Warning: Cannot modify header information - headers already sent by (output started at /home1/a360dlo1/public_html/haisandur.com/index.php:1) in /home1/a360dlo1/public_html/haisandur.com/wp-includes/feed-rss2.php on line 8
ಶಿವಮೊಗ್ಗ Archives - Hai Sandur kannada fortnightly news paper https://haisandur.com/category/ಶಿವಮೊಗ್ಗ/ Hai Sandur News.Karnataka India Fri, 01 Mar 2024 12:00:11 +0000 en-US hourly 1 https://haisandur.com/wp-content/uploads/2022/01/cropped-IMG_20211107_051359-32x32.jpg ಶಿವಮೊಗ್ಗ Archives - Hai Sandur kannada fortnightly news paper https://haisandur.com/category/ಶಿವಮೊಗ್ಗ/ 32 32 ಕುಡಿಯುವ ನೀರಿಗೆ ಆದ್ಯತೆ-ಯೋಜನೆಗಳ ಪ್ರಗತಿ ಸಾಧಿಸಲು ಸಂಸದರ ಸೂಚನೆ https://haisandur.com/2024/03/01/%e0%b2%95%e0%b3%81%e0%b2%a1%e0%b2%bf%e0%b2%af%e0%b3%81%e0%b2%b5-%e0%b2%a8%e0%b3%80%e0%b2%b0%e0%b2%bf%e0%b2%97%e0%b3%86-%e0%b2%86%e0%b2%a6%e0%b3%8d%e0%b2%af%e0%b2%a4%e0%b3%86-%e0%b2%af%e0%b3%8b/ https://haisandur.com/2024/03/01/%e0%b2%95%e0%b3%81%e0%b2%a1%e0%b2%bf%e0%b2%af%e0%b3%81%e0%b2%b5-%e0%b2%a8%e0%b3%80%e0%b2%b0%e0%b2%bf%e0%b2%97%e0%b3%86-%e0%b2%86%e0%b2%a6%e0%b3%8d%e0%b2%af%e0%b2%a4%e0%b3%86-%e0%b2%af%e0%b3%8b/#respond Fri, 01 Mar 2024 12:00:10 +0000 https://haisandur.com/?p=34724 ಶಿವಮೊಗ್ಗ, ಮಾರ್ಚ್ 01:ಕುಡಿಯುವ ನೀರಿಗೆ ಆದ್ಯತೆ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ಸೇರಿದಂತೆ ಎಲ್ಲ ಯೋಜನೆಗಳಲ್ಲಿ ಉತ್ತಮ ಪ್ರಗತಿ ಸಾಧಿಸುವಂತೆ ಸಂಸದರಾದ ಬಿ.ವೈ ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರಗತಿಯಲ್ಲಿರುವ ಕಾಮಗಾರಿಗೆ ಚುನಾವಣೆ ಅಡಚಣೆ ಆಗುವುದಿಲ್ಲ. ಆದ್ದರಿಂದ ಇಲಾಖೆಗಳು ಸಮನ್ವಯ ಸಾಧಿಸಿಕೊಂಡು ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಪ್ರಗತಿ ಸಾಧಿಸಬೇಕು ಎಂದು ಸೂಚನೆ ನೀಡಿದರು.ವಿಕಲಚೇತನರಿಗೆ ವಾಹನ ನೀಡಿರಿ : […]

The post ಕುಡಿಯುವ ನೀರಿಗೆ ಆದ್ಯತೆ-ಯೋಜನೆಗಳ ಪ್ರಗತಿ ಸಾಧಿಸಲು ಸಂಸದರ ಸೂಚನೆ appeared first on Hai Sandur kannada fortnightly news paper.

]]>
ಶಿವಮೊಗ್ಗ, ಮಾರ್ಚ್ 01:ಕುಡಿಯುವ ನೀರಿಗೆ ಆದ್ಯತೆ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ಸೇರಿದಂತೆ ಎಲ್ಲ ಯೋಜನೆಗಳಲ್ಲಿ ಉತ್ತಮ ಪ್ರಗತಿ ಸಾಧಿಸುವಂತೆ ಸಂಸದರಾದ ಬಿ.ವೈ ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರಗತಿಯಲ್ಲಿರುವ ಕಾಮಗಾರಿಗೆ ಚುನಾವಣೆ ಅಡಚಣೆ ಆಗುವುದಿಲ್ಲ. ಆದ್ದರಿಂದ ಇಲಾಖೆಗಳು ಸಮನ್ವಯ ಸಾಧಿಸಿಕೊಂಡು ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಪ್ರಗತಿ ಸಾಧಿಸಬೇಕು ಎಂದು ಸೂಚನೆ ನೀಡಿದರು.
ವಿಕಲಚೇತನರಿಗೆ ವಾಹನ ನೀಡಿರಿ : ವಿಕಲಚೇತನರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯಡಿ ಮಂಜೂರಾದ ರೆಟ್ರೋವ್ಹೀಲ್ ಫಿಟ್ಟೆಡ್ ಮೋಟಾರ್ ಸೈಕಲ್‍ಗಳನ್ನು ಚುನಾವಣೆ ಆಗುವವರೆಗೆ ಕಾಯದೆ ಮಾರ್ಚ್ 5 ಅಥವಾ 6 ರಂದು ಕಾರ್ಯಕ್ರಮ ಆಯೋಜಿಸಿ ನೀಡುವಂತೆ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಅಂಗವಿಕಲ ಕಲ್ಯಾಣಾಧಿಕಾರಿ ಚಂದ್ರಪ್ಪ ಮಾತನಾಡಿ ಪ್ರಸ್ತುತ 53 ವಾಹನಗಳು ಸಿದ್ದವಿದ್ದು ನೀಡಲಾಗುವುದು. ರಾಜ್ಯ ಸರ್ಕಾರದಿಂದ 140 ವಾಹನಗಳಿಗೆ ಮಂಜೂರಾತಿ ದೊರೆತಿದೆ. ಹಾಗೂ ಕೇಂದ್ರ ಸರ್ಕಾರದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಜಿಲ್ಲೆಯ ವಿಕಲಚೇತನರಿಗೆ ಮತ್ತು ಹಿರಿಯ ನಾಗರೀಕರಿಗೆ ಸಾಧನ ಸಲಕರಣೆ ವಿತರಿಸುವ ಶಿಬಿರವನ್ನು ಶೀಘ್ರದಲ್ಲೇ ನಡೆಸಲಾಗುವುದು ಎಂದು ತಿಳಿಸಿದರು.
ಬಿಎಸ್‍ಎನ್‍ಎಲ್ ನೆಟ್‍ವರ್ಕ್ : ಮೊಬೈಲ್ ನೆಟ್‍ವರ್ಕ್ ಮೂಲಭೂತ ಅವಶ್ಯಕತೆಗಳಲ್ಲಿ ಒಂದಾಗಿದ್ದು ಕೇಂದ್ರ ಸರ್ಕಾರ ಗುಡ್ಡಗಾರು, ನೆಟ್‍ವರ್ಕ್ ಇಲ್ಲದ ಸುಮಾರು 252 ಗ್ರಾಮಗಳಿಗೆ ನೆಟ್‍ವರ್ಕ್ ಟವರ್ ಸ್ಥಾಪಿಸಲು ಮಂಜೂರಾತಿ ನೀಡಿದೆ. ಇದುವರೆಗೆ 161 ಕಡೆ ಕೆಲಸ ಆರಂಭಿಸಲು ಸಿದ್ದವಾಗಿದೆ. 44 ಪ್ರಗತಿಯಲ್ಲಿದ್ದು ಮತ್ತು 14 ಕಾಮಗಾರಿ ಪೂರ್ಣಗೊಂಡಿದೆ. ಅರಣ್ಯ ಮತ್ತು ಮೆಸ್ಕಾಂ ಇಲಾಖೆಯವರು ಸಹಕರಿಸಬೇಕು. ಸಾಕಷ್ಟು ಬಾರಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದರೂ ಪ್ರಗತಿ ಏನೂ ಸಾಲದು. ಆದ್ದರಿಂದ ಅರಣ್ಯ ಮತ್ತು ಮೆಸ್ಕಾಂ ಅಧಿಕಾರಿಗಳು ಸಮನ್ವಯದೊಂದಿಗೆ ಸಹಕರಿಸಬೇಕು. ಅಪರ ಜಿಲ್ಲಾಧಿಕಾರಿಗಳು ಈ ಕಡೆ ವಿಶೇಷ ಗಮನ ಹರಿಸಬೇಕೆಂದರು.

ಕುಡಿಯುವ ನೀರು ಯಾವತ್ತಿಗೂ ಮೊದಲನೇ ಆದ್ಯತೆ. ಜಲಜೀವನ ಮಿಷನ್ ಅಡಿಯಲ್ಲಿ ಒಟ್ಟು 126 ಓವರ್‍ಹೆಡ್ ಟ್ಯಾಂಕ್‍ಗೆ ಮಂಜೂರಾತಿ ದೊರೆತಿದೆ. ಸೊರಬ, ತೀರ್ಥಹಳ್ಳಿ, ಹೊಸನಗರ ಭಾಗದಲ್ಲಿ ಅರಣ್ಯ ಇಲಾಖೆಯಿಂದ ಒಪ್ಪಿಗೆ ಸಿಗುತ್ತಿಲ್ಲ. ಹೊಸನಗರದ ಬ್ರಹ್ಮೇಶ್ವರದಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆ ಅಕ್ಕಪಕ್ಕ ಇರುವ ಜಾಗದಲ್ಲಿ ಬೋರ್ ಕೊರೆಸಿ 5 ಇಂಚು ನೀರು ಬಿದ್ದಿದ್ದು ಅರಣ್ಯ ಇಲಾಖೆಯವರು ಬೋರ್ ಮುಚ್ಚಿಹಾಕಿರುವುದು ಸರಿಯಲ್ಲ. ಕುಡಿಯುವ ನೀರಿಗೆ ಆದ್ಯತೆ ನೀಡಬೇಕು ಎಂದರು.

ರೈಲ್ವೇ ಇಲಾಖೆಯವರು ಭದ್ರಾವತಿ ಆರ್‍ಓಬಿ ಕೆಲಸವನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಈ ತಿಂಗಳ ಕೊನೆಗೆ ಕೆಲಸ ಮುಗಿಸಿ ಹಸ್ತಾಂತರಿಸಬೇಕು. ವಿದ್ಯಾನಗರ ಆರ್‍ಓಬಿ ಗೆ ಅಂಡರ್‍ಪಾಸ್ ಮಾಡುವ ಬಗ್ಗೆ ಶೀಘ್ರದಲ್ಲಿ ಪರಿಶೀಲಿಸಿ ಕೆಲಸ ಶುರು ಮಾಡಬೇಕೆಂದರು.

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಜಿಲ್ಲೆಯಲ್ಲಿ 62 ಸಾವಿರ ಅಭ್ಯರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಅರ್ಜಿ ಹಾಕುವಲ್ಲಿ ಜಿಲ್ಲೆ ಮುಂಚೂಣಿಯಲ್ಲಿದೆ. 995 ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ದಿ ತರಬೇತಿ ಆಗಿದೆ. ಮೊದಲನೇ ಸ್ಟೇಜ್‍ನಲ್ಲಿ 23 ಸಾವಿರ ಅಭ್ಯರ್ಥಿಗಳು ಹಾಗೂ ಎರಡನೇ ಸ್ಟೇಜ್‍ನಲ್ಲಿ 1976 ಅಭ್ಯರ್ಥಿಗಳ ಅನುಮೋದನೆಯಾಗಿದೆ ಆಗಿದೆ. ಎಲ್ಲ ಅಭ್ಯರ್ಥಿಗಳ ಅನುಮೋದನೆಗೆ ಅಪರ ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲೇಶಪ್ಪ ಮಾತನಾಡಿ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ 2018-19 ನೇ ಸಾಗಿಗೆ ರೂ.4 ಕೋಟಿ ಅನುದಾನ ಬಿಡುಗಡೆಯಾಗಿದ್ದು 122 ಕಾಮಗಾರಿ ಅನುಮೋದನೆಗೊಂಡು 3.4 ಕೋಟಿ ವೆಚ್ಚವಾಗಿದ್ದು 113 ಕಾಮಗಾರಿ ಪೂರ್ಣವಾಗಿದೆ. 2019-20 ನೇ ಸಾಲಿನಲ್ಲಿ 5.4 ಕೋಟಿ ಬಿಡುಗಡೆಯಾಗಿದ್ದು 3.8 ಕೋಟಿ ಖರ್ಚಾಗಿದೆ. 2020-21 ರಲ್ಲಿ 6.6 ಕೋಟಿ ಬಿಡುಗಡೆಯಾಗಿದು 4.2 ಕೋಟಿ ಖರ್ಚಾಗಿದೆ ಎಂದು ಮಾಹಿತಿ ನೀಡಿದರು.

ಸಂಸದರು, ಆದರ್ಶ ಗ್ರಾಮ ಯೋಜನೆಯಡಿ ನಿಗದಿತ ಅವಧಿಯೊಳಗೆ ಪ್ರಗತಿ ಸಾಧಿಸಬೇಕು. ಕೆಲವು ತಾಲ್ಲೂಕುಗಳಲ್ಲಿ ಪ್ರಗತಿ ಕಡಿಮೆ ಇದ್ದು ಸಮಿತಿ ನಾಮ ನಿರ್ದೇಶಿತ ಸದಸ್ಯರು ಭೇಟಿ ನೀಡಿ ಪರಿಶೀಲಿಸುವಂತೆ ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೊರಬ ಶೇ.70 ಮತ್ತು ಶಿಕಾರಿಪುರ ಶೇ.87 ಪ್ರಗತಿ ಸಾಧಿಸಲಾಗಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ 41333, ಹಿಂಗಾರಿನಲ್ಲಿ 258 ರೈತರು ನೋಂದಣಿಯಾಗಿದ್ದು ಇದೀಗ ಮಧ್ಯಂತರ ಪರಿಹಾರವಾಗಿ 16956 ರೈತರು ಒಟ್ಟು 6.96 ಕೋಟಿ ಪಡೆದಿದ್ದಾರೆ. 2023-24 ನೇ ಸಾಲಿಗೆ ಮಣ್ಣು ಮಾದರಿ ಸಂಗ್ರಹಣೆ ಗುರಿ 5 ಸಾವಿರ ಇದ್ದು 7251 ಮಾದರಿ ಸಂಗ್ರಹಣೆ ಮಾಡಲಾಗಿದೆ ಎಂದು ತಿಳಿಸಿದರು.

ಅಮೃತ ಯೋಜನೆಯಡಿ ಕುಡಿಯುವ ನೀರು ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾದ ಮೊತ್ತವನ್ನು ನಿಗದಿತ ಅವಧಿಯೊಳಗೆ ಬಳಕೆ ಮಾಡಿಕೊಂಡು ಪ್ರಗತಿ ಸಾಧಿಸುವಂತೆ ತಿಳಿಸಿದ ಅವರು ಪ್ರಧಾನಮಂತ್ರಿ ಖನಿಜ ಕ್ಷೇತ್ರ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಡಿಎಂಎಫ್ ಟಿ ಕ್ರಿಯಾ ಯೋಜನೆಯನ್ನು ಪರಿಶೀಲಿಸುವುದಾಗಿ ತಿಳಿಸಿದರು.

ಸ್ಮಾರ್ಟ್‍ಸಿಟಿ ಎಂ.ಡಿ ಮಾಯಣ್ಣಗೌಡ, ಸ್ಮಾರ್ಟ್ ಸಿಟಿ ಯೋಜನೆಯಡಿ 2 ಕಾಮಗಾರಿಗಳು ಬಾಕಿ ಇವೆ. 2024 ರ ಜೂನ್ ಮಾಹೆಗೆ ಸ್ಮಾರ್ಟ್‍ಸಿಟಿ ಯೋಜನೆ ಮುಕ್ತಾಯಗೊಳ್ಳಲಿದ್ದು 10ವರ್ಷ ಎಎಂಸಿ ಇರಲಿದೆ. ತುಂಗಾ ನದಿಯಲ್ಲಿ ಬೇಸಿಗೆ ಕಾಲ ಸೇರಿದಂತೆ ಎಲ್ಲ ಕಾಲದಲ್ಲಿ ಬೋಟಿಂಗ್ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.

ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಮಾತನಾಡಿ ಆಗುಂಬೆ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಪ್ಯಾಚ್‍ವರ್ಕ್ ಕಳಪೆಯಾಗಿದ್ದು ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಿಸಿದ ಅಧಿಕಾರಿಗಳು ಶೀಘ್ರದಲ್ಲಿ ಇದನ್ನು ಗುಣಮಟ್ಟದೊಂದಿಗೆ ಸರಿಪಡಿಸಬೇಕೆಂದರು.

ಸಭೆಗೆ ಹಾಜರಾಗದ ಕೆಆರ್‍ಐಡಿಎಲ್ ಕಾರ್ಯಪಾಲಕ ಇಂಜಿನಿಯರ್‍ರವರಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಸಮಿತಿ ನಾಮನಿರ್ದೇಶಿತ ಸದಸ್ಯರಾದ ಸುರೇಶ್, ನಾಗರತ್ನ, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಎಸ್‍ಪಿ ಮಿಥುನ್ ಕುಮಾರ್, ಎಡಿಸಿ ಸಿದ್ದಲಿಂಗರೆಡ್ಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

The post ಕುಡಿಯುವ ನೀರಿಗೆ ಆದ್ಯತೆ-ಯೋಜನೆಗಳ ಪ್ರಗತಿ ಸಾಧಿಸಲು ಸಂಸದರ ಸೂಚನೆ appeared first on Hai Sandur kannada fortnightly news paper.

]]>
https://haisandur.com/2024/03/01/%e0%b2%95%e0%b3%81%e0%b2%a1%e0%b2%bf%e0%b2%af%e0%b3%81%e0%b2%b5-%e0%b2%a8%e0%b3%80%e0%b2%b0%e0%b2%bf%e0%b2%97%e0%b3%86-%e0%b2%86%e0%b2%a6%e0%b3%8d%e0%b2%af%e0%b2%a4%e0%b3%86-%e0%b2%af%e0%b3%8b/feed/ 0
ಹೊಸ ರಸ್ತೆಗಳಿಂದ ಶಿವಮೊಗ್ಗದಲ್ಲಿ ಸಮಗ್ರ ಅಭಿವೃದ್ದಿ ಆಗಲಿದೆ : ಕೇಂದ್ರ ಸಚಿವ ನಿತಿನ್ ಗಡ್ಕರಿ https://haisandur.com/2024/02/22/%e0%b2%b9%e0%b3%8a%e0%b2%b8-%e0%b2%b0%e0%b2%b8%e0%b3%8d%e0%b2%a4%e0%b3%86%e0%b2%97%e0%b2%b3%e0%b2%bf%e0%b2%82%e0%b2%a6-%e0%b2%b6%e0%b2%bf%e0%b2%b5%e0%b2%ae%e0%b3%8a%e0%b2%97%e0%b3%8d%e0%b2%97%e0%b2%a6/ https://haisandur.com/2024/02/22/%e0%b2%b9%e0%b3%8a%e0%b2%b8-%e0%b2%b0%e0%b2%b8%e0%b3%8d%e0%b2%a4%e0%b3%86%e0%b2%97%e0%b2%b3%e0%b2%bf%e0%b2%82%e0%b2%a6-%e0%b2%b6%e0%b2%bf%e0%b2%b5%e0%b2%ae%e0%b3%8a%e0%b2%97%e0%b3%8d%e0%b2%97%e0%b2%a6/#respond Thu, 22 Feb 2024 14:23:24 +0000 https://haisandur.com/?p=34664 ಶಿವಮೊಗ್ಗ, ಫೆಬ್ರವರಿ 22:ಶಿವಮೊಗ್ಗದಲ್ಲಿ ಹೊಸ ರಸ್ತೆಗಳಿಂದಾಗಿ ವ್ಯಾಪಾರ, ಕೈಗಾರಿಕೆ, ಶಿಕ್ಷಣ ಸೇರಿದಂತೆ ಸಮಗ್ರ ಕಲ್ಯಾಣ ಆಗಲಿದೆ ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಸ್ತೆ ಸಾರಿಗೆ ಮತ್ತು ಹೆದ್ದಾರಿ, ಭಾರತ ಸರ್ಕಾರ ಹಾಗೂ ಪಿಡಬ್ಲ್ಯ ಡಿ ಇಲಾಖೆ ಶಿವಮೊಗ್ಗ ವತಿಯಿಂದ ಇಂದು ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿಗಳ ಚಾಲನೆ ಮತ್ತು ಶಂಕುಸ್ಥಾಪನೆಗೊಳಿಸುವ ಕಾರ್ಯಕ್ರಮದಲ್ಲಿ ಏಳು ಜಿಲ್ಲೆಗಳಿಗೆ ಸಂಬಂಧಿಸಿದ ರೂ.6200 ಕೋಟಿ ಮೊತ್ತದ ಒಟ್ಟು 300 ಕಿ.ಮೀ […]

The post ಹೊಸ ರಸ್ತೆಗಳಿಂದ ಶಿವಮೊಗ್ಗದಲ್ಲಿ ಸಮಗ್ರ ಅಭಿವೃದ್ದಿ ಆಗಲಿದೆ : ಕೇಂದ್ರ ಸಚಿವ ನಿತಿನ್ ಗಡ್ಕರಿ appeared first on Hai Sandur kannada fortnightly news paper.

]]>
ಶಿವಮೊಗ್ಗ, ಫೆಬ್ರವರಿ 22:ಶಿವಮೊಗ್ಗದಲ್ಲಿ ಹೊಸ ರಸ್ತೆಗಳಿಂದಾಗಿ ವ್ಯಾಪಾರ, ಕೈಗಾರಿಕೆ, ಶಿಕ್ಷಣ ಸೇರಿದಂತೆ ಸಮಗ್ರ ಕಲ್ಯಾಣ ಆಗಲಿದೆ ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಸ್ತೆ ಸಾರಿಗೆ ಮತ್ತು ಹೆದ್ದಾರಿ, ಭಾರತ ಸರ್ಕಾರ ಹಾಗೂ ಪಿಡಬ್ಲ್ಯ ಡಿ ಇಲಾಖೆ ಶಿವಮೊಗ್ಗ ವತಿಯಿಂದ ಇಂದು ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿಗಳ ಚಾಲನೆ ಮತ್ತು ಶಂಕುಸ್ಥಾಪನೆಗೊಳಿಸುವ ಕಾರ್ಯಕ್ರಮದಲ್ಲಿ ಏಳು ಜಿಲ್ಲೆಗಳಿಗೆ ಸಂಬಂಧಿಸಿದ ರೂ.6200 ಕೋಟಿ ಮೊತ್ತದ ಒಟ್ಟು 300 ಕಿ.ಮೀ ಉದ್ದದ ಒಟ್ಟು 18 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ರೂ.2,138.30 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಪ್ರಗತಿಶೀಲ, ಸಮೃದ್ದ ರಾಜ್ಯವಾಗಿದ್ದು, ಸ್ವಾಭಾವಿಕ ಸಂಪತ್ತಿನಿಂದ ಹಿಡಿದು ಐಟಿ ವಲಯದವರೆಗೆ ವಿಕಾಸ ಹೊಂದುತ್ತಿದೆ. ಈ ವಿಕಾಸದ ವೇಗ ಹೆಚ್ಚಿದಷ್ಟು ದೇಶದ ಅಭಿವೃದ್ದಿಗೆ ಸಹಕಾರಿಯಾಗುತ್ತದೆ. ನಮ್ಮ ರಾಷ್ಟ್ರವು ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಬೇಕೆಂಬುದು ನಮ್ಮ ಪ್ರಧಾನಿಯವರ ಕನಸಾಗಿದ್ದು ಆತ್ಮ ನಿರ್ಭರ ಭಾರತ ನಮ್ಮೆಲ್ಲರ ಗುರಿಯಾಗಬೇಕು ಎಂದರು.

ಸಂಸದರಾದ ಬಿ.ವೈ.ರಾಘವೇಂದ್ರರವರು ಜಿಲ್ಲೆಗೆ ಅವಶ್ಯಕವಾದ ಕೆಲಸಗಳ ಕುರಿತು ನಿರಂತರವಾಗಿ ತಮ್ಮ ಸಂಪರ್ಕದಲ್ಲಿದ್ದು ಕಾಮಗಾರಿಗಳನ್ನು ತಂದಿದ್ದಾರೆ. ಶಿವಮೊಗ್ಗದಲ್ಲಿ ಹೊಸ ರಸ್ತೆಗಳಿಂದ ವ್ಯಾಪಾರ, ಕೈಗಾರಿಕೆ ಸೇರಿದಂತೆ ಸಮಗ್ರ ಅಭಿವೃದ್ದಿ ಆಗಲಿದೆ.

ರಸ್ತೆಗಳನ್ನು ರಾ.ಹೆದ್ದಾರಿಯಾಗಿ ಉನ್ನತೀಕರಿಸಲು ಹಾಗೂ ಹೊಸ ರಸ್ತೆ, ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದ್ದು ಭೂ ಸ್ವಾಧೀನ ಮತ್ತು ಅರಣ್ಯ ಇಲಾಖೆ ಅನುಮತಿ ಪಡೆದು ವೇಗದಲ್ಲಿ ಕೆಲಸಗಳು ಆಗಬೇಕು. ಸಾಗರ-ಮರಕುಟುಕ ವೆರೆಗೆ ರಸ್ತೆ ಅಗಲೀಕರಣಕ್ಕೆ ಮಂಜೂರಾತಿ ನೀಡಲಾಗಿದೆ. ರಾ.ಹೆ 169 ಎ ರ ಆಗುಂಬೆಯಲ್ಲಿ ಟನಲ್ ನಿರ್ಮಾಣಕ್ಕೆ ಕೋರಿದ್ದು ಇದನ್ನು ಪರಿಶೀಲಿಸಿ ಮಂಜೂರಾತಿ ನೀಡಲಾಗುವುದು. 3 ಕಡೆ ಹೈಮಾಸ್ಟ್ ಲೈಟ್‍ಗಳನ್ನು ಕೇಳಿದ್ದು ಆದೇಶ ನೀಡಲಾಗುವುದು ಎಂದರು

ಬೆಂಗಳೂರು ರಿಂಗ್ ರಸ್ತೆ- ಜನವರಿ 2025 ರಲ್ಲಿ ಪೂರ್ಣ:
ಬೆಂಗಳೂರು ಸಂಚಾರ ದಟ್ಟಣೆ ಕಡಿಮೆಗೊಳಿಸಲು 17 ಸಾವಿರ ಕೋಟಿ ವೆಚ್ಚದ ರಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಸಾರಿಗೆ ಸಮಸ್ಯೆ ನಿವಾರಣೆ ಜತೆಗೆ ರಾಜ್ಯದ ಜನರಿಗೆ ಅನುಕೂಲವಾಗಲಿದೆ. ಜನವರಿ 2025 ರ ವೇಳೆಗೆ ಆರು ಪ್ಯಾಕೆಜ್ ಗಳ ರಿಂಗ್ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು.
ಕರ್ನಾಟಕದ ಬಂದರುಗಳು ಅಭಿವೃದ್ಧಿಗೊಂಡರೆ ರಾಜ್ಯದ ಅಭಿವೃದ್ಧಿಯ ವೇಗ ಇನ್ನಷ್ಟು ಹೆಚ್ಚಾಗಲಿದೆ ಎಂದು ಅಭಿಪ್ರಾಯಪಟ್ಟ ಅವರು, ರಾಜ್ಯದ ಒಟ್ಟಾರೆ ಪ್ರಗತಿಯಲ್ಲಿ ರಸ್ತೆಗಳ ಪಾತ್ರ ಪ್ರಮುಖವಾಗಲಿದೆ ಎಂದರು.
ಲೋಕೋಪಯೋಗಿ ಇಲಾಖೆ ಕಳಿಸಿದ 17 ಪ್ರಮುಖ ಯೋಜನೆಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ. ಆದಷ್ಟು ಬೇಗನೇ ಇವುಗಳಿಗೆ ಅಗತ್ಯ ಮಂಜೂರಾತಿ ನೀಡಲಾಗುವುದು.
ಸಿ.ಆರ್.ಎಫ್. ಅಡಿ 2000 ಕೋಟಿ ವೆಚ್ಚದ ಕಾಮಗಾರಿಗಳನ್ನು ಕರ್ನಾಟಕ ರಾಜ್ಯಕ್ಕೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಹೆದ್ದಾರಿ ಜಾಲವನ್ನು ಜೋಡಿಸುವ ಮೂಲಕ ಒಟ್ಟಾರೆ ಪ್ರಯಾಣದ ಅವಧಿಯನ್ನು ಕಡಿಮೆಗೊಳಿಸುವುದರ ಜತೆಗೆ ಅಭಿವೃದ್ಧಿಗೆ ಪೂರಕವಾದ ವಾತಾವರಣ ಲಭಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಆಶಯ ವ್ಯಕ್ತಪಡಿಸಿದರು.

ಪೂರಕ ಇಂಧನವಾಗಿ ಎಥೆನಾಲ್ ಬಳಕೆಗೆ ಸಲಹೆ :
ಪೆಟ್ರೋಲ್, ಡೀಸೆಲ್ ಬೆಲೆಗೆ ಹೋಲಿಸಿದರೆ ಎಥೆನಾಲ್ ಕಡಿಮೆ ದರದಲ್ಲಿ ದೊರಕುತ್ತದೆ. ಎಥೆನಾಲ್, ಗ್ರೀನ್ ಹೈಡ್ರೋಜನ್, ಎಲೆಕ್ಟ್ರಿಕಲ್ ವಾಹನಗಳು ಸೇರಿದಂತೆ ಜೈವಿಕ ಇಂಧನ ನಮ್ಮ ಮುಂದಿನ ಭವಿಷ್ಯವಾಗಿದೆ. ಜಿಲ್ಲೆಯಲ್ಲಿ ಎಥೆನಾಲ್ ಉತ್ಪಾದನೆ ಹಾಗೂ ಬಳಕೆಗೆ ಹೆಚ್ಚು ಅವಕಾಶಗಳಿವೆ. ಸಕ್ಕರೆ ಕಾರ್ಖಾನೆಗಳಿವೆ ಇದರಿಂದ ಸಹ ಉತ್ಪಾದಿಸಬಹುದು. ಎಥೆನಾಲ್ ನಿಂದ ವಿಮಾನ ಇಂಧನ ಸಹ ತಯಾರಾಗುತ್ತಿದ್ದು ರೈತರ ಅಭಿವೃದ್ಧಿ ಮತ್ತು ಪರಿಸರ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಎಥೆನಾಲ್ ಬಳಕೆಗೆ ರಾಜ್ಯ ಸರಕಾರ ಪೆÇ್ರೀತ್ಸಾಹ ನೀಡಬೇಕು ಎಂದ ಅವರು ರಾಜ್ಯ ಜೈವಿಕ ಇಂಧನ ಉತ್ಪಾದಕ ಹಬ್ ಆಗಬಹುದು.

ಮುಂಬರುವ ದಿನಗಳಲ್ಲಿ ಜಗತ್ತಿಗೆ ಎಥೆನಾಲ್ ರಫ್ತುಗೊಳಿಸುವ ಗುರಿಯನ್ನು ಹೊಂದಲಾಗಿದೆ. ಭವಿಷ್ಯದಲ್ಲಿ ಎಥೆನಾಲ್ ಹಾಗೂ ಮಿಥೆನಾಲ್ ಆಧಾರಿತ ವಾಹನಗಳನ್ನು ರಸ್ತೆಗಿಳಿಸುವ ಮೂಲಕ ಪರಿಸರ ರಕ್ಷಣೆ ಜತೆಗೆ ರೈತರ ಆರ್ಥಿಕಾಭಿವೃದ್ಧಿಗೂ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವ ಗಡ್ಕರಿ ಹೇಳಿದರು.

ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ಕಳೆದ 9 ವರ್ಷದಲ್ಲಿ ರಾಜ್ಯದಲ್ಲಿ 54,858 ಕಿ.ಮೀ ರಾಷ್ಟ್ರ್ರೀಯ ಹೆದ್ದಾರಿ ಅಭಿವೃದ್ದಿ ಆಗಿದೆ. ಪ್ರತಿ ದಿನ 371 ಕಿ.ಮೀ ರಸ್ತೆ ಅಭಿವೃದ್ದಿ ಆಗುತ್ತಿದ್ದು ಭಾರತ ದೇಶ ರಸ್ತೆ ಅಭಿವೃದ್ದಿಯಲ್ಲಿ ಮೊದಲನೇ ಸ್ಥಾನದಲ್ಲಿದೆ. ಮಾನ್ಯ ಕೇಂದ್ರ ಸಚಿವರು ರೂ.6.68 ಕೋಟಿ ದಕ್ಷಿಣ ವಲಯಕ್ಕೆ ನೀಡಿದ್ದಾರೆ. ಸಿಗಂದೂರು ಕೇಬಲ್ ಸೇತುವೆ, ರಾಷ್ಟ್ರೀಯ ಹೆದ್ದಾರಿ ಉನ್ನತೀಕರಣ, ರಿಂಗ್ ರಸ್ತೆ, ರಾಣೆಬೆನ್ನೂರು-ಬೈಂದೂರು ರಸ್ತೆ, ಮೇಲ್ಸೇತುವೆಗಳಿಗೆ ಕೇಂದ್ರ ಸಚಿವರು ಅನುದಾನ ಒದಗಿಸಿದ್ದು, ರ್ತೆ ಸಾರಿಗೆಯನ್ನು ಸುರಕ್ಷಿತ ಮತ್ತು ಕಡಿಮೆ ಸಮಯದಲ್ಲಿ ತಲುಪುವಂತೆ ಮಾಡಿದ್ದಾರೆ.

ಕೊಡಚಾದ್ರಿ ಕೇಬಲ್ ಕಾರ್ ಯೋಜನೆ ರೂ.380 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು ಟೆಂಡರ್ ಹಂತದಲ್ಲಿದ್ದು ಒಟ್ಟು ರೂ.2,250 ಕೋಟಿ ಕಾಮಗಾರಿ ಮಂಜೂರಾತಿ ಪ್ರಕ್ರಿಯೆಯಲ್ಲಿವೆ. ಸಚಿವರು ಶರಾವತಿ ಹಿನ್ನೀರು ಪ್ರದೇಶದಲ್ಲಿ ಗ್ರಾ.ಪಂ ರಸ್ತೆಯನ್ನು ರಾ.ಹೆದ್ದಾರಿಯಾಗಿ ಉನ್ನತೀಕರಣಕ್ಕೆ ಮಂಜೂರಾತಿ ನೀಡಲಾಗಿದೆ. 280 ಬಿಎಸ್‍ಎನ್‍ಎಲ್ ಟವರ್ ಗೆ ಮಂಜೂರಾತಿ ದೊರೆತಿದೆ. 2008 ರಿಂದ 22 ರವರೆಗೆ ಜಿಲ್ಲೆಯಲ್ಲಿ ರಸ್ತೆ, ಮೆಡಿಕಲ್ ಕಾಲೇಜು, ಕೃಷಿ, ತೋಟಗಾರಿಕೆ, ಪಶು ವೈದ್ಯಕೀಯ , ಕೇಂದ್ರೀಯ ವಿದ್ಯಾಲಯ, ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಸೇರಿದಂತೆ ಸಮಗ್ರ ಅಭಿವೃದ್ದಿ ಕಂಡಿದೆ ಎಂದರು.

ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಮಾತನಾಡಿ, ರಸ್ತೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಸಮಗ್ರ ಅಭಿವೃದ್ಧಿಗೊಳಿಸುವುದು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕನಸಾಗಿದೆ. ಶಿವಮೊಗ್ಗ ಜಿಲ್ಲೆ ಸೇರಿದಂತೆ ದಕ್ಷಿಣ ವಲಯಕ್ಕೆ ರೂ.6200 ಕೋಟಿ ಕಾಮಗಾರಿಗಳು ಲೋಕಾರ್ಪಣೆಗೊಳ್ಳುತ್ತಿರುವುದು ಸಂತಸದ ವಿಷಯ. ಅಭಿವೃದ್ದಿಗೆ ರಸ್ತೆಗಳು ಬಹು ಮುಖ್ಯ. ಕಳೆದ 10 ವರ್ಷಗಳಲ್ಲಿ ನಿತಿನ್ ಗಡ್ಕರಿಯವರು ವಿಶೇಷ ಪ್ರಯತ್ನ ಮಾಡಿ ರಸ್ತೆಗಳನ್ನು ಅಭಿವೃದ್ದಿಪಡಿಸಿದ್ದಾರೆ. ರಾಜ್ಯದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲು 5 ಬಾರಿ ಸಚಿವರನ್ನು ಭೇಟಿ ಮಾಡಿದ್ದು 12 ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಸಮಸ್ಯೆಗಳಿಗೆ ಪರಿಹಾರ ನೀಡಿದ್ದಾರೆ. ಸ್ಥಳೀಯ ಶಾಸಕರು ಜಿಲ್ಲೆಯ 3 ರಸ್ತಗಳ ಉನ್ನತೀಕರಣಕ್ಕೆ ಮನವಿ ಮಾಡಿದ್ದು 1 ರಸ್ತೆಗೆ ಮಂಜೂರಾತಿ ನೀಡಿದ್ದು ಇನ್ನುಳಿದ 2 ನ್ನು ಹೊಸ ಬಜೆಟ್‍ಲ್ಲಿ ನೀಡಲಾಗುವುದು ಎಂದು ತಿಳಿಸಿದರು.

ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿದರು. ಬಳ್ಳಾರಿ ಸಂಸದರಾದ ದೇವೇಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡ, ಇತರೆ ಜನಪ್ರತಿನಿಧಿಗಳು, ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್ ರವೀಂದ್ರ, ಜಿಲ್ಲಾಧಿಕಾರಿ ಗುರುರಾಜ ಹೆಗಡೆ, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಇತರೆ ಅಧಿಕಾರಿಗಳು ಹಾಜರಿದ್ದರು.

The post ಹೊಸ ರಸ್ತೆಗಳಿಂದ ಶಿವಮೊಗ್ಗದಲ್ಲಿ ಸಮಗ್ರ ಅಭಿವೃದ್ದಿ ಆಗಲಿದೆ : ಕೇಂದ್ರ ಸಚಿವ ನಿತಿನ್ ಗಡ್ಕರಿ appeared first on Hai Sandur kannada fortnightly news paper.

]]>
https://haisandur.com/2024/02/22/%e0%b2%b9%e0%b3%8a%e0%b2%b8-%e0%b2%b0%e0%b2%b8%e0%b3%8d%e0%b2%a4%e0%b3%86%e0%b2%97%e0%b2%b3%e0%b2%bf%e0%b2%82%e0%b2%a6-%e0%b2%b6%e0%b2%bf%e0%b2%b5%e0%b2%ae%e0%b3%8a%e0%b2%97%e0%b3%8d%e0%b2%97%e0%b2%a6/feed/ 0
ಶಾಲಾ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮ https://haisandur.com/2024/02/09/%e0%b2%b6%e0%b2%be%e0%b2%b2%e0%b2%be-%e0%b2%b6%e0%b2%bf%e0%b2%95%e0%b3%8d%e0%b2%b7%e0%b2%95%e0%b2%b0%e0%b2%bf%e0%b2%97%e0%b3%86-%e0%b2%af%e0%b3%8b%e0%b2%97-%e0%b2%a4%e0%b2%b0%e0%b2%ac%e0%b3%87/ https://haisandur.com/2024/02/09/%e0%b2%b6%e0%b2%be%e0%b2%b2%e0%b2%be-%e0%b2%b6%e0%b2%bf%e0%b2%95%e0%b3%8d%e0%b2%b7%e0%b2%95%e0%b2%b0%e0%b2%bf%e0%b2%97%e0%b3%86-%e0%b2%af%e0%b3%8b%e0%b2%97-%e0%b2%a4%e0%b2%b0%e0%b2%ac%e0%b3%87/#respond Fri, 09 Feb 2024 12:04:49 +0000 https://haisandur.com/?p=34480 ಶಿವಮೊಗ್ಗ, ಫೆಬ್ರವರಿ 8: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅಯುಷ್ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿವಮೊಗ್ಗ ಇವರ ಸಹಯೋಗದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಫೆ.6 ಮತ್ತು 7 ರಂದು 2 ದಿನಗಳ ಕಾಲ ಶಾಲಾ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ಬಸವನಗುಡಿಯ ಸರ್ಕಾರಿ ನೌಕರರ ವಿಕಾಸ ಕೇಂದ್ರ ಇಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆಯುಷ್ ಅಧಿಕಾರಿ(ಪ್ರ) ಡಾ.ಸಿ.ಎ.ಹಿರೇಮಠ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಿ.ಹೆಚ್.ನಿರಂಜನಮೂರ್ತಿ, ಜಿ.ಹೆಚ್.ಪ್ರಭು, ಕಾಳಾನಾಯ್ಕ್ ಭಾಗವಹಿಸಿದ್ದರು. […]

The post ಶಾಲಾ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮ appeared first on Hai Sandur kannada fortnightly news paper.

]]>
ಶಿವಮೊಗ್ಗ, ಫೆಬ್ರವರಿ 8: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅಯುಷ್ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿವಮೊಗ್ಗ ಇವರ ಸಹಯೋಗದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಫೆ.6 ಮತ್ತು 7 ರಂದು 2 ದಿನಗಳ ಕಾಲ ಶಾಲಾ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ಬಸವನಗುಡಿಯ ಸರ್ಕಾರಿ ನೌಕರರ ವಿಕಾಸ ಕೇಂದ್ರ ಇಲ್ಲಿ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆಯುಷ್ ಅಧಿಕಾರಿ(ಪ್ರ) ಡಾ.ಸಿ.ಎ.ಹಿರೇಮಠ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಿ.ಹೆಚ್.ನಿರಂಜನಮೂರ್ತಿ, ಜಿ.ಹೆಚ್.ಪ್ರಭು, ಕಾಳಾನಾಯ್ಕ್ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಅನಿಲ್‍ಕುಮಾರ್ ಎಸ್.ಹೆಚ್, ಡಾ.ಮಲ್ಲಿಕಾರ್ಜುನ ಡಂಬಳ, ಡಾ.ಪತಂಜಲಿ ಕೆ.ವಿ, ಡಾ.ವೀಣಾ ಭಟ್, ಡಾ.ಗೀತಾ ಕೆ.ಎಸ್ ಮತ್ತು ಡಾ.ಶಿವಕುಮಾರ್ ಟಿ ಪಾಲ್ಗೊಂಡಿದ್ದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ವಹಿಸಿ ಮಾತನಾಡಿದರು. ಕಾರ್ಯಕ್ರಮ ಸಂಯೋಜನೆಯನ್ನು ಡಾ.ಸುರೇಂದ್ರ ಸಿ ಇವರು ನೆರವೇರಿಸಿದರು.

The post ಶಾಲಾ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮ appeared first on Hai Sandur kannada fortnightly news paper.

]]>
https://haisandur.com/2024/02/09/%e0%b2%b6%e0%b2%be%e0%b2%b2%e0%b2%be-%e0%b2%b6%e0%b2%bf%e0%b2%95%e0%b3%8d%e0%b2%b7%e0%b2%95%e0%b2%b0%e0%b2%bf%e0%b2%97%e0%b3%86-%e0%b2%af%e0%b3%8b%e0%b2%97-%e0%b2%a4%e0%b2%b0%e0%b2%ac%e0%b3%87/feed/ 0
ಕುಷ್ಟರೋಗ ಸಾಮಾಜಿಕ ಪಿಡುಗಲ್ಲ- ಅರಿವು ಅಗತ್ಯ : ಡಾ.ದಾದಾಪೀರ್ https://haisandur.com/2024/01/30/%e0%b2%95%e0%b3%81%e0%b2%b7%e0%b3%8d%e0%b2%9f%e0%b2%b0%e0%b3%8b%e0%b2%97-%e0%b2%b8%e0%b2%be%e0%b2%ae%e0%b2%be%e0%b2%9c%e0%b2%bf%e0%b2%95-%e0%b2%aa%e0%b2%bf%e0%b2%a1%e0%b3%81%e0%b2%97%e0%b2%b2%e0%b3%8d/ https://haisandur.com/2024/01/30/%e0%b2%95%e0%b3%81%e0%b2%b7%e0%b3%8d%e0%b2%9f%e0%b2%b0%e0%b3%8b%e0%b2%97-%e0%b2%b8%e0%b2%be%e0%b2%ae%e0%b2%be%e0%b2%9c%e0%b2%bf%e0%b2%95-%e0%b2%aa%e0%b2%bf%e0%b2%a1%e0%b3%81%e0%b2%97%e0%b2%b2%e0%b3%8d/#respond Tue, 30 Jan 2024 10:46:22 +0000 https://haisandur.com/?p=34412 ಶಿವಮೊಗ್ಗ, ಜನವರಿ 30: ಕುಷ್ಟರೋಗವನ್ನು ಸಾಮಾಜಿಕ ಪಿಡುಗು ಎನ್ನುವ ರೀತಿಯಲ್ಲಿ ಜನರು ಬಿಂಬಿಸಿದ್ದಾರೆ. ಆದರೆ ಇದು ಸಾಮಾಜಿಕ ಪಿಡುಗು ಅಲ್ಲ. ಬದಲಾಗಿ ಪ್ರೀತಿಯಿಂದ ಅವರ ಚಿಕಿತ್ಸೆಗೆ ಸಹಕಾರ ನೀಡಬೇಕು ಎಂದು ಚರ್ಮರೋಗ ತಜ್ಞ ವೈದ್ಯರಾದ ಡಾ.ದಾದಾಪೀರ್ ತಿಳಿಸಿದರು. ರಾಷ್ಟ್ರಪಿತ ಮಹಾತ್ಮಾಗಾಂಧಿ ಹುತಾತ್ಮ ದಿನಾಚರಣೆ ಸಂದರ್ಭದಲ್ಲಿ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನ […]

The post ಕುಷ್ಟರೋಗ ಸಾಮಾಜಿಕ ಪಿಡುಗಲ್ಲ- ಅರಿವು ಅಗತ್ಯ : ಡಾ.ದಾದಾಪೀರ್ appeared first on Hai Sandur kannada fortnightly news paper.

]]>
ಶಿವಮೊಗ್ಗ, ಜನವರಿ 30: ಕುಷ್ಟರೋಗವನ್ನು ಸಾಮಾಜಿಕ ಪಿಡುಗು ಎನ್ನುವ ರೀತಿಯಲ್ಲಿ ಜನರು ಬಿಂಬಿಸಿದ್ದಾರೆ. ಆದರೆ ಇದು ಸಾಮಾಜಿಕ ಪಿಡುಗು ಅಲ್ಲ. ಬದಲಾಗಿ ಪ್ರೀತಿಯಿಂದ ಅವರ ಚಿಕಿತ್ಸೆಗೆ ಸಹಕಾರ ನೀಡಬೇಕು ಎಂದು ಚರ್ಮರೋಗ ತಜ್ಞ ವೈದ್ಯರಾದ ಡಾ.ದಾದಾಪೀರ್ ತಿಳಿಸಿದರು.

ರಾಷ್ಟ್ರಪಿತ ಮಹಾತ್ಮಾಗಾಂಧಿ ಹುತಾತ್ಮ ದಿನಾಚರಣೆ ಸಂದರ್ಭದಲ್ಲಿ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನ ಕಾರ್ಯಕ್ರಮ ಪ್ರಯುಕ್ತ ಏರ್ಪಡಿಸಲಾಗಿದ್ದ ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನ- 2024 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಸಮಾಜದಲ್ಲಿ ಪ್ರತಿಯೊಬ್ಬರು ಪರಸ್ಪರರನ್ನು ಗಮನಿಸುವುದು ಮುಖ್ಯವಾಗಿದೆ. ಕುಷ್ಠರೋಗ ಅನೇಕ ವರ್ಷಗಳ ಕಾಲದಿಂದ ಜನರನ್ನು ಕಾಡುತ್ತಿರುವ ಒಂದು ಕಾಯಿಲೆ ಆಗಿದೆ ಇದಕ್ಕೆ ಸೂಕ್ತ ಚಿಕಿತ್ಸೆ ಅಗತ್ಯವಾಗಿದೆ.

ಕಾಯಿಲೆಯ ಗುಣಲಕ್ಷಣಗಳನ್ನು ತಿಳಿದುಕೊಂಡರೆ ಮಾತ್ರ ಕಾಯಿಲೆ ಇದೆ ಎಂಬುದು ಕಂಡುಹಿಡಿಯಲು ಸಾಧ್ಯ. ಸ್ಪರ್ಶ ಜ್ಞಾನ ಇಲ್ಲದೇ ಇರುವುದು, ಕೂದಲು ಬೆಳೆಯದಿರುವುದು, ಬೆವರು ಬಾರದಿರುವುದು ಈ ರೀತಿ ಕಾಯಿಲೆಯ ಪ್ರಾಥಮಿಕ ರೋಗಲಕ್ಷಣಗಳನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವುದು ನಮ್ಮೆಲ್ಲರ ಹೊಣೆ ಆಗಿದೆ.

