ಅರ್ಜಿಗಳ ಪಾಲನಾ ವರದಿಯನ್ನು ಪರಿಶೀಲಿಸಿದರು.
ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರು ಮಾತನಾಡಿ ಸಕಾರದ ಎಲ್ಲಾ ಕಚೇರಿಗಳಲ್ಲಿ ಹಾಜರಾತಿ ಸಂಬಂಧ ಬಯೋಮೆಟ್ರಿಕ್ ಅಳವಡಿಸುವಂತೆ ಸೂಚಿಸಿದರು.

ಶುಕ್ರವಾರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ದೂರು ಅರ್ಜಿ ಸ್ವೀಕಾರ ಸಂದರ್ಭದಲ್ಲಿ ಖಾತೆ ಬದಲಾವಣೆ, ಸರ್ವೇ ಮಾಡುವುದು, ಮತ್ತಿತರ ಅರ್ಜಿಗಳು ಸಲ್ಲಿಕೆಯಾದವು.
ಸಾರ್ವಜನಿಕರಿಂದ 8 ಅರ್ಜಿಗಳು ಸ್ವೀಕೃತವಾಗಿದ್ದು, ಅರ್ಜಿಗಳನ್ನು ಪರಿಶೀಲಿಸಿ 3 ಅರ್ಜಿದಾರರಿಗೆ ಲೋಕಾಯುಕ್ತ ಸಂಸ್ಥೆಯ ನಮೂನೆ 1 ಮತ್ತು 2 ನ್ನು ನೀಡಲಾಯಿತು. ಲೋಕಾಯುಕ್ತ ಪೊಲೀಸ್ ಇನ್ಸ್‍ಪೆಕ್ಟರ್ ಲೋಕೇಶ್, ತಹಶೀಲ್ದಾರ್ ಪ್ರವೀಣ್ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.

The post ಸರ್ಕಾರಿ ನೌಕರರು ಸಾರ್ವಜನಿಕರಿಗೆ ಸ್ಪಂದಿಸಿ: ಸುರೇಶ್ ಬಾಬು appeared first on Hai Sandur kannada fortnightly news paper.

]]>
https://haisandur.com/2023/11/10/%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%bf-%e0%b2%a8%e0%b3%8c%e0%b2%95%e0%b2%b0%e0%b2%b0%e0%b3%81-%e0%b2%b8%e0%b2%be%e0%b2%b0%e0%b3%8d%e0%b2%b5%e0%b2%9c%e0%b2%a8%e0%b2%bf%e0%b2%95/feed/ 0
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ https://haisandur.com/2023/11/10/%e0%b2%95%e0%b3%8a%e0%b2%a1%e0%b2%97%e0%b3%81-%e0%b2%b5%e0%b3%88%e0%b2%a6%e0%b3%8d%e0%b2%af%e0%b2%95%e0%b3%80%e0%b2%af-%e0%b2%b5%e0%b2%bf%e0%b2%9c%e0%b3%8d%e0%b2%9e%e0%b2%be%e0%b2%a8%e0%b2%97%e0%b2%b3/ https://haisandur.com/2023/11/10/%e0%b2%95%e0%b3%8a%e0%b2%a1%e0%b2%97%e0%b3%81-%e0%b2%b5%e0%b3%88%e0%b2%a6%e0%b3%8d%e0%b2%af%e0%b2%95%e0%b3%80%e0%b2%af-%e0%b2%b5%e0%b2%bf%e0%b2%9c%e0%b3%8d%e0%b2%9e%e0%b2%be%e0%b2%a8%e0%b2%97%e0%b2%b3/#respond Fri, 10 Nov 2023 12:18:44 +0000 https://haisandur.com/?p=33855 ಮಡಿಕೇರಿ ನ.10:-ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯಲ್ಲಿ ಕನ್ನಡ ರಾಜ್ಯೋತ್ಸವ 2023 ರ ಪ್ರಯುಕ್ತ “ಕಲಾಸ್ಮೃತಿ” ಕನ್ನಡ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಖ್ಯಾತ ಚಲನಚಿತ್ರ ನಟರು ಹಾಗೂ ಹಾಸ್ಯ ಕಲಾವಿದರಾದ ಮಿಮಿಕ್ರಿ ದಯಾನಂದ್ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ಪ್ರತಿಯೊಬ್ಬರಲ್ಲೂ ಆರೋಗ್ಯಕರ ನಗು ಇರಬೇಕು, ನೋವಿನ ನಗು ಇರಬಾರದು, ಮಹಿಳೆಯರಿಗೆ ಗೌರವ ಕೊಡಬೇಕು, ಹಸಿವು, ನೋವು ಅವಮಾನ ಎದುರಿಸಿದವರು ಜೀವನದಲ್ಲಿ ದೊಡ್ಡ ದೊಡ್ಡ ಸಾಧನೆ ಮಾಡುತ್ತಾರೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮರಾಜನ್ […]

The post ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ appeared first on Hai Sandur kannada fortnightly news paper.