ಕಾಯಿಲೆಯ ಗುಣಲಕ್ಷಣಗಳು ಕಂಡು ಬಂದ ತಕ್ಷಣ ತಾಲೂಕು ಅಥವಾ ಜಿಲ್ಲಾ ಆಸ್ಪತ್ರೆಗಳಿಗೆ ಮಾಹಿತಿ ನೀಡಿ ಚಿಕಿತ್ಸೆ ಕೊಡಿಸಬೇಕು. ಸರ್ಕಾರಿ ಆಸ್ಪತ್ರೆಯಗಳಲ್ಲಿ ಕುಷ್ಟರೋಗಕ್ಕೆ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು, ಕಾಯಿಲೆಯ ಕುರಿತು ಜಾಗೃತಿ, ಅರಿವು ಹೆಚ್ಚಬೇಕು ಎಂದರು.

ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಕಿರಣ್ ಮಾತನಾಡಿ, ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಜನರು ಜೀವನ ನೆಮ್ಮದಿಯಿಂದ ನಡೆಸಲು ಸಾಧ್ಯ. ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸುವುದು ಹಾಗೂ ಜಾಗೃತಿ ವಹಿಸಬೇಕಾಗಿರುವುದು ಅತ್ಯಗತ್ಯವಾಗಿದೆ.

ಕುಷ್ಠರೋಗ ಎಂಬುದು ಸಮಾಜದಲ್ಲಿ ಹಿಂದಿನಿಂದ ಇದೆ. ಒಬ್ಬ ವ್ಯಕ್ತಿಯಿಂದ ಇನ್ನೊಬ್ಬ ವ್ಯಕ್ತಿಗೆ ಅದು ನಿಧಾನವಾಗಿ ಹರಡುತ್ತಿದೆ. ಆದರೆ ಎಷ್ಟೋ ಜನರು ರೋಗಲಕ್ಷಣಗಳಿಗೆ ಚಿಕಿತ್ಸೆ ಪಡೆಯುತ್ತಿಲ್ಲ. ಹಿಂಜರಿಯುತ್ತಾರೆ. ಅವರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡುವುದು ಅಗತ್ಯವಾಗಿದೆ. ಸೋಂಕು ಹರಡದಂತೆ ಎಲ್ಲರೂ ಕಾಳಜಿ ವಹಿಸಿ ಸರಿಯಾದ ಚಿಕಿತ್ಸೆ ನೀಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮಮತಾ ಪಿ.ಆರ್, ಉಪನ್ಯಾಸಕರಾದ ಪೆÇ್ರ.ಜಗದೀಶ್, ದೊಡ್ಡ ವೀರಪ್ಪ ,ಕೆ ಎಂ ನಾಗರಾಜು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

The post ಕುಷ್ಟರೋಗ ಸಾಮಾಜಿಕ ಪಿಡುಗಲ್ಲ- ಅರಿವು ಅಗತ್ಯ : ಡಾ.ದಾದಾಪೀರ್ appeared first on Hai Sandur kannada fortnightly news paper.

]]>
https://haisandur.com/2024/01/30/%e0%b2%95%e0%b3%81%e0%b2%b7%e0%b3%8d%e0%b2%9f%e0%b2%b0%e0%b3%8b%e0%b2%97-%e0%b2%b8%e0%b2%be%e0%b2%ae%e0%b2%be%e0%b2%9c%e0%b2%bf%e0%b2%95-%e0%b2%aa%e0%b2%bf%e0%b2%a1%e0%b3%81%e0%b2%97%e0%b2%b2%e0%b3%8d/feed/ 0
ಪ್ರಸವಪೂರ್ವ ಲಿಂಗಪತ್ತೆ ಮತ್ತು ಭ್ರೂಣಹತ್ಯೆಯ ರಹಸ್ಯ ತಿಳಿಯಲು ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಭೇಟಿ ನೀಡಲು ವೈದ್ಯಾಧಿಕಾರಿಗಳಿಗೆ ಸೂಚನೆ : ಡಾ||.ಆರ್. ಸೆಲ್ವಮಣಿ https://haisandur.com/2023/12/14/%e0%b2%aa%e0%b3%8d%e0%b2%b0%e0%b2%b8%e0%b2%b5%e0%b2%aa%e0%b3%82%e0%b2%b0%e0%b3%8d%e0%b2%b5-%e0%b2%b2%e0%b2%bf%e0%b2%82%e0%b2%97%e0%b2%aa%e0%b2%a4%e0%b3%8d%e0%b2%a4%e0%b3%86-%e0%b2%ae%e0%b2%a4%e0%b3%8d/ https://haisandur.com/2023/12/14/%e0%b2%aa%e0%b3%8d%e0%b2%b0%e0%b2%b8%e0%b2%b5%e0%b2%aa%e0%b3%82%e0%b2%b0%e0%b3%8d%e0%b2%b5-%e0%b2%b2%e0%b2%bf%e0%b2%82%e0%b2%97%e0%b2%aa%e0%b2%a4%e0%b3%8d%e0%b2%a4%e0%b3%86-%e0%b2%ae%e0%b2%a4%e0%b3%8d/#respond Thu, 14 Dec 2023 14:50:27 +0000 https://haisandur.com/?p=34058 ಶಿವಮೊಗ್ಗ : ಡಿಸೆಂಬರ್ 14: ಜಿಲ್ಲೆಯಲ್ಲಿ ಪ್ರಸವಪೂರ್ವ ಲಿಂಗಪತ್ತೆ ಮತ್ತು ಭ್ರೂಣಹತ್ಯೆ ಪ್ರಕರಣಗಳು ಗೌಪ್ಯವಾಗಿ ನಿರಂತರವಾಗಿ ನಡೆಯುತ್ತಿವೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕಾಗಿದ್ದ ಸ್ಕ್ಯಾನಿಂಗ್ ಸೆಂಟರ್‍ಗಳು ಸರ್ಕಾರದ ನಿಯಮಗಳನ್ನು ನಿರ್ಲಕ್ಷಿಸಿ ಕಾರ್ಯನಿರ್ವಹಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಸವಪೂರ್ವ ಲಿಂಗ ಪತ್ತೆ, ಭ್ರೂಣಹತ್ಯೆ ಮತ್ತು ಸ್ಕ್ಯಾನಿಂಗ್ ಸೆಂಟರ್‍ಗಳ ಕಾರ್ಯವೈಖರಿಗಳ ಕುರಿತು ಏರ್ಪಡಿಸಲಾಗಿದ್ದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿನ […]

The post ಪ್ರಸವಪೂರ್ವ ಲಿಂಗಪತ್ತೆ ಮತ್ತು ಭ್ರೂಣಹತ್ಯೆಯ ರಹಸ್ಯ ತಿಳಿಯಲು ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಭೇಟಿ ನೀಡಲು ವೈದ್ಯಾಧಿಕಾರಿಗಳಿಗೆ ಸೂಚನೆ : ಡಾ||.ಆರ್. ಸೆಲ್ವಮಣಿ appeared first on Hai Sandur kannada fortnightly news paper.

]]>
ಶಿವಮೊಗ್ಗ : ಡಿಸೆಂಬರ್ 14: ಜಿಲ್ಲೆಯಲ್ಲಿ ಪ್ರಸವಪೂರ್ವ ಲಿಂಗಪತ್ತೆ ಮತ್ತು ಭ್ರೂಣಹತ್ಯೆ ಪ್ರಕರಣಗಳು ಗೌಪ್ಯವಾಗಿ ನಿರಂತರವಾಗಿ ನಡೆಯುತ್ತಿವೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕಾಗಿದ್ದ ಸ್ಕ್ಯಾನಿಂಗ್ ಸೆಂಟರ್‍ಗಳು ಸರ್ಕಾರದ ನಿಯಮಗಳನ್ನು ನಿರ್ಲಕ್ಷಿಸಿ ಕಾರ್ಯನಿರ್ವಹಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಸವಪೂರ್ವ ಲಿಂಗ ಪತ್ತೆ, ಭ್ರೂಣಹತ್ಯೆ ಮತ್ತು ಸ್ಕ್ಯಾನಿಂಗ್ ಸೆಂಟರ್‍ಗಳ ಕಾರ್ಯವೈಖರಿಗಳ ಕುರಿತು ಏರ್ಪಡಿಸಲಾಗಿದ್ದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿನ ಸ್ಕ್ಯಾನಿಂಗ್ ಸೆಂಟರ್‍ಗಳ ಕಾರ್ಯವೈಖರಿ ಹಾಗೂ ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಸಾಕಷ್ಟು ಆರೋಪಗಳಿವೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ. ಕೂಡಲೇ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಹಾಗೂ ಸಲಹಾ ಸಮಿತಿಯ ಸದಸ್ಯರು ವಾರಕ್ಕೊಮ್ಮೆಯಂತೆ ನಗರ ವ್ಯಾಪ್ತಿಯಲ್ಲಿ ಮಾತ್ರವಲ್ಲದೇ ಜಿಲ್ಲೆಯ ಯಾವುದೇ ತಾಲೂಕುಗಳ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಹಾಗೂ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿ, ದಾಖಲೆಗಳನ್ನು ಪರಿಶೀಲಿಸಿ, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ಅವರು ಸೂಚಿಸಿದರು.
ಯಾವುದೇ ಅಹಿತಕರ ಘಟನೆಗಳು ತಿಳಿದು ನಂತರ ಅವುಗಳ ಕುರಿತು ಕ್ರಮ ವಹಿಸುವ ಮೊದಲು ಮುನ್ನೆಚ್ಚರಿಕೆ ವಹಿಸುವುದು ಉತ್ತಮ, ಸಂಬಂಧಿತ ಇಲಾಖಾ ಅಧಿಕಾರಿಗಳು ಕೂಡಲೇ ಕ್ರಮವಹಿಸುವಂತೆ ಹಾಗೂ ಕೈಗೊಂಡ ಕ್ರಮದ ಬಗ್ಗೆ ಕೂಡಲೇ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ಅವಧಿಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳ ಜೊತೆಗೆ ಆಶಾ, ಅಂಗನವಾಡಿ ಕಾರ್ಯಕರ್ತರ ಸಹಕಾರ ಪಡೆದುಕೊಳ್ಳುವಂತೆ ತಿಳಿಸಿದ ಅವರು, ಆಶಾ ಕಾರ್ಯಕರ್ತೆಯರು ಸ್ಥಳೀಯವಾಗಿರುವ ಅನೇಕ ವಿಷಯಗಳನ್ನು ಬಲ್ಲವರಾಗಿರುತ್ತಾರೆ ಎಂದವರು ನುಡಿದರು.
ಸ್ಕ್ಯಾನಿಂಗ್ ನಂತರ ಕೆಲವೇ ದಿನಗಳಲ್ಲಿ ಗರ್ಭಪಾತವಾಗಿರುವ ಪ್ರಕರಣಗಳ ಮೂಲ ಹಾಗೂ ಕಾರಣಗಳನ್ನು ಹುಡುಕಿದಾಗ ವಾಸ್ತವದ ಅರಿವಾಗಲಿದೆ. ಅವರು ನೀಡುವ ಕಾರಣ ವೈಜ್ಞಾನಿಕವಾಗಿದ್ದಲ್ಲಿ ಒಪ್ಪಿಕೊಳ್ಳಬಹುದಾಗಿದೆ. ಅಥವಾ ಅದು ಸಕಾರಣವಲ್ಲ ಎಂದು ತಿಳಿದಾಗ ಅಂತಹ ಗರ್ಭಪಾತಕ್ಕೆ ಸಹಕರಿಸಿದ ವೈದ್ಯರು, ಸ್ಕ್ಯಾನಿಂಗ್ ಸೆಂಟರ್‍ಗಳ ನಿರ್ವಾಹಕರು ಮತ್ತು ಅಂತಹ ಕುಟುಂಬಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದರು.
ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ದಾಖಲೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಕೇಂದ್ರದಲ್ಲಿ ಕ್ಯಾಮರಾಗಳನ್ನು ಅಳವಡಿಸಿರಬೇಕು. ಭ್ರೂಣ ಪತ್ತೆ ಮಾಡದಿರುವ ಬಗ್ಗೆ ಮಾಹಿತಿ ಫಲಕ ಅಳವಡಿಸಬೇಕು. ಮುಂತಾದ ಮಾಹಿತಿಗಳಿರುವುದನ್ನು ಖಚಿತಪಡಿಸಿಕೊಳ್ಳುವಂತೆ ವೈದ್ಯರಿಗೆ ಸೂಚಿಸಿದರು.

ಸ್ಕ್ಯಾನಿಂಗ್ ಸೆಂಟರ್‍ಗಳ ನಿರ್ವಾಹಕರು ಸಕಾಲದಲ್ಲಿ ತಮ್ಮ ಘಟಕದ ಪರವಾನಗಿ ನವೀಕರಣ ಮತ್ತು ನಿರ್ವಹಿಸಿದ ದಾಖಲೆಗಳ ಬಗ್ಗೆ ಕಾಲಕಾಲಕ್ಕೆ ಮಾಹಿತಿ ಸಲ್ಲಿಸಬೇಕು. ನಿರ್ಲಕ್ಷ್ಯ ತೋರುವ ಘಟಕಗಳ ಪರವಾನಿಗೆಯನ್ನು ರದ್ದುಗೊಳಿಸುವ ಕಠಿಣ ನಿರ್ಧಾರ ಕೈಗೊಳ್ಳಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ವೈದ್ಯರು ಹಾಗೂ ಸ್ಕ್ಯಾನಿಂಗ್ ಸೆಂಟರ್‍ಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಅಗತ್ಯವಿದ್ದಲ್ಲಿ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.

ಕೆಲವು ಕಡೆಗಳಲ್ಲಿ ಆಯುಷ್ ಇಲಾಖೆಯ ವೈದ್ಯರು ಆಯುಷ್ ಬದಲಾಗಿ ಆಲೋಪತಿ ಚಿಕಿತ್ಸೆ ನೀಡುತ್ತಿರುವ ಬಗ್ಗೆಯೂ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಈ ಬಗ್ಗೆ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಗಮನಿಸಿ ಕ್ರಮವಹಿಸಬೇಕೆಂದು ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳಿ, ಕುಟುಂಬ ಕಲ್ಯಾಣಾಧಿಕಾರಿ ವೆಂಕಟೇಶ್, ಡಾ|| ಮಂಜುನಾಥ ನಾಗಲೀಕರ್ ಸೇರಿದಂತೆ ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

The post ಪ್ರಸವಪೂರ್ವ ಲಿಂಗಪತ್ತೆ ಮತ್ತು ಭ್ರೂಣಹತ್ಯೆಯ ರಹಸ್ಯ ತಿಳಿಯಲು ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಭೇಟಿ ನೀಡಲು ವೈದ್ಯಾಧಿಕಾರಿಗಳಿಗೆ ಸೂಚನೆ : ಡಾ||.ಆರ್. ಸೆಲ್ವಮಣಿ appeared first on Hai Sandur kannada fortnightly news paper.

]]>
https://haisandur.com/2023/12/14/%e0%b2%aa%e0%b3%8d%e0%b2%b0%e0%b2%b8%e0%b2%b5%e0%b2%aa%e0%b3%82%e0%b2%b0%e0%b3%8d%e0%b2%b5-%e0%b2%b2%e0%b2%bf%e0%b2%82%e0%b2%97%e0%b2%aa%e0%b2%a4%e0%b3%8d%e0%b2%a4%e0%b3%86-%e0%b2%ae%e0%b2%a4%e0%b3%8d/feed/ 0
ಜನಪರವಾದ ಎಪಿಎಂಸಿ ಕಾಯ್ದೆ ಜಾರಿಗೊಳಿಸಲಾಗುವುದು : ಶಿವಾನಂದ ಎಸ್ ಪಾಟೀಲ್ https://haisandur.com/2023/11/22/%e0%b2%9c%e0%b2%a8%e0%b2%aa%e0%b2%b0%e0%b2%b5%e0%b2%be%e0%b2%a6-%e0%b2%8e%e0%b2%aa%e0%b2%bf%e0%b2%8e%e0%b2%82%e0%b2%b8%e0%b2%bf-%e0%b2%95%e0%b2%be%e0%b2%af%e0%b3%8d%e0%b2%a6%e0%b3%86-%e0%b2%9c/ https://haisandur.com/2023/11/22/%e0%b2%9c%e0%b2%a8%e0%b2%aa%e0%b2%b0%e0%b2%b5%e0%b2%be%e0%b2%a6-%e0%b2%8e%e0%b2%aa%e0%b2%bf%e0%b2%8e%e0%b2%82%e0%b2%b8%e0%b2%bf-%e0%b2%95%e0%b2%be%e0%b2%af%e0%b3%8d%e0%b2%a6%e0%b3%86-%e0%b2%9c/#respond Wed, 22 Nov 2023 12:37:05 +0000 https://haisandur.com/?p=33959 ಶಿವಮೊಗ್ಗ, ನವೆಂಬರ್ 22 : ರೈತರು, ವರ್ತಕರು, ಎಪಿಎಂಸಿ ಅವಲಂಬಿತರು ಎಲ್ಲರ ಸಲಹೆಗಳಿಗೆ ಮಾನ್ಯತೆ ನೀಡಿ, ಸಮನ್ವಯತೆಯಿಂದ ಜನಪರ, ರೈತ ಪರವಾದ ಎಪಿಎಂಸಿ ವಿಧೇಯಕ 2023 ನ್ನು ಜಾರಿಗೆ ತರಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ್ ಹೇಳಿದರು. ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ದಿ)(ತಿದ್ದುಪಡಿ) ವಿಧೇಯಕ 2023 ನ್ನು ಪರಿಶೀಲಿಸಿ ಸದನಕ್ಕೆ ವರದಿಯನ್ನು ಸಲ್ಲಿಸಲು ರಚಿಸಲಾಗಿರುವ ಪರಿಶೀಲನಾ ಸಮಿತಿಯು ಇಂದು ಜಿಲ್ಲಾಡಳಿತ ಕಚೇರಿ […]

The post ಜನಪರವಾದ ಎಪಿಎಂಸಿ ಕಾಯ್ದೆ ಜಾರಿಗೊಳಿಸಲಾಗುವುದು : ಶಿವಾನಂದ ಎಸ್ ಪಾಟೀಲ್ appeared first on Hai Sandur kannada fortnightly news paper.

]]>
ಶಿವಮೊಗ್ಗ, ನವೆಂಬರ್ 22 : ರೈತರು, ವರ್ತಕರು, ಎಪಿಎಂಸಿ ಅವಲಂಬಿತರು ಎಲ್ಲರ ಸಲಹೆಗಳಿಗೆ ಮಾನ್ಯತೆ ನೀಡಿ, ಸಮನ್ವಯತೆಯಿಂದ ಜನಪರ, ರೈತ ಪರವಾದ ಎಪಿಎಂಸಿ ವಿಧೇಯಕ 2023 ನ್ನು ಜಾರಿಗೆ ತರಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ್ ಹೇಳಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ದಿ)(ತಿದ್ದುಪಡಿ) ವಿಧೇಯಕ 2023 ನ್ನು ಪರಿಶೀಲಿಸಿ ಸದನಕ್ಕೆ ವರದಿಯನ್ನು ಸಲ್ಲಿಸಲು ರಚಿಸಲಾಗಿರುವ ಪರಿಶೀಲನಾ ಸಮಿತಿಯು ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆಸಿದ ರೈತರು, ವರ್ತಕರು, ದಲಾಲರು ಮತ್ತು ಹಮಾಲರ ಪ್ರತಿನಿಧಿಗಳಿಂದ ಸಲಹೆಯನ್ನು ಸ್ವೀಕರಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ದಿ)(ತಿದ್ದುಪಡಿ) ವಿಧೇಯಕ 2023 ಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ. ಆದರೆ ವಿಧಾನ ಪರಿಷತ್ತಿನಲ್ಲಿ ರೈತರು, ವರ್ತಕರು ಸೇರಿದಂತೆ ಇದಕ್ಕೆ ಸಂಬಂಧಿಸಿದವರಿಂದ ಸಲಹೆಗಳನ್ನು ಪಡೆಯುವಂತೆ ಸೂಚಿಸಿರುವ ಹಿನ್ನಲೆ ಸಭೆಗಳನ್ನು ನಡೆಸಲಾಗುತ್ತಿದೆ. ಕೋಲಾರದಲ್ಲಿ ಸಭೆ ನಡೆಸಿ, ಇದೀಗ ಇಲ್ಲಿ ನಡೆಸಲಾಗುತ್ತಿದೆ.

ಸಭೆಯಲ್ಲಿ ರೈತ ಸಂಘದವರು, ವರ್ತಕರು, ಅಕ್ಕಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು, ಎಪಿಎಂಸಿ ಮಾಜಿ ಪದಾಧಿಕಾರಿಗಳು, ಎಪಿಎಂಸಿ ಅವಲಂಬಿತ ದಲಾಲಿಗಳ ಸಂಘ, ಪೇಟೆ ಕಾರ್ಯಕರ್ತರು, ಹಮಾಲಿ, ತೂಕದವರ ಸಂಘಗಳ ಪದಾಧಿಕಾರಿಗಳ ಸಲಹೆಗಳನ್ನು ಸ್ವೀಕರಿಸಲಾಗಿದೆ. ಅವರ ಸಲಹೆಗಳಿಗೆ ಮಾನ್ಯತೆ ನೀಡಲಾಗುವುದು.

ಎಪಿಎಂಸಿ ಯಲ್ಲಿ 16 ಸಾವಿರ ಕೋಟಿ ಆಸ್ತಿ ಇದ್ದು 8 ಸಾವಿರ ಎಕರೆಯಷ್ಟು ಜಮೀನು ಇದೆ. ಇದನ್ನು ಉಳಿಸಿಕೊಂಡು ಪುನರ್ ನಿರ್ಮಾಣಕ್ಕೆ ಅವಕಾಶ ನೀಡಲಾಗುವುದು. ಸಭೆಯಲ್ಲಿ ಕೇಳಿಬಂದ ಎಪಿಎಂಸಿ ಅಧಿಕಾರ ವಿಕೇಂದ್ರೀಕರಣ, ಸೆಸ್ ಕಡಿತಗೊಳಿಸುವುದು, ಆಸ್ತಿ ತೆರಿಗೆ ಇತರೆ ವಿಷಯಗಳನ್ನು ಗಮನದಲ್ಲಿರಿಸಿಕೊಂಡು ಹೊಸ ಕಾಯ್ದೆ ಜಾರಿಗೆ ತರಲಾಗುವುದು ಎಂದರು.

ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಮಾತನಾಡಿ, ಪ್ರಸ್ತುತ ಎಪಿಎಂಸಿ ಕಾಯ್ದೆಯ ಪ್ರಕಾರ ರೈತ ಎಲ್ಲಿ ಬೇಕಾದರೂ ತನ್ನ ಉತ್ಪನ್ನ ಮಾರಾಟ ಮಾಡಬಹುದು. ಈ ನೀತಿಯಿಂದ ಎಪಿಎಂಸಿ ವಿನಾಶದ ಅಂಚಿಗೆ ಬರುವುದು. ಮಲ್ಟಿ ನ್ಯಾಷನಲ್ ಕಂಪೆನಿಗಳು ನೇರವಾಗಿ ರೈತರಿಂದ ಖರೀದಿಗೆ ಮುಂದಾದರೆ ಅವರು ಹೇಳುವ ತಳಿ, ಗುಣಮಟ್ಟ, ಮಾನದಂಡಗಳನ್ನು ಪಾಲಿಸಬೇಕು. ಒಂದು ವೇಳೆ ಅದರಲ್ಲಿ ಸೋತರೆ ತಿರಸ್ಕರಿಸಲಾಗುತ್ತದೆ. ಹೊಸ ತಳಿಗಳಿಂದ ಹಳೇ ತಳಿ ನಾಶವಗುತ್ತದೆ. ರೈತರು-ಗ್ರಾಹಕರು ಕಾರ್ಪೋರೇಟ್ ಹಿಡಿತಕ್ಕೊಳಗಾಗುತ್ತಾರೆ. ಎಪಿಎಂಸಿ ಆದಾಯ ನಿಲ್ಲುತ್ತದೆ. ಅವಲಂಬಿತ ದಲಾಲರು, ಹಮಾಲರು, ಲಗ್ಗೇಜ್ ವಾಹನ ಇವರಿಗೆ ಅನ್ಯಾಯವಾಗುತ್ತದೆ. ಆದ್ದರಿಂದ ಪ್ರಸ್ತುತದ ಕಾಯ್ದೆ ರದ್ದುಪಡಿಸಬೇಕು ಹಾಗೂ ಟೆಂಡರ್ ವ್ಯವಸ್ಥೆ, ಆನ್‍ಲೈನ್ ಟ್ರೇಡಿಂಗ್ ವ್ಯವಸ್ಥೆಯೊಂದಿಗೆ ಹಳೆ ಕಾಯ್ದೆಗೆ ಅಗತ್ಯ ಸುಧಾರಣೆಗಳನ್ನು ತಂದು ಜಾರಿಗೆ ತರಬೇಕೆಂದು ಮನವಿ ಮಾಡಿದರು.

ಕೃಷಿಕರಾದ ಹೆಚ್.ಎಂ ರವಿಕುಮಾರ್ ಮಾತನಾಡಿ, ಎಪಿಎಂಸಿ ಯಾವಾಗಲೂ ಅಸ್ತಿತ್ವದಲ್ಲಿರುವಂತೆ ಕಾನೂನು, ಅವೈಜ್ಞಾನಿಕ ಆಸ್ತಿ ತೆರಿಗೆಗೆ ಕಡಿವಾಣ, ಆಸ್ತಿ ಹಂಚಿಕೆ ನಿಯಮ ಮತ್ತು ಪ್ರಕ್ರಿಯೆ ಸರಳಗೊಳಿಸಬೇಕು ಹಾಗೂ ನಿಯಮ 46 ರನ್ನು ಪುನರ್‍ಪರಿಶೀಲಿಸಬೇಕೆಂದರು.

ಜಿಲ್ಲಾ ಅಕ್ಕಿ ಗಿರಣಿ ಸಂಘದ ಉಪಾಧ್ಯಕ್ಷ ಕೆ.ಶೈಲೇಂದ್ರ, ಹಳೇ ಕಾಯ್ದೆಯಿಂದ ರೈತರಿಗೆ ಅನುಕೂಲವಿದೆ. ಕಳೆದ ಮೂರುವರ್ಷದಲ್ಲಿ ಹೊಸ ಕಾಯ್ದೆಯಿಂದ ಕಾರ್ಮಿಕರು, ಅವಲಂಬಿತರು ಸಾಕಷ್ಟು ಕಷ್ಟಪಟ್ಟಿದ್ದಾರೆ. ನಿಯಮ 117 ನ್ನು ಮರು ಜಾರಿ ಮಾಡುವುದು ಬೇಡ. ಮಾಡಲೇಬೇಕಾದಲ್ಲಿ ಅಗತ್ಯ ಸವಲತ್ತುಗಳನ್ನು ನೀಡಿ ಜಾರಿ ಮಾಡುವಂತೆ ಮನವಿ ಮಾಡಿದರು.

ರಾಜ್ಯ ಮೆಕ್ಕೆಜೋಳ ವರ್ತಕರ ಕಾರ್ಯದರ್ಶಿ ಕೆ.ಜಾವೆದ್ ಮಾತನಾಡಿ, ಸೆಸ್ ಮಾರುಕಟ್ಟೆಗೆ ಮಾತ್ರ ಅನ್ವಯ ಆದ್ದರಿಂದ ಎಲ್ಲರೂ ಹೊರಗೆ ಮಾರಾಟ ಮಾಡುತ್ತಿದ್ದಾರೆ. ಶೇ.80 ರಷ್ಟು ಹೊರಗೆ ವ್ಯಾಪಾರ ಆಗುತ್ತಿದೆ. ಆದ್ದರಿಂದ ಹಳೇ ಕಾಯ್ದೆಯನ್ನು ಜಾರಿಗೆ ತರಬೇಕೆಂದರು.
ಬಿ.ಪಿ.ರಾಮಚಂದ್ರ ಮಾತನಾಡಿ, ಸಾವಿರಾರು ಕೋಟಿ ಎಪಿಎಂಸಿ ಆಸ್ತಿ ಇದ್ದು ನಿಷ್ಕ್ರಿಯವಾಗುತ್ತಿದೆ. ಹೊಸ ಕಾಯ್ದೆ ತಂದು ಉಳಿಸಿಕೊಳ್ಳಬೇಕು ಹಾಗೂ ಎಪಿಎಂಸಿ ಚುನಾವಣೆ ನಡೆಯಬೇಕೆಂದರು.

ರೈತ ಸಂಘದ ಕಾರ್ಯಾಧ್ಯಕ್ಷ ಪಿ.ಡಿ ಮಂಜಪ್ಪ , ಎಪಿಎಂಸಿ ಯಲ್ಲೇ ರೈತರ ಉತ್ಪನ್ನಗಳ ಮಾರುಕಟ್ಟೆ ಆಗಬೇಕು. ಸೆಸ್ ಕಡಿತಗೊಳಿಸಬೇಕು ಎಂದರು.
ಪ್ಯಾಟೆ ಈರಣ್ಣ, ಪ್ರಸ್ತುತ ಇರುವ ಕಾಯ್ದೆ ರದ್ದಾಗಬೇಕು, ಹೊಸ ಕಾಯ್ದೆ ಜಾರಿಯಾದರೆ ಮಾತ್ರ ರೈತರಿಗೆ ಅನುಕೂಲವಾಗುತ್ತದೆ ಎಂದರು.
ಮಾಜಿ ಎಪಿಎಂಸಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಎಪಿಎಂಸಿ ಯಿಂದಲೇ ಜನರಿಗೆ ಅಡಿಕೆ ದರ ಇತರೆ ದರ ಗೊತ್ತಾಗುತ್ತಿದೆ. ಎಪಿಎಂಸಿ ಉಳಿಸುವಂತಹ ಬದಲಾವಣೆ ತಂದು ಕಾಯ್ದೆ ಜಾರಿ ಮಾಡಬೇಕು. ದಲಾಲರ ಸಂಘದ ಅಧ್ಯಕ್ಷ ಮಾತನಾಡಿ, ಎಪಿಎಂಸಿ ಯಲ್ಲಿ ಕನಿಷ್ಟ ಆಸ್ತಿ ತೆರಿಗೆ ಹಾಕಬೇಕು.ಆಸ್ತಿ ವರ್ಗೀಕರಣ ಆಗಬೇಕೆಂದರು.
ಹಸಿರು ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಮಾತನಾಡಿ, ರೈತರ ವಿರೋಧಿ ಕಾಯ್ದೆಯಿಂದಾಗಿ ರೈತರ ತ್ಯಾಗ, ಬಲಿದಾನವೇ ಆಗಿದೆ. ಬಹಳಷ್ಟು ರಾಜ್ಯದಲ್ಲಿ ಕಾಯ್ದೆ ರದ್ದಾಗಿದ್ದು, ಇಲ್ಲಿಯೂ ರದ್ದುಪಡಿಸಿ ಹೊಸ ಕಾಯ್ದೆ ತರುವಂತೆ ಮನವಿ ಮಾಡಿದರು.