]]>
ಮಡಿಕೇರಿ ನ.10:-ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯಲ್ಲಿ ಕನ್ನಡ ರಾಜ್ಯೋತ್ಸವ 2023 ರ ಪ್ರಯುಕ್ತ “ಕಲಾಸ್ಮೃತಿ” ಕನ್ನಡ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಖ್ಯಾತ ಚಲನಚಿತ್ರ ನಟರು ಹಾಗೂ ಹಾಸ್ಯ ಕಲಾವಿದರಾದ ಮಿಮಿಕ್ರಿ ದಯಾನಂದ್ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ಪ್ರತಿಯೊಬ್ಬರಲ್ಲೂ ಆರೋಗ್ಯಕರ ನಗು ಇರಬೇಕು, ನೋವಿನ ನಗು ಇರಬಾರದು, ಮಹಿಳೆಯರಿಗೆ ಗೌರವ ಕೊಡಬೇಕು, ಹಸಿವು, ನೋವು ಅವಮಾನ ಎದುರಿಸಿದವರು ಜೀವನದಲ್ಲಿ ದೊಡ್ಡ ದೊಡ್ಡ ಸಾಧನೆ ಮಾಡುತ್ತಾರೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮರಾಜನ್ ಕೆ, ಅವರು ಮಾತನಾಡಿ ವೈದ್ಯಕೀಯ ಕಾಲೇಜಿನಲ್ಲಿ ಈ ರೀತಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿರುವ ಬಗ್ಗೆ ಶ್ಲಾಘಿಸಿ ಒಬ್ಬ ವ್ಯಕ್ತಿಗೆ ಹೆತ್ತ ತಾಯಿ ಯಾವ ರೀತಿ ಶ್ರೇಷ್ಟಳೊ ಅದೇ ರೀತಿಯಾಗಿ ಪ್ರತಿಯೊಬ್ಬರಿಗೂ ತನ್ನ ನೆಲ, ತನ್ನ ಭಾಷೆ ತನ್ನ ರಾಜ್ಯ ಶ್ರೇಷ್ಟವಾಗಿದ್ದು ಯಾವುದೇ ಕಾರಣಕ್ಕೂ ಮರೆಯಬಾರದು ಎಲ್ಲರಿಗೂ ಗೌರವ ಕೊಡಬೇಕು ಆಚಾರ ವಿಚಾರಗಳನ್ನು ಬಿಟ್ಟು ಕೊಡಬಾರದು ಯಾರ ಮನಸ್ಸಿಗೂ ಗಾಯ ಮಾಡುವ ರೀತಿ ಮಾತನಾಡಬಾರದು. ಕನ್ನಡ ರಾಜ್ಯೋತ್ಸವವನ್ನು ಕನ್ನಡಿಗರು ಮಾತ್ರ ಅಲ್ಲದೆ ಈ ರಾಜ್ಯದಲ್ಲಿರುವ ಪ್ರತಿಯೊಬ್ಬರು ಕೂಡ ಸಂಭ್ರಮಿಸಬೇಕೆಂದರು.

ತೆನ್ನಿರ ಮೈನಾ ಅವರು ಮಾತನಾಡಿ ವೈದ್ಯಕೀಯ ಕಾಲೇಜಿನಲ್ಲಿ ದೊಡ್ಡದಾಗಿ ಕನ್ನಡ ಹಬ್ಬವನ್ನು ಆಚರಿಸಿಸುತ್ತಿರುವುದಕ್ಕೆ ಕಾರ್ಯಕ್ರಮದ ಆಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಅವರಾದ ಡಾ.ಕಾರ್ಯಪ್ಪ ಕೆ.ಬಿ ಅವರು ಮಾತನಾಡಿ ಪ್ರತಿ ವರ್ಷ ಸಂಸ್ಥೆಯಲ್ಲಿ ಕನ್ನಡ ಹಬ್ಬವನ್ನು ವೈಭವದಿಂದ ಆಚರಿಸುತ್ತಾ ಬರುತಿದ್ದು ಇದೇ ರೀತಿಯಲ್ಲಿ ಮುಂದುವರೆಯಲಿ ಹಾಗೂ ಮುಂದಿನ ಪೀಳಿಗೆಯವರಿಗೂ ಕೂಡ ಕನ್ನಡದ ಮಹತ್ವವನ್ನು ತಿಳಿಸಲು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಿಮಿಕ್ರಿ ದಯಾನಂದ ಅವರನ್ನು ಸನ್ಮಾನಿಸಲಾಯಿತು. ನಂತರ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಫರ್ಧೆಗಳಲ್ಲಿ ವಿಜಯಿಶಾಲಿಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ನಂತರ ಮಿಮಿಕ್ರಿ ದಯಾನಂದ್ ಅವರು ತಮ್ಮ ಮಿಮಿಕ್ರಿ ಹಾಸ್ಯದ ಮೂಲಕ ಎಲ್ಲರನ್ನು ಹಾಸ್ಯದ ಮೂಲಕ ರಂಜಿಸಿದರು, ನಂತರ ವಿದ್ಯಾರ್ಥಿಗಳಿಂದ ವಿವಿಧ ಅತ್ಯಾಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಮುಖ್ಯ ಆಡಳಿತಾಧಿಕಾರಿಗಳಾದ ಸ್ವಾಮಿ ಎ.ಎಲ್, ಪ್ರಾಂಶುಪಾಲರಾದ ವಿಶಾಲ್ ಕುಮಾರ್, ವೈದ್ಯಕೀಯ ಅಧೀಕ್ಷಕರಾದ ಡಾ ರೂಪೇಶ್ ಗೋಪಾಲ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ನಂಜುಂಡಯ್ಯ ಎನ್, ಸ್ಥಾನೀಯ ವೈದ್ಯಾಧಿಕಾರಿಗಳಾದ ಸತೀಶ್ ವಿ.ಎಸ್, ಕನ್ನದ ಸಂಘ ಸಂಚಾಲಕಾರದ ಡಾ.ಮಂಜುನಾಥ್, ರವರು ಹಾಜರಿದ್ದರು.

The post ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ appeared first on Hai Sandur kannada fortnightly news paper.

]]>
https://haisandur.com/2023/11/10/%e0%b2%95%e0%b3%8a%e0%b2%a1%e0%b2%97%e0%b3%81-%e0%b2%b5%e0%b3%88%e0%b2%a6%e0%b3%8d%e0%b2%af%e0%b2%95%e0%b3%80%e0%b2%af-%e0%b2%b5%e0%b2%bf%e0%b2%9c%e0%b3%8d%e0%b2%9e%e0%b2%be%e0%b2%a8%e0%b2%97%e0%b2%b3/feed/ 0
ಅ.28 ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ https://haisandur.com/2023/10/20/%e0%b2%85-28-%e0%b2%b0%e0%b2%82%e0%b2%a6%e0%b3%81-%e0%b2%ae%e0%b2%b9%e0%b2%b0%e0%b3%8d%e0%b2%b7%e0%b2%bf-%e0%b2%b5%e0%b2%be%e0%b2%b2%e0%b3%8d%e0%b2%ae%e0%b3%80%e0%b2%95%e0%b2%bf-%e0%b2%9c%e0%b2%af/ https://haisandur.com/2023/10/20/%e0%b2%85-28-%e0%b2%b0%e0%b2%82%e0%b2%a6%e0%b3%81-%e0%b2%ae%e0%b2%b9%e0%b2%b0%e0%b3%8d%e0%b2%b7%e0%b2%bf-%e0%b2%b5%e0%b2%be%e0%b2%b2%e0%b3%8d%e0%b2%ae%e0%b3%80%e0%b2%95%e0%b2%bf-%e0%b2%9c%e0%b2%af/#respond Fri, 20 Oct 2023 10:55:39 +0000 https://haisandur.com/?p=33686 ಮಡಿಕೇರಿ ಅ.20:-ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್, 28 ರಂದು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಅರ್ಥಪೂರ್ಣವಾಗಿ ಆಯೋಜಿಸುವ ಸಂಬಂಧ ಪೂರ್ವಭಾವಿ ಸಭೆಯು ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮ ಆಯೋಜನೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಮಾತನಾಡಿ ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಆಯೋಜಿಸಬೇಕು. ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಐಟಿಡಿಪಿ ಇಲಾಖಾ ಅಧಿಕಾರಿ ಸೂಚಿಸಿದರು. ಮಹರ್ಷಿ ವಾಲ್ಮೀಕಿ ಕುರಿತು ಮಾತನಾಡುವ […]

The post ಅ.28 ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ appeared first on Hai Sandur kannada fortnightly news paper.

]]>
ಮಡಿಕೇರಿ ಅ.20:-ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್, 28 ರಂದು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಅರ್ಥಪೂರ್ಣವಾಗಿ ಆಯೋಜಿಸುವ ಸಂಬಂಧ ಪೂರ್ವಭಾವಿ ಸಭೆಯು ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮ ಆಯೋಜನೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಮಾತನಾಡಿ ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಆಯೋಜಿಸಬೇಕು. ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಐಟಿಡಿಪಿ ಇಲಾಖಾ ಅಧಿಕಾರಿ ಸೂಚಿಸಿದರು.