ತೂಕದವರ ಸಂಘದ ಶಬ್ಬೀರ್ ಮಾತನಾಡಿ, ಪ್ರಸ್ತುತ ಕಾಯ್ದೆಯಿಂದ ಆವಕ ಕಮ್ಮಿ ಆಗಿದ್ದು ತೂಕದವರು, ಹಮಾಲರ ಜೀವನ ಕಷ್ಟವಾಗಿದೆ. ಹೊಸ ಕಾಯ್ದೆ ಜಾರಿಗೆ ತರಬೇಕೆಂದರು.
ಶಾಸಕರಾದ ಆರಗ ಜ್ಞಾನೇಂದ್ರ ಮಾತನಾಡಿ, ತನಗೆ ಬೇಕಾದವರಿಗೆ ಉತ್ಪನ್ನ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಪ್ರಸ್ತುತ ಕಾಯ್ದೆ ನೀಡಿದೆ. ಜಿಲ್ಲೆಯ ಪ್ರಮುಖ ಬೆಳೆ ಅಡಿಕೆ. ಒಂದು ಕ್ವಿಂಟಾಲ್ ಅಡಿಕೆ ಎಪಿಎಂಸಿ ಗೆ ತರಲು 1500 ಖರ್ಚು ಬರುತ್ತದೆ. ಆದ್ದರಿಂದ ರೈತರು ಎಪಿಎಂಸಿ ಅಥವಾ ಮಲ್ಟಿ ನ್ಯಾಷನಲ್ ಯಾವುದಕ್ಕಾದರೂ ಮಾರಾಟ ಮಾಡಿ ಲಾಭ ಗಳಿಸಬಹುದೆಂಬ ಉದ್ದೇಶದಿಂದ ಜಾರಿಗೆ ತರಲಾಗಿತ್ತು ಎಂದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ ಗೌಡ ಮಾತನಾಡಿ, ಹಳೆ ಕಾಯ್ದೆಗೆ ಕೆಲ ಸುಧಾರಣೆ ತಂದು ಪರಿಣಾಮಕಾರಿಯಾಗಿ ಜಾರಿಗೊಳಿಸಿದರೆ ಎಪಿಎಂಸಿ ವ್ಯವಸ್ಥೆ ಉಳಿಯುತ್ತದೆ. ಆನ್‍ಲೈನ್ ಟ್ರೇಡಿಂಗ್‍ನಲ್ಲಿ ಸಹಕಾರಿಗಳು ಶೇ.100 ತೆರಿಗೆ ಕಟ್ಟುತ್ತಾರೆ. ಗುಣಮಟ್ಟದ ಅಡಿಕೆಗೆ ಜಿಲ್ಲೆ ನಂ.1 ಇದ್ದು ಸ್ಕ್ವಾಡ್‍ಗಳನ್ನು ಹಾಕಿ ಗುಣಮಟ್ಟ ಇನ್ನೂ ಕಾಪಾಡಬಹುದು. ರೈತರಿಗೆ ಅನುಕೂಲವಾಗುವ ಹಳೇ ಕಾಯ್ದೆ ಜಾರಿಗೊಳಿಸಬೇಕು ಎಂದರು.

ಸಮಿತಿ ಸದಸ್ಯರಾದ ಡಿ.ಎಸ್.ಅರುಣ್ ಮಾತನಾಡಿ, 2019-20 ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಕಾಯ್ದೆಯಿಂದ ಸೆಸ್ ರೂ.600 ಕೋಟಿ ಸಂಗ್ರಹವಾಗಿತ್ತು. ರೈತರಿಗೆ ಹೆಚ್ಚು ಬೆಲೆ ಸಿಗಲಿ ಎಂಬ ಉದ್ದೇಶದಿಂದ ಕಾಯ್ದೆ ತರಲಾಗಿತ್ತು. ಅಡಿಕೆ ಸೆಸ್ 0.6 ರಿಂದ 0.1 ಕ್ಕೆ ಇಳಿಸಬೇಕೆಂದು ಒತ್ತಾಯಿಸಲಾಗಿದೆ. ನಿಯಂತ್ರಣ ಮಂಡಳಿ ಸ್ಥಾಪನೆ, ಇತರೆ ನಿಯಮ ಸರಳೀಕರಣ ಪ್ರಯತ್ನ ಆಗುತ್ತಿದ್ದು, ಹಲವು ಸುಧಾರಣೆಗಳೊಂದಿಗೆ ಹೊಸ ಕಾಯ್ದೆ ತರಬೇಕೆಂದು ಕೋರಿದರು.

ಸಮಿತಿ ಸದಸ್ಯರಾದ ಅನಿಲ್‍ಕುಮಾರ್ ಮಾತನಾಡಿ, ಪ್ರಸತುತ ಎಪಿಎಂಸಿ ಕಾಯ್ದೆ ವಾಪಸ್ ಪಡೆದು, ಹಳೆ ಕಾಯದೆಗೆ ಪೂರಕ ಸುಧಾರಣೆಗಳನ್ನು ತಂದು ಜಾರಿಗೆ ತರಲು ಸಚಿವರು ಸಭೆ ಮಾಡುತ್ತಿದ್ದಾರೆ. ಶಿವಮೊಗ್ಗದ ಎಪಿಎಂಸಿ ಸದೃಢವಾಗಿದ್ದು ಉಳಿಸಿಕೊಂಡು ಹೋಗಬೇಕಿದೆ. ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ, ಭದ್ರತೆ ಉದ್ದೇಶದಿಂದ ಹೊಸ ಕಾಯ್ದೆ ಜಾರಿಗೆ ತರಬೇಕೆಂದು ರೈತರು ಹಾಗೂ ವರ್ತಕರು, ಇತರೆ ಅವಲಂಬಿತರು ಒತ್ತಾಯಿಸುತ್ತಿದ್ದು ಪಕ್ಷಾತೀತವಾಗಿ ಜಾರಿಗೊಳಿಸಲು ಕ್ರಮ ವಹಿಸಿ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ ಎಂದರು.

ಸಮಿತಿ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ ಮಾತನಾಡಿ, ಕೋಲಾರದಲ್ಲಿ ಸಭೆ ನಡೆಸಲಾಗಿದೆ. ಅಲ್ಲಿ ಮತ್ತು ಇಲ್ಲಿಯ ರೈತರು, ವರ್ತಕತು ಇತರ ಅವಲಂಬಿತರು ಕೇಂದ್ರದ ಕಾಯ್ದೆಯನ್ನು ವಾಪಸ್ ಪಡೆದು ಹೊಸ ಕಾಯ್ದೆ ತರುವಂತೆ ಒತ್ತಾಯಿಸಿದ್ದಾರೆ. ರೈತರ ಮತ್ತು ಅವಲಂಬಿತರ ಹಿತ ಕಾಪಾಡುವಂತಹ ಕಾಯ್ದೆಯನ್ನು ಜಾರಿಗೆ ತರಬೇಕು ಹಾಗೂ ಎಪಿಎಂಸಿ ಯನ್ನು ರಕ್ಷಿಸಬೇಕೆಂಬ ಸಲಹೆಯನ್ನು ಎಲ್ಲರೂ ನೀಡಿದ್ದಾರೆ ಎಂದರು.

ಸಮಿತಿ ಸದಸ್ಯರಾದ, ಹೇಮಲತಾ ನಾಯಕ್, ಎಪಿಎಂಸಿ ನಿರ್ದೇಶಕರಾದ ಗಂಗಾಧರ ಸ್ವಾಮಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಇತರರು ಉಪಸ್ಥಿತರಿದ್ದರು.

The post ಜನಪರವಾದ ಎಪಿಎಂಸಿ ಕಾಯ್ದೆ ಜಾರಿಗೊಳಿಸಲಾಗುವುದು : ಶಿವಾನಂದ ಎಸ್ ಪಾಟೀಲ್ appeared first on Hai Sandur kannada fortnightly news paper.

]]>
https://haisandur.com/2023/11/22/%e0%b2%9c%e0%b2%a8%e0%b2%aa%e0%b2%b0%e0%b2%b5%e0%b2%be%e0%b2%a6-%e0%b2%8e%e0%b2%aa%e0%b2%bf%e0%b2%8e%e0%b2%82%e0%b2%b8%e0%b2%bf-%e0%b2%95%e0%b2%be%e0%b2%af%e0%b3%8d%e0%b2%a6%e0%b3%86-%e0%b2%9c/feed/ 0
ಆಯುರ್ವೇದ ಪದ್ದತಿ ಅಳವಡಿಕೆಯಿಂದ ಆರೋಗ್ಯ-ಆಯುಷ್ಯ ವೃದ್ದಿ: ಸುಜಾತ ಕೆ.ಆರ್ https://haisandur.com/2023/11/10/%e0%b2%86%e0%b2%af%e0%b3%81%e0%b2%b0%e0%b3%8d%e0%b2%b5%e0%b3%87%e0%b2%a6-%e0%b2%aa%e0%b2%a6%e0%b3%8d%e0%b2%a6%e0%b2%a4%e0%b2%bf-%e0%b2%85%e0%b2%b3%e0%b2%b5%e0%b2%a1%e0%b2%bf%e0%b2%95%e0%b3%86%e0%b2%af/ https://haisandur.com/2023/11/10/%e0%b2%86%e0%b2%af%e0%b3%81%e0%b2%b0%e0%b3%8d%e0%b2%b5%e0%b3%87%e0%b2%a6-%e0%b2%aa%e0%b2%a6%e0%b3%8d%e0%b2%a6%e0%b2%a4%e0%b2%bf-%e0%b2%85%e0%b2%b3%e0%b2%b5%e0%b2%a1%e0%b2%bf%e0%b2%95%e0%b3%86%e0%b2%af/#respond Fri, 10 Nov 2023 12:10:37 +0000 https://haisandur.com/?p=33848 ಶಿವಮೊಗ್ಗ, ನವೆಂಬರ್ 10: ಇಂದಿನ ಧಾವಂತದ ಜೀವನ ಶೈಲಿ ಅನಾರೋಗ್ಯಕ್ಕೆ ಕಾರಣವಾಗುತ್ತಿದ್ದು, ಆಯುರ್ವೇದ ಪದ್ದತಿ ಅಳವಡಿಕೆಯಿಂದ ಉತ್ತಮ ಆರೋಗ್ಯ-ಆಯುಷ್ಯವನ್ನು ನಮ್ಮದಾಗಿಸಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸುಜಾತ ಕೆ.ಆರ್. ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆ ಶಿವಮೊಗ್ಗ, ಜಿಲ್ಲಾ ಸರ್ಕಾರಿ ನೌಕರರ ಸಂಘ, ಖಾಸಗಿ ವೈದ್ಯಕೀಯ ಮಹಾವಿದ್ಯಾಲಯಗಳು, ನೀಮಾ ಜಿಲ್ಲಾ ಘಟಕ, ಎಎಫ್‍ಐ ಜಿಲ್ಲಾ ಘಟಕ ಹಾಗೂ ಜಿಲ್ಲೆಯ ಇತರೆ ಸಂಘಸಂಸ್ಥೆಗಳ […]

The post ಆಯುರ್ವೇದ ಪದ್ದತಿ ಅಳವಡಿಕೆಯಿಂದ ಆರೋಗ್ಯ-ಆಯುಷ್ಯ ವೃದ್ದಿ: ಸುಜಾತ ಕೆ.ಆರ್ appeared first on Hai Sandur kannada fortnightly news paper.

]]>
ಶಿವಮೊಗ್ಗ, ನವೆಂಬರ್ 10: ಇಂದಿನ ಧಾವಂತದ ಜೀವನ ಶೈಲಿ ಅನಾರೋಗ್ಯಕ್ಕೆ ಕಾರಣವಾಗುತ್ತಿದ್ದು, ಆಯುರ್ವೇದ ಪದ್ದತಿ ಅಳವಡಿಕೆಯಿಂದ ಉತ್ತಮ ಆರೋಗ್ಯ-ಆಯುಷ್ಯವನ್ನು ನಮ್ಮದಾಗಿಸಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸುಜಾತ ಕೆ.ಆರ್. ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆ ಶಿವಮೊಗ್ಗ, ಜಿಲ್ಲಾ ಸರ್ಕಾರಿ ನೌಕರರ ಸಂಘ, ಖಾಸಗಿ ವೈದ್ಯಕೀಯ ಮಹಾವಿದ್ಯಾಲಯಗಳು, ನೀಮಾ ಜಿಲ್ಲಾ ಘಟಕ, ಎಎಫ್‍ಐ ಜಿಲ್ಲಾ ಘಟಕ ಹಾಗೂ ಜಿಲ್ಲೆಯ ಇತರೆ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಇಂದು ಸುವರ್ಣ ಸಾಂಸ್ಕøತಿಕ ಭವನದಲ್ಲಿ ಏರ್ಪಡಿಸಲಾಗಿದ್ದ 8ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಮತ್ತು ಧನ್ವಂತರಿ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚಿಕ್ಕವರಿಂದ ಹಿಡಿದು ಎಲ್ಲರೂ ಇಂದು ಧಾವಂತದಲ್ಲಿ ಬದುಕುತ್ತಿದ್ದು, ಸುಸ್ಥಿರವಲ್ಲದ ಜೀವನ ಶೈಲಿಯಿಂದ ರೋಗ ಮತ್ತು ಕೊರಗಿನ ಜೀವನ ನಡೆಸುತ್ತಿದ್ದೇವೆ. ನಮ್ಮ ಪ್ರಕೃತಿಯನ್ವಯ ಬದುಕುವುದನ್ನು ಬಿಟ್ಟು ಅಕ್ಕಪಕ್ಕದವರನ್ನು ನೋಡಿ ಸ್ಪರ್ಧೆಯಲ್ಲಿ ಬದುಕುತ್ತಾ ಜೀವನಶೈಲಿಯನ್ನು ಹಾಳು ಮಾಡಿಕೊಳ್ಳುತ್ತಿದ್ದೇವೆ. ತ್ವರಿತ ಪರಿಣಾಮಕ, ಫಲಿತಾಂಶ ನೀಡುವ ಪದ್ದತಿಗೆ ಮಾರು ಹೋಗಿದ್ದೇವೆ.

ಪ್ರಾಣಿಗಳು ಸದಾ ಪ್ರಕೃತಿಯೊಂದಿಗೆ ಇರುವುದರಿಂದ ಅವುಗಳಿಗೆ ವಯಸ್ಸಾದರೂ ಅದು ಗೊತ್ತಾಗುವುದಿಲ್ಲ. ಸದಾ ಚಟುವಟಿಕೆಯಿಂದ, ಆಯುಷ್ಯದಿಂದಿರುತ್ತವೆ. ಅದೇ ನಾವು ನೀಡುವ ಆಹಾರ ತಿನ್ನುವ ಜಾನುವಾರು ರೋಗಕ್ಕೀಡಾಗುತ್ತವೆ. ಮಕ್ಕಳನ್ನು ಸಹ ನಾವು ಧಾವಂತಕ್ಕೆ, ಸ್ಪರ್ಧೆಗೆ ತಳ್ಳುತ್ತಿರುವುದರಿಂದ ಒತ್ತಡಕ್ಕೀಡಾಗುತ್ತಿದ್ದಾರೆ. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಶುರುವಾಗುತ್ತಿವೆ. ಔಷಧಿಗಳ ಜಾಹಿರಾತು ಸಹ ಹೆಚ್ಚುತ್ತಿದ್ದು ದೊಡ್ಡ ವ್ಯಾಪಾರದಂತೆ ಆಗಿದೆ.

ಆದ್ದರಿಂದ ನಾವು ಆಯುರ್ವೇದ ಪದ್ದತಿಯೊಂದಿಗೆ ಉತ್ತಮ ಜೀವನಶೈಲಿ ಅಳವಡಿಸಿಕೊಂಡು ಅನುಸರಿಸಬೇಕು. ಆಯುರ್ವೇದ ವಿದ್ಯಾರ್ಥಿಗಳು, ಯುವಜನತೆ ಎಲ್ಲೆಡೆ ಆಯುರ್ವೇದ ಪದ್ದತಿ ಕುರಿತು ಅರಿವು ಮೂಡಿಸಿ, ಎಲ್ಲರಿಗೂ ತಲುಪಿಸಬೇಕೆಂದು ತಿಳಿಸಿದರು.

ಶಿವಮೊಗ್ಗ ತಾಲ್ಲೂಕು ತಹಶೀಲ್ದಾರರಾದ ನಾಗರಾಜ್ ಮಾತನಾಡಿ, ನಗರ ಮತ್ತು ಗ್ರಾಮೀಣ ಭಾಗದಲ್ಲೆಲ್ಲ ಆಯುರ್ವೇದ ಪದ್ದತಿಯನ್ನು ಪ್ರಚಾರ ಮಾಡಬೇಕು. ಎಲ್ಲರೂ ಆಯುರ್ವೇದ ವೈದ್ಯ ಪದ್ದತಿಯನ್ನು ಅಳವಡಿಸಿಕೊಂಡು ಆರೋಗ್ಯಕರ ಜೀವನ ನಡೆಸಬೇಕೆಂದು ಕರೆ ನೀಡಿದರು.

ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಯ ಪ್ರಾಚಾರ್ಯರಾದ ಡಾ.ಎಂ.ಎಸ್.ದೊಡ್ಡಮನಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಆಯುರ್ವೇದ ಪದ್ದತಿ ಕುರಿತು ಉತ್ತಮ ಕಾರ್ಯಕ್ರಮಗಳನ್ನು ನೀಡಿದೆ. ಆಯುರ್ವೇದ ವೈದ್ಯರ ಮುಖಾಂತರ ಚಿಕಿತ್ಸಾ ವಿಧಾನಗಳನ್ನು ಅಳವಡಿಸಿಕೊಂಡು ಸಾರ್ವಜನಿಕರು ಉಪಯೋಗ ಪಡೆಯಬೇಕೆಂದರು.