ಮಹರ್ಷಿ ವಾಲ್ಮೀಕಿ ಕುರಿತು ಮಾತನಾಡುವ ಭಾಷಣಕಾರರನ್ನು ಕರೆಸುವುದು. ಎಸ್‍ಎಸ್‍ಎಲ್‍ಸಿ, ಪಿಯುಸಿ ಪದವಿಯಲ್ಲಿ ಹೆಚ್ಚು ಅಂಕ ಪಡೆದವರನ್ನು ಸನ್ಮಾನಿಸುವುದು ಸೇರಿದಂತೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.

ಸಭೆಯ ಆರಂಭದಲ್ಲಿ ಮಾತನಾಡಿದ ಕುಡಿಯರ ಮುತ್ತಪ್ಪ ಅವರು ಪರಿಶಿಷ್ಟ ಪಂಗಡದಲ್ಲಿ ಹಲವು ಸಮಾಜಗಳಿದ್ದು, ವಾಲ್ಮೀಕಿ ಸಮಾಜದ ಜೊತೆ ಯರವ, ಕುಡಿಯ, ಮಲೆ ಕುಡಿಯ, ಸೋಲಿಗ, ಕಾಡುಕುರುಬ, ಜೇನುಕುರುಬ, ಬೆಟ್ಟ ಕುರುಬ ಹೀಗೆ ಹಲವು ಸಮಾಜಗಳಿದ್ದು, ಇತರ ಸಮಾಜದಲ್ಲಿ ದುಡಿದವರನ್ನು ಗುರುತಿಸಿ ಸನ್ಮಾನಿಸುವಂತಾಗಬೇಕು ಎಂದು ಸಲಹೆ ಮಾಡಿದರು.

ವಾಲ್ಮೀಕಿ ಸಮಾಜದ ಅಧ್ಯಕ್ಷರಾದ ಅಶೋಕ ಅವರು ಮಾತನಾಡಿ ಕುಶಾಲನಗರದಲ್ಲಿ 2014 ರಲ್ಲಿ ವಾಲ್ಮೀಕಿ ಭವನ ನಿರ್ಮಾಣ ಮಾಡಲಾಗಿದೆ. ಆದರೆ ಈ ಭವನ ಸಾರ್ವಜನಿಕರ ಉಪಯೋಗಕ್ಕೆ ಬರುತ್ತಿಲ್ಲ. ವಾಲ್ಮೀಕಿ ಭವನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ, ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ ಎಂದು ಅವರು ಸಭೆಯ ಗಮನಕ್ಕೆ ತಂದರು.

ಗಾಂಧಿ ಮಂಟಪದಿಂದ ಜನರಲ್ ತಿಮ್ಮಯ್ಯ ವೃತ್ತದ ಮಾರ್ಗ ಕಾವೇರಿ ಕಲಾಕ್ಷೇತ್ರದವರೆಗೆ ಮೆರವಣಿಗೆಗೆ ಅವಕಾಶ ಮಾಡಬೇಕು ಎಂದು ಅವರು ಕೋರಿದರು.

ಆದಿವಾಸಿ ಪ್ರಮುಖರಾದ ಸುಬ್ರಮಣಿ ಅವರು ಮಾತನಾಡಿ ಆದಿವಾಸಿಗಳಿಗೆ ಸರ್ಕಾರದ ಸೌಲಭ್ಯಗಳು ತಲುಪಬೇಕು. ಇಂದಿಗೂ ಸಹ ಹಾಡಿಯಲ್ಲಿ ವಾಸಿಸುವ ಆದಿವಾಸಿಗಳ ಬದುಕಿನ ಪರಿಸ್ಥಿತಿಯನ್ನು ಅವಲೋಕನ ಮಾಡಬೇಕು ಎಂದರು.

ಪ್ರಮುಖರಾದ ಗಂಗಾಧರ ಅವರು ಮಾತನಾಡಿ ಕಳೆದ ಬಾರಿ ಎಸ್‍ಎಸ್‍ಎಲ್‍ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದವರನ್ನು ಸನ್ಮಾನಿಸುವಂತಾಗಬೇಕು. ಕಳೆದ ಬಾರಿ ಜಿಲ್ಲೆಗೆ ಮೂರನೇ ಸ್ಥಾನ ಪಡೆದ ವಿದ್ಯಾರ್ಥಿಯನ್ನು ಸನ್ಮಾನಕ್ಕೆ ಪರಿಗಣಿಸಿಲ್ಲ. ಮುಂದೆ ಈ ರೀತಿ ಆಗದಂತೆ ಗಮನಹರಿಸಬೇಕು ಎಂದು ಸಲಹೆ ಮಾಡಿದರು.

ಸಂಗೊಳ್ಳಿ ರಾಯಣ್ಣ ವೇದಿಕೆಯ ಜಿಲ್ಲಾಧ್ಯಕ್ಷರಾದ ಪ್ರಭಾಕರ ಅವರು ಮಾತನಾಡಿ ಪೋಷಕರು ಇಲ್ಲದ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವಂತಾಗಬೇಕು ಎಂದು ಸಲಹೆ ಮಾಡಿದರು.

ಪ್ರಮುಖರಾದ ಮುತ್ತಮ್ಮ ಅವರು ಮಾತನಾಡಿ ಗಿರಿಜನ ಆಶ್ರಮ ಶಾಲೆಗಳಲ್ಲಿ ಜೇನುಕುರುಬ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಗಿರಿಜನ ಆಶ್ರಮ ಶಾಲೆ ಹೆಸರು ಬದಲಿಗೆ ವಾಲ್ಮೀಕಿ ಆಶ್ರಮ ಶಾಲೆ ಎಂದು ಹೆಸರು ಬದಲಿಸುವುದು ಸರಿಯಲ್ಲ. ಈ ಹಿಂದಿನಂತೆಯೇ ಗಿರಿಜನ ಆಶ್ರಮ ಶಾಲೆ ಎಂದು ಇರಬೇಕು ಎಂದು ಅವರು ಸಲಹೆ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಸರ್ಕಾರವು ಕಾಲ ಕಾಲಕ್ಕೆ ಹೊರಡಿಸುವ ನಿರ್ದೇಶನವನ್ನು ಪಾಲಿಸುವುದು ಅಧಿಕಾರಿಗಳ ಕೆಲಸವಾಗಿದೆ. ಈ ನಿಟ್ಟಿನಲ್ಲಿ ತಮ್ಮ ಅಭಿಪ್ರಾಯವನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

ಅನಿಲ್ ರಾವ್ ಅವರು ಮಾತನಾಡಿ ಜಿಲ್ಲೆಯಲ್ಲಿ ಮೂರು ಲ್ಯಾಂಪ್ ಸೊಸೈಟಿ ಇದ್ದು, ಲ್ಯಾಂಪ್ ಸೊಸೈಟಿ ಅಧ್ಯಕ್ಷರು ಮತ್ತು ಸದಸ್ಯರನ್ನು ಆಹ್ವಾನಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಪೌರಾಯುಕ್ತರಾದ ವಿಜಯ್, ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಜಿ.ಪಂ.ಎಂಜಿನಿಯರ್ ಸುರೇಶ್ ಕುಮಾರ್, ಮುತ್ತುರಾಜು, ಇತರರು ಇದ್ದರು.

The post ಅ.28 ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ appeared first on Hai Sandur kannada fortnightly news paper.

]]>
https://haisandur.com/2023/10/20/%e0%b2%85-28-%e0%b2%b0%e0%b2%82%e0%b2%a6%e0%b3%81-%e0%b2%ae%e0%b2%b9%e0%b2%b0%e0%b3%8d%e0%b2%b7%e0%b2%bf-%e0%b2%b5%e0%b2%be%e0%b2%b2%e0%b3%8d%e0%b2%ae%e0%b3%80%e0%b2%95%e0%b2%bf-%e0%b2%9c%e0%b2%af/feed/ 0
ಪ್ರಥಮ ಚಿಕಿತ್ಸೆ ಬಾಕ್ಸ್, ಮಾಸ್ಕ್, ಬಕೆಟ್‍ಗಳ ವಿತರಣೆ https://haisandur.com/2023/10/20/%e0%b2%aa%e0%b3%8d%e0%b2%b0%e0%b2%a5%e0%b2%ae-%e0%b2%9a%e0%b2%bf%e0%b2%95%e0%b2%bf%e0%b2%a4%e0%b3%8d%e0%b2%b8%e0%b3%86-%e0%b2%ac%e0%b2%be%e0%b2%95%e0%b3%8d%e0%b2%b8%e0%b3%8d-%e0%b2%ae%e0%b2%be/ https://haisandur.com/2023/10/20/%e0%b2%aa%e0%b3%8d%e0%b2%b0%e0%b2%a5%e0%b2%ae-%e0%b2%9a%e0%b2%bf%e0%b2%95%e0%b2%bf%e0%b2%a4%e0%b3%8d%e0%b2%b8%e0%b3%86-%e0%b2%ac%e0%b2%be%e0%b2%95%e0%b3%8d%e0%b2%b8%e0%b3%8d-%e0%b2%ae%e0%b2%be/#respond Fri, 20 Oct 2023 10:52:56 +0000 https://haisandur.com/?p=33683 ಮಡಿಕೇರಿ ಅ.20:-ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ಮಡಿಕೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿಯ ಕಸಬಾ ವೃತ್ತ ಮತ್ತು ಚರಂಬಾಣೆ ವೃತ್ತಕ್ಕೆ ಸಂಬಂಧಿಸಿದ 52 ಅಂಗನವಾಡಿ ಕೇಂದ್ರಗಳಿಗೆ ಪ್ರಥಮ ಚಿಕಿತ್ಸೆ ಬಾಕ್ಸ್, ಮಾಸ್ಕ್, ಬಕೆಟ್‍ಗಳನ್ನು ಅಂಗನವಾಡಿ ಕೇಂದ್ರದ ಬಳಕೆಗಾಗಿ ವಿತರಣೆ ಮಾಡಲಾಯಿತು. ಮಾತೃವಂದನ ಯೋಜನೆ ಅಡಿ ಕಾರ್ಯಕರ್ತರೆ ಮೊಬೈಲ್‍ನಲ್ಲಿ ಅರ್ಜಿಗಳನ್ನು ದಾಖಲೆ ಮಾಡುವ ಕುರಿತು ತರಬೇತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ರೆಡ್‍ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ರವೀಂದ್ರ, ಕಾರ್ಯದರ್ಶಿ ಮುರುಳಿ ಅವರು ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ […]