ಡಾ.ರವಿಶಂಕರ್ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿ, ಐದು ಸಾವಿರದಷ್ಟು ಪುರಾತನವಾದ ವೈದ್ಯ ಪದ್ದತಿ ಆಯುರ್ವೇದ. ಆಯುಷ್ಯವಂತರಾಗಿರಲು ಆಯುರ್ವೇದ ಪದ್ದತಿಯನ್ನು ಅನುಸರಿಸಬೇಕು. ಆಯುರ್ವೇದ ಪದ್ದತಿ ಅಳವಡಿಕೆಯಿಂದ ಆರೋಗ್ಯ ಮತ್ತು ಆಯುಷ್ಯ ವೃದ್ದಿಯಾಗುತ್ತದೆ. ರೋಗ ಬರುವುದಕ್ಕೂ ಮುನ್ನ ಆರೋಗ್ಯ ಕಾಪಾಡುವುದು ಹಾಗೂ ರೋಗ ಬಂದ ನಂತರ ಚಿಕಿತ್ಸೆ ನೀಡುವುದು ಆಯುರ್ವೇದ ಪದ್ದತಿಯ ಧ್ಯೇಯವಾಗಿದೆ. ಇತ್ತೀಚಿನ ಚಿಕ್ಕ ವಯಸ್ಸಿನವರಲ್ಲಿಯೂ ಅಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿದ್ದು ಇದಕ್ಕೆ ಕೇವಲ ಚಿಕಿತ್ಸೆ ನೀಡಿದರೆ ಸಾಲದು, ಬದಲಾಗಿ ಆಹಾರ, ವಿಹಾರ, ಜೀವನಶೈಲಿ ಬದಲಾವಣೆ ಮಾಡುವುದು ಅಗತ್ಯ. ಆಯುರ್ವೇದದಿಂದ ಇದನ್ನು ಮಾಡಬಹುದು. ಈ ಪದ್ದತಿ ಎಲ್ಲ ಜನತೆಗೆ ತಲುಪಬೇಕೆಂಬ ಉದ್ದೇಶದಿಂದ ಸರ್ಕಾರ 2016 ರಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಧನ್ವಂತರಿ ಜಯಂತಿಯ ಶುಭದಿನದಂದು ಆಚರಿಸಲು ನಿರ್ಧರಿಸಿತು.

ಆಯುರ್ವೇದ ದಿನಾಚರಣೆ ಪ್ರಯುಕ್ತ ಸೆ.28 ರಿಂದ ನ.9 ರವರೆಗೆ ವಿದ್ಯಾರ್ಥಿಗಳಿಗಾಗಿ ಆಯುರ್ವೇದ, ರೈತರಿಗಾಗಿ ಆಯುರ್ವೇದ ಮತ್ತು ಸಾರ್ವಜನಿಕರ ಆರೋಗ್ಯಕ್ಕಾಗಿ ಆರೋಗ್ಯವೆಂಬ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಹಾಗೂ ಇಂದು ಉಚಿತ ಆರೋಗ್ಯ ಶಿಬಿರ ಮತ್ತು ಡಾ.ಪತಂಜಲಿ ಮತ್ತು ಡಾ.ರವಿರಾಜ್‍ರಿಂದ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಎ.ಎಸ್. ಪುಷ್ಪ, ಆಯುರ್ವೇದ ಮಹಾವಿದ್ಯಾಲಯದ ಆರ್‍ಎಂಓ ಹರ್ಷಪುತ್ರಾಯ, ನೋಡಲ್ ಅದಿಕಾರಿ ಡಾ.ಶಿವಾನಂದ್, ಡಾ.ಈರಣ್ಣ, ಡಾ.ಸಂತೋಷ್, ಡಾ.ರಾಘವೇಂದ್ರ, ಡಾ.ಹಿರೇಮಠ್, ಇತರೆ ವೈದ್ಯರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.

The post ಆಯುರ್ವೇದ ಪದ್ದತಿ ಅಳವಡಿಕೆಯಿಂದ ಆರೋಗ್ಯ-ಆಯುಷ್ಯ ವೃದ್ದಿ: ಸುಜಾತ ಕೆ.ಆರ್ appeared first on Hai Sandur kannada fortnightly news paper.

]]>
https://haisandur.com/2023/11/10/%e0%b2%86%e0%b2%af%e0%b3%81%e0%b2%b0%e0%b3%8d%e0%b2%b5%e0%b3%87%e0%b2%a6-%e0%b2%aa%e0%b2%a6%e0%b3%8d%e0%b2%a6%e0%b2%a4%e0%b2%bf-%e0%b2%85%e0%b2%b3%e0%b2%b5%e0%b2%a1%e0%b2%bf%e0%b2%95%e0%b3%86%e0%b2%af/feed/ 0
ಮಕ್ಕಳಿಗೆ ಪಾಠ ಹೇಳಿಕೊಡುವುದು ಪುಣ್ಯದ ಕೆಲಸ : ಮಧು ಬಂಗಾರಪ್ಪ https://haisandur.com/2023/11/08/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%aa%e0%b2%be%e0%b2%a0-%e0%b2%b9%e0%b3%87%e0%b2%b3%e0%b2%bf%e0%b2%95%e0%b3%8a%e0%b2%a1%e0%b3%81%e0%b2%b5%e0%b3%81%e0%b2%a6/ https://haisandur.com/2023/11/08/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%aa%e0%b2%be%e0%b2%a0-%e0%b2%b9%e0%b3%87%e0%b2%b3%e0%b2%bf%e0%b2%95%e0%b3%8a%e0%b2%a1%e0%b3%81%e0%b2%b5%e0%b3%81%e0%b2%a6/#respond Wed, 08 Nov 2023 11:04:41 +0000 https://haisandur.com/?p=33834 ಶಿವಮೊಗ್ಗ, ನವೆಂಬರ್ 08: ಮಕ್ಕಳಿಗೆ ಪಾಠ ಹೇಳಿಕೊಡುವುದು ಒಂದು ಪುಣ್ಯದ ಕೆಲಸ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಪ್ರಿಯದರ್ಶಿನಿ ಆಂಗ್ಲ ಪ್ರೌಢಶಾಲೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಬದಲಾದ ಪರೀಕ್ಷಾ ಪದ್ಧತಿ ಕುರಿತಾದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಮಂಡಳಿಯು ಮಕ್ಕಳಿಗೆ ಅವಕಾಶಗಳನ್ನು ನೀಡುವ ದೃಷ್ಠಿಯಿಂದ ಎಸ್‍ಎಸ್ ಎಲ್‍ಸಿ ವಾರ್ಷಿಕ ಪರೀಕ್ಷೆಯನ್ನು ಮೂರು ಪ್ರಯತ್ನಗಳಲ್ಲಿ ನಡೆಸಲು ತೀರ್ಮಾನಿಸಿದೆ. ಒಂದೇ ಬಾರಿ […]

The post ಮಕ್ಕಳಿಗೆ ಪಾಠ ಹೇಳಿಕೊಡುವುದು ಪುಣ್ಯದ ಕೆಲಸ : ಮಧು ಬಂಗಾರಪ್ಪ appeared first on Hai Sandur kannada fortnightly news paper.

]]>
ಶಿವಮೊಗ್ಗ, ನವೆಂಬರ್ 08: ಮಕ್ಕಳಿಗೆ ಪಾಠ ಹೇಳಿಕೊಡುವುದು ಒಂದು ಪುಣ್ಯದ ಕೆಲಸ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.
ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಪ್ರಿಯದರ್ಶಿನಿ ಆಂಗ್ಲ ಪ್ರೌಢಶಾಲೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಬದಲಾದ ಪರೀಕ್ಷಾ ಪದ್ಧತಿ ಕುರಿತಾದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಮಂಡಳಿಯು ಮಕ್ಕಳಿಗೆ ಅವಕಾಶಗಳನ್ನು ನೀಡುವ ದೃಷ್ಠಿಯಿಂದ ಎಸ್‍ಎಸ್ ಎಲ್‍ಸಿ ವಾರ್ಷಿಕ ಪರೀಕ್ಷೆಯನ್ನು ಮೂರು ಪ್ರಯತ್ನಗಳಲ್ಲಿ ನಡೆಸಲು ತೀರ್ಮಾನಿಸಿದೆ. ಒಂದೇ ಬಾರಿ ಮಾತ್ರ ಪರೀಕ್ಷಾ ಶುಲ್ಕವನ್ನು ಪಾವತಿಸಿ 3 ಅವಕಾಶಗಳೊಂದಿಗೆ ಪರೀಕ್ಷೆಗಳನ್ನು ಬರೆಯಬಹುದಾಗಿದೆ. ಮೊದಲ ಪರೀಕ್ಷೆಯಲ್ಲಿಯೇ ಉತ್ತೀರ್ಣರಾದ ವಿದ್ಯಾರ್ಥಿಗಳು ಮುಂದಿನ ಎರಡು ಅವಕಾಶಗಳನ್ನು ಉಪಯೋಗಿಸಿಕೊಳ್ಳುವುದು ಅವರ ಐಚ್ಛಿಕ ವಿಷಯ. ಮೂರು ಪರೀಕ್ಷೆಗಳಲ್ಲಿ ಯಾವ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದಿರುತ್ತಾರೋ ಆ ಅಂಕವನ್ನು ಪರಿಗಣಿಸಲಾಗುತ್ತದೆ. ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಈ ಅವಕಾಶಗಳನ್ನು ಕಲ್ಪಿಸಲಾಗಿದೆ.
ಮಕ್ಕಳು ಯಾವುದೇ ಮಾಧ್ಯಮದಲ್ಲಿ ಓದುತ್ತಿದ್ದರೂ ಸಹ ಕಡ್ಡಾಯವಾಗಿ ಕನ್ನಡವನ್ನು ಓದಲೇಬೇಕು. ಶಿಕ್ಷಣವನ್ನು ಒಳ್ಳೆಯ ರೀತಿಯಲ್ಲಿ ತೆಗೆದುಕೊಂಡು ಹೋಗುವ ದೃಷ್ಠಿಯಿಂದ ಮುಂದಿನ ವರ್ಷದಲ್ಲಿ ರಾಜ್ಯದಲ್ಲಿ 500 ರಿಂದ 600 ಕೆಪಿಎಸ್ ಶಾಲೆಗಳನ್ನು ತೆರೆಯಲು ನಿರ್ಧರಿಸಿದೆ. ಈ ಬಾರಿ 43 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದು, 13 ಸಾವಿರ ಖಾಯಂ ಶಿಕ್ಷಕರನ್ನು ನೇಮಕ ಮಾಡಲಾಗಿದ್ದು, ಶಾಲೆಗಳಲ್ಲಿನ ಸಮಸ್ಯೆ ಪರಿಹಾರಕ್ಕೆ ನಿಮ್ಮ ಸಹಕಾರ ನನಗೆ ಅಗತ್ಯ ಎಂದು ಹೇಳಿದರು.

ಡಿಡಿಪಿಐ ಸಿ.ಆರ್ ಪರಮೇಶ್ ಮಾತನಾಡಿ, ಎಸ್‍ಎಸ್‍ಎಲ್‍ಸಿ ಎನ್ನುವುದು ಪ್ರತಿ ವಿದ್ಯಾರ್ಥಿಯ ಜೀವನದ ಮುಖ್ಯ ಘಟ್ಟ. ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ಹೋಗಲಾಡಿಸಲು ಅತ್ಯುತ್ತಮವಾದ ಆಸಕ್ತಿಯನ್ನು ತುಂಬಬೇಕು. ಇಪ್ಪತ್ತೆರಡು ಸಾವಿರ ವಿದ್ಯಾರ್ಥಿಗಳ ಪೈಕಿ ನಾಲ್ಕು ಸಾವಿರ ವಿದ್ಯಾರ್ಥಿಗಳು ಸರಾಸರಿಗಿಂತ ಕಡಿಮೆ ಇದ್ದಾರೆ. ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಹೆಚ್ಚಿನ ಒತ್ತು ನೀಡಬೇಕು. ವಿಷಯವಾರು ಸಂಬಂಧಪಟ್ಟ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು. ಎಲ್ಲಾ ವಿಷಯವಾರು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಹಾಜರಾತಿ ಬಹಳ ಮುಖ್ಯ. ಶಿಕ್ಷಕರು ಪೋಷಕರೊಂದಿಗೆ ಸಮಾಲೋಚನೆ ನಡೆಸಬೇಕು. ಸ್ಥಳೀಯ ಪರಿಸ್ಥಿತಿಯನ್ನು ಮನಗಂಡು ಪರೀಕ್ಷೆಗೆ ಬೇಕಾದ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು.

ವಿಶೇಷ ಉಪನ್ಯಾಸಕರಾದ ಹರಿಪ್ರಸಾದ್ ಮಾತನಾಡಿ, ಬದಲಾದ ಪರೀಕ್ಷಾ ಪದ್ಧತಿಯನ್ನು ತುಂಬಾ ವೈಭವೀಕರಿಸಲಾಗಿದೆ. ಅದನ್ನು ಕಡಿಮೆ ಮಾಡಬೇಕು. ಮಕ್ಕಳ ಮೇಲಿನ ಒತ್ತಡವನ್ನು ನಿವಾರಣೆ ಮಾಡಬೇಕು ಮತ್ತು ಪರೀಕ್ಷೆಯನ್ನು ಸುಲಲಿತವಾಗಿ ಮಾಡಬೇಕು. ಇವುಗಳು ಬದಲಾದ ಪರೀಕ್ಷಾ ಪದ್ಧತಿಯ ಆಶಯಗಳು ಇವುಗಳನ್ನು ತಿಳಿಯುವುದು ಉತ್ತಮ. ಯಾವುದೇ ಪರೀಕ್ಷೆ ನಡೆಯುವಾಗ ಅದಕ್ಕೆ ಸಂಬಂಧ ಪಟ್ಟ ಬ್ಲ್ಯೂಪ್ರಿಂಟ್ ಮತ್ತು ಮಾದರಿ ಪ್ರಶ್ನೆ ಪತ್ರಿಕೆಯನ್ನು ಮಂಡಳಿಯು ತನ್ನ ವೆಬ್‍ಸೈಟ್‍ನಲ್ಲಿ ಅಪ್ಲೋಡ್ ಮಾಡುತ್ತದೆ. ಶಿಕ್ಷಕರು ಅದನ್ನು ಗಮನಿಸಿ ಮಕ್ಕಳಿಗೆ ಸರಿಯಾದ ಕ್ರಮದಲ್ಲಿ ತಿಳಿಸಬೇಕು. ಮಕ್ಕಳು ಒಂದು ವಿಷಯದ ಆಳದ ಕಡೆಗೆ ಹೆಚ್ಚು ಗಮನ ಹರಿಸಬೇಕು ಮತ್ತು ಶೇ.75 ಹಾಜರಾತಿಯನ್ನು ಹೊಂದಿರಬೇಕು ಎಂದು ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಪ್ರೊಫೆಸರ್ ಚಂದ್ರಕಾಂತ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೃಷ್ಣಪ್ಪ, ಗ್ಲೋಬಲ್ ಎಜುಕೇಶನ್ ಸೊಸೈಟಿಯ ರಮೇಶ್, ಡಯೆಟ್ ಪ್ರಾಂಶುಪಾಲರಾದ ಬಸವರಾಜಪ್ಪ, ಕಲಗೋಡು ರತ್ನಾಕರ್ ಮತ್ತಿತರರು ಉಪಸ್ಥತರಿದ್ದರು.

The post ಮಕ್ಕಳಿಗೆ ಪಾಠ ಹೇಳಿಕೊಡುವುದು ಪುಣ್ಯದ ಕೆಲಸ : ಮಧು ಬಂಗಾರಪ್ಪ appeared first on Hai Sandur kannada fortnightly news paper.