The post ಪ್ರಥಮ ಚಿಕಿತ್ಸೆ ಬಾಕ್ಸ್, ಮಾಸ್ಕ್, ಬಕೆಟ್‍ಗಳ ವಿತರಣೆ appeared first on Hai Sandur kannada fortnightly news paper.

]]>
ಮಡಿಕೇರಿ ಅ.20:-ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ಮಡಿಕೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿಯ ಕಸಬಾ ವೃತ್ತ ಮತ್ತು ಚರಂಬಾಣೆ ವೃತ್ತಕ್ಕೆ ಸಂಬಂಧಿಸಿದ 52 ಅಂಗನವಾಡಿ ಕೇಂದ್ರಗಳಿಗೆ ಪ್ರಥಮ ಚಿಕಿತ್ಸೆ ಬಾಕ್ಸ್, ಮಾಸ್ಕ್, ಬಕೆಟ್‍ಗಳನ್ನು ಅಂಗನವಾಡಿ ಕೇಂದ್ರದ ಬಳಕೆಗಾಗಿ ವಿತರಣೆ ಮಾಡಲಾಯಿತು.

ಮಾತೃವಂದನ ಯೋಜನೆ ಅಡಿ ಕಾರ್ಯಕರ್ತರೆ ಮೊಬೈಲ್‍ನಲ್ಲಿ ಅರ್ಜಿಗಳನ್ನು ದಾಖಲೆ ಮಾಡುವ ಕುರಿತು ತರಬೇತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ರೆಡ್‍ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ರವೀಂದ್ರ, ಕಾರ್ಯದರ್ಶಿ ಮುರುಳಿ ಅವರು ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ಜಿಲ್ಲಾಮಟ್ಟದ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಿದ್ದು, ಎಲ್ಲಾ ಫಲಾನುಭವಿಗಳಿಗೆ ಇದು ತಲುಪುವಂತೆ ಸಹಕರಿಸಲು ಕೋರಿದರು.

ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು ಮಾತನಾಡಿ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಸಹಕಾರ, ಮಾರ್ಗದರ್ಶನ ನೀಡಲು ಕೋರಿದರು.
ಇಲಾಖೆಯ ಯೋಜನೆಗಳನ್ನು ಸೂಕ್ತ ಸಮಯದಲ್ಲಿ ಸೂಕ್ತ ಫಲಾನುಭವಿಗಳಿಗೆ ತಲುಪಿಸಲು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಪೆÇೀಷನ್ ಅಭಿಯಾನ ಜಿಲ್ಲಾ ಸಂಯೋಜಕರಾದ ಕಾವ್ಯ, ಮಾತೃ ವಂದನ ಸಂಯೋಜಕರಾದ ಚೈತ್ರ, ಕಸಬಾ ಮತ್ತು ಚೇರಂಬಾಣೆ ವೃತ್ತದ ಅಂಗನವಾಡಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

The post ಪ್ರಥಮ ಚಿಕಿತ್ಸೆ ಬಾಕ್ಸ್, ಮಾಸ್ಕ್, ಬಕೆಟ್‍ಗಳ ವಿತರಣೆ appeared first on Hai Sandur kannada fortnightly news paper.

]]>
https://haisandur.com/2023/10/20/%e0%b2%aa%e0%b3%8d%e0%b2%b0%e0%b2%a5%e0%b2%ae-%e0%b2%9a%e0%b2%bf%e0%b2%95%e0%b2%bf%e0%b2%a4%e0%b3%8d%e0%b2%b8%e0%b3%86-%e0%b2%ac%e0%b2%be%e0%b2%95%e0%b3%8d%e0%b2%b8%e0%b3%8d-%e0%b2%ae%e0%b2%be/feed/ 0
ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ತೊಡಗಿಸಿಕೊಳ್ಳಿ: ಪಿ.ಜಿ.ಆರ್.ಸಿಂಧ್ಯ https://haisandur.com/2023/09/20/%e0%b2%b5%e0%b2%bf%e0%b2%a6%e0%b3%8d%e0%b2%af%e0%b2%be%e0%b2%b0%e0%b3%8d%e0%b2%a5%e0%b2%bf%e0%b2%97%e0%b2%b3%e0%b3%81-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%b6%e0%b2%bf%e0%b2%95%e0%b3%8d/ https://haisandur.com/2023/09/20/%e0%b2%b5%e0%b2%bf%e0%b2%a6%e0%b3%8d%e0%b2%af%e0%b2%be%e0%b2%b0%e0%b3%8d%e0%b2%a5%e0%b2%bf%e0%b2%97%e0%b2%b3%e0%b3%81-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%b6%e0%b2%bf%e0%b2%95%e0%b3%8d/#respond Wed, 20 Sep 2023 15:32:14 +0000 https://haisandur.com/?p=33445 ಮಡಿಕೇರಿ ಸೆ.20 :-ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆ ಸಹಕಾರಿಯಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಜ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯ ಅವರು ತಿಳಿಸಿದ್ದಾರೆ. ನಗರದ ಸ್ಕೌಟ್ಸ್ ಮತ್ತು ಗೈಡ್ಸ್‍ನ ಪೊನ್ನಮ್ಮ ಕುಶಾಲಪ್ಪ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಬುಧವಾರ ಏರ್ಪಡಿಸಲಾಗಿದ್ದ ಮಾಹಿತಿ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಾಲಾ ಕಾಲೇಜುಗಳಲ್ಲಿ […]

The post ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ತೊಡಗಿಸಿಕೊಳ್ಳಿ: ಪಿ.ಜಿ.ಆರ್.ಸಿಂಧ್ಯ appeared first on Hai Sandur kannada fortnightly news paper.

]]>
ಮಡಿಕೇರಿ ಸೆ.20 :-ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆ ಸಹಕಾರಿಯಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಜ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯ ಅವರು ತಿಳಿಸಿದ್ದಾರೆ.

ನಗರದ ಸ್ಕೌಟ್ಸ್ ಮತ್ತು ಗೈಡ್ಸ್‍ನ ಪೊನ್ನಮ್ಮ ಕುಶಾಲಪ್ಪ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಬುಧವಾರ ಏರ್ಪಡಿಸಲಾಗಿದ್ದ ಮಾಹಿತಿ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಓದು ಬರಹ ಕಲಿಯುವುದರ ಜೊತೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಶಿಸ್ತು, ಶ್ರದ್ಧೆ, ಸಮಯಪ್ರಜ್ಞೆ, ಸಂಯಮ, ಪರಿಸರ ಕಾಳಜಿ ಬೆಳೆಸಿಕೊಂಡು ಜೀವನದಲ್ಲಿ ಉತ್ತಮ ನಾಗರಿಕರಾಗಿ ಬದುಕಲು ಅನುಕೂಲವಾಗಲಿದೆ ಎಂದು ಪಿ.ಜಿ.ಆರ್.ಸಿಂಧ್ಯ ಅವರು ಹೇಳಿದರು.’

ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಸಾಮಾಜಿಕ ಕಾಳಜಿ ಅರಿವನ್ನು ಮೂಡಿಸುವ ಕೆಲಸ ಹೆಚ್ಚಾಗಬೇಕು. ಪರಿಸರ ಜಾಗೃತಿ, ಸ್ವಚ್ಛತೆ ಅತ್ಯಂತ ಮಹತ್ವದ್ದಾಗಿದ್ದು, ಆರೋಗ್ಯಕ್ಕೆ ಯೋಗ ಅತ್ಯವಶ್ಯಕವಾಗಿದ್ದು, ಯೋಗದ ಪರಿಕಲ್ಪನೆಯನ್ನು ಮಕ್ಕಳಲ್ಲಿ ಮೂಡಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಜ್ಯ ಆಯುಕ್ತರು ತಿಳಿಸಿದರು.
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕವನ್ನು ಸ್ಥಾಪಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ನಾಗರಿಕ ಪ್ರಜ್ಷೆ ಬೆಳೆಸಬೇಕು ಎಂದು ಪಿ.ಜಿ.ಆರ್.ಸಿಂಧ್ಯ ಅವರು ಹೇಳಿದರು.
ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಷ್ಟ್ರೀಯ ಸಮಿತಿ ಮಾಜಿ ನಿರ್ದೇಶಕರಾದ ಸುಕುಮಾರನ್ ಅವರು ಮಾತನಾಡಿ ಸಂಸ್ಥೆಯ ಮೂಲಕ ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಉತ್ತಮ ಜೀವನ ಕೌಶಲ್ಯವನ್ನು ಕಲಿಸುವುದರೊಂದಿಗೆ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಸಹಕಾರಿಯಾಗಿದೆ ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ ಅವರು ಮಾತನಾಡಿ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಘಟಕಗಳನ್ನು ಪ್ರಾರಂಭಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ರಾಷ್ಟ್ರಪ್ರೇಮ ಬೆಳೆಸಲು ಕ್ರಮವಹಿಸಲಾಗುವುದು ಎಂದರು.
ಸ್ಕೌಟ್ಸ್ ಸಂಸ್ಥೆಯ ರಾಜ್ಯ ಆಯುಕ್ತರಾದ ಪ್ರಭಾಕರ ಭಟ್ ಅವರು ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್‍ನ ತತ್ವಗಳು, ಶಿಕ್ಷಣ ಇಲಾಖೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‍ನ ಅನುಷ್ಠಾನ ಕುರಿತು ಮಾಹಿತಿ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಮಾತನಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮಗಳನ್ನು ಉತ್ತಮವಾಗಿ ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಗೈಡ್ಸ್ ಸಂಸ್ಥೆಯ ತರಬೇತಿ ಆಯುಕ್ತೆ ಮೈಥಿಲಿ ರಾವ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುರಿತು ತರಬೇತಿ ನೀಡಿದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕøತರು ಹಾಗೂ ಜಿಲ್ಲಾ ಗೈಡ್ಸ್ ಸಂಸ್ಥೆಯ ಆಯುಕ್ತರಾದ ರಾಣಿ ಮಾಚಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ದೊಡ್ಡೇಗೌಡ, ಪ್ರಕಾಶ್, ಮಂಜೇಶ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಡಿಡಿಪಿಐ ಕಚೇರಿಯ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಕೃಷ್ಣಪ್ಪ, ಸ್ಕೌಟ್ಸ್ ಮತ್ತು ಗೈಡ್ಸ್‍ನ ಸ್ಥಾನಿಕ ಆಯುಕ್ತರಾದ ಎಚ್.ಆರ್.ಮುತ್ತಪ್ಪ, ಗುರುರಾಜ್, ಜಿಲ್ಲಾ ಖಜಾಂಜಿ ಪುಷ್ಪವೇಣಿ, ಸಹ ಕಾರ್ಯದರ್ಶಿ ಬೊಳ್ಳಜ್ಜಿರ ಅಯ್ಯಪ್ಪ, ಬುಲ್‍ಬುಲ್ ವಿಭಾಗದ ಮುಖ್ಯಸ್ಥರಾದ ಡೈಸಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಟಿ.ಜಿ.ಪ್ರೇಮ್ ಕುಮಾರ್, ಸಮನ್ವಯಾಧಿಕಾರಿ ದಮಯಂತಿ, ಹರಿಣಿ, ವಿಜಯ್, ಸುಲೋಚನ, ವನಜಾಕ್ಷಿ, ಹೇಮಂತ್, ಗುರುರಾಜ್, ಗಾಯತ್ರಿ, ಧನಂಜಯ, ಉಷಾರಾಣಿ, ನಳಿನಾಕ್ಷಿ, ಇತರರು ಇದ್ದರು. ಸದಾಶಿವ ಪಲ್ಲೇದ್ ಸ್ವಾಗತಿಸಿದರು. ಅಲೀಮಾ ನಿರೂಪಿಸಿದರು, ಉಷಾರಾಣಿ ವಂದಿಸಿದರು.

The post ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ತೊಡಗಿಸಿಕೊಳ್ಳಿ: ಪಿ.ಜಿ.ಆರ್.ಸಿಂಧ್ಯ appeared first on Hai Sandur kannada fortnightly news paper.

]]>
https://haisandur.com/2023/09/20/%e0%b2%b5%e0%b2%bf%e0%b2%a6%e0%b3%8d%e0%b2%af%e0%b2%be%e0%b2%b0%e0%b3%8d%e0%b2%a5%e0%b2%bf%e0%b2%97%e0%b2%b3%e0%b3%81-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%b6%e0%b2%bf%e0%b2%95%e0%b3%8d/feed/ 0