]]>
https://haisandur.com/2023/11/08/%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%aa%e0%b2%be%e0%b2%a0-%e0%b2%b9%e0%b3%87%e0%b2%b3%e0%b2%bf%e0%b2%95%e0%b3%8a%e0%b2%a1%e0%b3%81%e0%b2%b5%e0%b3%81%e0%b2%a6/feed/ 0
ತಂಬಾಕು ಮುಕ್ತ ಜೀವನದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ನ್ಯಾ.ಮಂಜುನಾಥ ನಾಯಕ್ https://haisandur.com/2023/11/06/%e0%b2%a4%e0%b2%82%e0%b2%ac%e0%b2%be%e0%b2%95%e0%b3%81-%e0%b2%ae%e0%b3%81%e0%b2%95%e0%b3%8d%e0%b2%a4-%e0%b2%9c%e0%b3%80%e0%b2%b5%e0%b2%a8%e0%b2%a6%e0%b2%bf%e0%b2%82%e0%b2%a6-%e0%b2%89%e0%b2%a4/ https://haisandur.com/2023/11/06/%e0%b2%a4%e0%b2%82%e0%b2%ac%e0%b2%be%e0%b2%95%e0%b3%81-%e0%b2%ae%e0%b3%81%e0%b2%95%e0%b3%8d%e0%b2%a4-%e0%b2%9c%e0%b3%80%e0%b2%b5%e0%b2%a8%e0%b2%a6%e0%b2%bf%e0%b2%82%e0%b2%a6-%e0%b2%89%e0%b2%a4/#respond Mon, 06 Nov 2023 09:07:33 +0000 https://haisandur.com/?p=33808 ಶಿವಮೊಗ್ಗ, ನವೆಂಬರ್ 06: ತಂಬಾಕು ಸೇವನೆಯಿಂದ ತನ್ನ ಆರೋಗ್ಯ ಮಾತ್ರವಲ್ಲ ಸುತ್ತಮುತ್ತಲಿನ ಆರೋಗ್ಯವೂ ಕೆಡುತ್ತದೆ. ತಂಬಾಕು ಮುಕ್ತ ಜೀವನದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಜಿಲ್ಲಾ ತರಬೇತಿ ಕೇಂದ್ರದಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳಿಗೆ […]

The post ತಂಬಾಕು ಮುಕ್ತ ಜೀವನದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ನ್ಯಾ.ಮಂಜುನಾಥ ನಾಯಕ್ appeared first on Hai Sandur kannada fortnightly news paper.

]]>
ಶಿವಮೊಗ್ಗ, ನವೆಂಬರ್ 06: ತಂಬಾಕು ಸೇವನೆಯಿಂದ ತನ್ನ ಆರೋಗ್ಯ ಮಾತ್ರವಲ್ಲ ಸುತ್ತಮುತ್ತಲಿನ ಆರೋಗ್ಯವೂ ಕೆಡುತ್ತದೆ. ತಂಬಾಕು ಮುಕ್ತ ಜೀವನದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಜಿಲ್ಲಾ ತರಬೇತಿ ಕೇಂದ್ರದಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳಿಗೆ ‘ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ 2003 ಕಾಯ್ದೆಯ ಪರಿಣಾಮಕಾರಿ ಅನುಷ್ಟಾನ’ ಕುರಿತು ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಂಬಾಕು ಸೇವನೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದೊಡ್ಡ ದುಷ್ಪರಿಣಾಮ ಬೀರುತ್ತದೆ. ತಂಬಾಕು, ಬೀಡಿ, ಸಿಗರೇಟು ಸೇದುವುದು ತನಗೆ ಮಾತ್ರವಲ್ಲ ಅಕ್ಕಪಕ್ಕದವರ ಮೇಲೆ, ಸುತ್ತಮುತ್ತಲಿನ ವಾತಾವರಣದ ಮೇಲೆ ಸಹ ದುಷ್ಪರಿಣಾಮ ಬೀರುತ್ತದೆ. ಈ ವಿಷಯವನ್ನು ಸಮುದಾಯ ಆರೋಗ್ಯಾಧಿಕಾರಿಗಳು ಎಲ್ಲರಿಗೂ ಮುಟ್ಟಿಸಬೇಕು. ತಂಬಾಕು ಬಳಕೆ ವಿರುದ್ದ ಜಾಗೃತಿ ಮೂಡಿಸಬೇಕು.

ತಂಬಾಕು ಮೊದಲನೇ ಹಂತವಾದರೆ, ಗಾಂಜಾ ಎರಡನೇ ಹಂತ. ಯುವಜನತೆ ಮೊದಲು ತಂಬಾಕು, ಬೀಡಿ ಸಿಗರೇಟ್ ಸೇವನೆಯಿಂದ ಆರಂಭಿಸಿ ಗಾಂಜಾ ಸೇದಲು ಶುರುವಿಡುತ್ತಾರೆ. ಶಿವಮೊಗ್ಗದಲ್ಲಿ ಗಾಂಜಾ ಬಳಕೆ ಹೆಚ್ಚಿದೆ. ಇದಕ್ಕೆ ಕಡಿವಾಣ ಹಾಕಬೇಕು. ಜಾಗೃತಿ ಮೂಡಿಸಬೇಕು. ತಂಬಾಕು ಚಟಕ್ಕೆ ಬೀಳದಂತೆ ನೋಡಿಕೊಳ್ಳಬೇಕು. ಸಮುದಾಯ ಆರೋಗ್ಯಾಧಿಕಾರಿಗಳು ಜನ ಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಂಬಾಕು ಸೇವನೆ ದುಷ್ಪರಿಣಾಮದ ಬಗ್ಗೆ ತಿಳಿಸಬೇಕು. ಆಗ ಇಂತಹ ಕಾರ್ಯಾಗಾರಗಳು ಯಶಸ್ಸು ಕಾಣುತ್ತವೆ ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಲ್ಲಪ್ಪ ಓ ಮಾತನಾಡಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ಶಾಲಾ ತರಬೇತಿ, ಕೋಟ್ಪಾ ಪ್ರಕರಣದ ಡ್ರೈವ್‍ಗಳು, ವಿವಿಧ ಅಧಿಕಾರಿಗಳಿಗೆ ತರಬೇತಿ, ಮಾಹಿತಿ, ಶಿಕ್ಷಣ ಸಂಪರ್ಕ ಕಾರ್ಯಕ್ರಮಗಳು ಮತ್ತು ತಂಬಾಕು ವ್ಯಸನಮುಕ್ತಿ ಸೇವೆಗಳು ಜಿಲ್ಲೆಯಲ್ಲಿ ಜಾರಿಯಲ್ಲಿರುತ್ತವೆ.

ಜಿಲ್ಲೆಯಲ್ಲಿ 2016 ರಿಂದ ಇಲ್ಲಿಯವರೆಗೆ ಒಟ್ಟು 700 ಶಾಲಾ ಕಾಲೇಜುಗಳಲ್ಲಿ ತರಬೇತಿ ನೀಡಲಾಗಿದೆ. ಸುಮಾರು 50,000 ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದಿದ್ದು 389 ವಿದ್ಯಾಸಂಸ್ಥೆಗಳನ್ನು ತಂಬಾಕು ಮುಕ್ತ ವಿದ್ಯಾಸಂಸ್ಥೆಗಳೆಂದು ಘೋಷಿಸಲಾಗಿದೆ.

ಈವರೆಗೆ ಕೋಟ್ಪಾ ಕಾಯ್ದೆ ಉಲ್ಲಂಘನೆಗಳನ್ನು ಪತ್ತೆಹಚ್ಚಿ ಒಟ್ಟು 493 ದಾಳಿಗಳು, ಸೆಕ್ಷನ್ 4 ರಡಿ 5272 ಪ್ರಕರಣಗಳು, ಸೆಕ್ಷನ್ 61 ಅಡಿ 2498, ಸೆ.6ಬಿ ಅಡಿ 1292 ಸೇರಿದಂತೆ ಒಟ್ಟು 10242 ಪ್ರಕರಣ ದಾಖಲಿಸಿ ರೂ.6,25,140 ದಂಡ ಸಂಗ್ರಹಿಸಲಾಗಿದೆ. 2016 ರಿಂದ ಇಲ್ಲಿಯವರೆಗೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ, ಸಂಘ ಸಂಸ್ಥೆಗಳಿಗೆ, ತಂಬಾಕು ಮಾರಾಟಗಾರರಿಗೆ ಒಟ್ಟು 35 ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಹೋರ್ಡಿಂಗ್ಸ್‍ಗಳು, ಕರಪತ್ರಗಳು, ಗೋಡೆ ಬರಹಗಳು, ಬೀದಿ ನಾಟಕಗಳು, ಎಲ್‍ಇಡಿ ಪ್ರದರ್ಶನಗಳು, ಆಕಾಶವಾಣಿ ಕಾರ್ಯಕ್ರಮಗಳು ಹಾಗೂ ಗುಲಾಬಿ ಆಂದೋಲನಗಳನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಆಸ್ಪತ್ರೆಯಲ್ಲಿ ತಂಬಾಕು ವ್ಯಸನಮುಕ್ತಿ ಕೇಂದ್ರ ಸ್ಥಾಪಿಸಲಾಗಿದ್ದು 2016 ರಿಂದ ಇಲ್ಲಿಯವರೆಗೆ 20286 ಫಲಾನುಭವಿಗಳು ಭೇಟಿ ನೀಡಿದ್ದು 2727 ಜನರು ವ್ಯಸನ ಮುಕ್ತಿ ಹೊಂದಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎನ್.ಚಂದನ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಲಹೆಗಾರ ಹೇಮಂತ್‍ರಾಜ್, ಸಮಾಜ ಕಾರ್ಯಕರ್ತ ರವಿರಾಜು, ಸಮುದಾಯ ಆರೋಗ್ಯಾಧಿಕಾರಿಗಳು ಇತರರು ಹಾಜರಿದ್ದರು.

The post ತಂಬಾಕು ಮುಕ್ತ ಜೀವನದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ನ್ಯಾ.ಮಂಜುನಾಥ ನಾಯಕ್ appeared first on Hai Sandur kannada fortnightly news paper.

]]>
https://haisandur.com/2023/11/06/%e0%b2%a4%e0%b2%82%e0%b2%ac%e0%b2%be%e0%b2%95%e0%b3%81-%e0%b2%ae%e0%b3%81%e0%b2%95%e0%b3%8d%e0%b2%a4-%e0%b2%9c%e0%b3%80%e0%b2%b5%e0%b2%a8%e0%b2%a6%e0%b2%bf%e0%b2%82%e0%b2%a6-%e0%b2%89%e0%b2%a4/feed/ 0
ಝಿಕಾ ವೈರಸ್ ಸೋಂಕು-ಭಯಬೇಡ ಎಚ್ಚರವಿರಲಿ: ಡಿಸಿ https://haisandur.com/2023/11/04/%e0%b2%9d%e0%b2%bf%e0%b2%95%e0%b2%be-%e0%b2%b5%e0%b3%88%e0%b2%b0%e0%b2%b8%e0%b3%8d-%e0%b2%b8%e0%b3%8b%e0%b2%82%e0%b2%95%e0%b3%81-%e0%b2%ad%e0%b2%af%e0%b2%ac%e0%b3%87%e0%b2%a1-%e0%b2%8e%e0%b2%9a/ https://haisandur.com/2023/11/04/%e0%b2%9d%e0%b2%bf%e0%b2%95%e0%b2%be-%e0%b2%b5%e0%b3%88%e0%b2%b0%e0%b2%b8%e0%b3%8d-%e0%b2%b8%e0%b3%8b%e0%b2%82%e0%b2%95%e0%b3%81-%e0%b2%ad%e0%b2%af%e0%b2%ac%e0%b3%87%e0%b2%a1-%e0%b2%8e%e0%b2%9a/#respond Sat, 04 Nov 2023 11:22:22 +0000 https://haisandur.com/?p=33788 ಶಿವಮೊಗ್ಗ, ನವೆಂಬರ್ 04: ಝಿಕಾ ಎಂಬುದು ಒಂದು ವೈರಸ್ ಸೋಂಕು. ಡೆಂಗೀ, ಚಿಕೂನ್‍ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು ಝಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈ ರೋಗದ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿದ್ದಾರೆ.ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು(ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಬಹುತೇಕ ಝಿಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ […]

The post ಝಿಕಾ ವೈರಸ್ ಸೋಂಕು-ಭಯಬೇಡ ಎಚ್ಚರವಿರಲಿ: ಡಿಸಿ appeared first on Hai Sandur kannada fortnightly news paper.

]]>
ಶಿವಮೊಗ್ಗ, ನವೆಂಬರ್ 04: ಝಿಕಾ ಎಂಬುದು ಒಂದು ವೈರಸ್ ಸೋಂಕು. ಡೆಂಗೀ, ಚಿಕೂನ್‍ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು ಝಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈ ರೋಗದ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿದ್ದಾರೆ.
ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು(ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಬಹುತೇಕ ಝಿಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ.
ಗರ್ಭಾವಸ್ಥೆಯಲ್ಲಿ ಝಿಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ(ಮೈಕ್ರೊಸೆಫಾಲಿ) ಬೆಳವಣಿಗೆ ದೋಷ ಕಂಡುಬರಬಹುದು.
ಝಿಕಾ ವೈರಸ್ ಪತ್ತೆ ಹಚ್ಚುವ ವಿಧಾನ :
ರೋಗ ಲಕ್ಷಣಗಳು ಕಂಡು ಬಂದವರ ರಕ್ತದ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಪತ್ತೆ ಹಚ್ಚಬಹುದು.

ಝಿಕಾ ವೈರಸ್ ಸೋಂಕು ದೃಢಪಟ್ಟಲ್ಲಿ ತೆಗೆದುಕೊಳ್ಳುವ ಕ್ರಮ :
•ಝಿಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿರುವುದಿಲ್ಲ.
•ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಸಾಕಷ್ಟು ವಿಶ್ರಾಂತಿ ಪಡೆಯುವುದು.
•ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥಗಳನ್ನು ಬಳಸುವುದು.
•ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಗಳನ್ನು ಸೇವಿಸಬೇಕು ಹಾಗೂ ರೋಗ ಲಕ್ಷಣಗಳು ಹೆಚ್ಚಾದರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು.
•ಝಿಕಾ ವೈರಸ್ ಸೋಂಕಿತರು ಬೇರೆಯವರಿಗೆ ರೋಗ ಹರಡದಂತೆ ತಡೆಯಲು ಸೊಳ್ಳೆ ಪರದೆಯನ್ನು ಬಳಸುವುದು.
ಝಿಕಾ ವೈರಸ್ ಸೋಂಕು ಬರದಂತೆ ತಡೆಯಲು ಮುಂಜಾಗ್ರತಾ ಕ್ರಮ :
1.ಸ್ವಚ್ಛ ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿದ್ದು, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು.
2.ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛವಾಗಿಡುವುದು.
3.ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುವುದು.
4.ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ನೀರು ನಿಲ್ಲದಂತೆ ಎಚ್ಚರವಹಿಸುವುದು.

ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು. ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು.

■ಝಿಕಾ; ಭಯಬೇಡ, ಎಚ್ಚರವಿರಲಿ
ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೇ ಝಿಕಾ ವೈರಸ್ ಪ್ರಕರಣಗಳು ವರದಿಯಾಗಿರುವುದಿಲ್ಲ. ಸಾರ್ವಜನಿಕರು ಆತಂಕಪಡುವ ಅವಶ್ಯಕತೆಯಿಲ್ಲ. ಆದರೆ ಜಾಗೃತರಾಗಿರಬೇಕು. ಈ ಖಾಯಿಲೆಯು ಡೆಂಗೀ ಹರಡುವ ಈಡೀಸ್ ಈಜಿಪ್ಟೈ ಸೊಳ್ಳೆಗಳಿಂದ ಹರಡುವುದರಿಂದ ಸೊಳ್ಳೆಗಳ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಸಹಕರಿಸಬೇಕು. ಝಿಕಾ ರೋಗಲಕ್ಷಣಗಳಾದ ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು(ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಕಂಡುಬಂದರೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಮತ್ತು ಚಿಕಿತ್ಸೆ ಪಡೆಯಬೇಕು.
—-ಡಾ.ಗುಡದಪ್ಪ ಕಸಬಿ, ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ

ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಝಿಕಾ ವೈರಸ್ ಪರೀಕ್ಷೆ ಹಾಗೂ ಚಿಕಿತ್ಸೆ ಸಂಪೂರ್ಣ ಉಚಿತವಾಗಿದ್ದು, ಜಿಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ, ಎಚ್ಚರವಿರಲಿ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

The post ಝಿಕಾ ವೈರಸ್ ಸೋಂಕು-ಭಯಬೇಡ ಎಚ್ಚರವಿರಲಿ: ಡಿಸಿ appeared first on Hai Sandur kannada fortnightly news paper.

]]>
https://haisandur.com/2023/11/04/%e0%b2%9d%e0%b2%bf%e0%b2%95%e0%b2%be-%e0%b2%b5%e0%b3%88%e0%b2%b0%e0%b2%b8%e0%b3%8d-%e0%b2%b8%e0%b3%8b%e0%b2%82%e0%b2%95%e0%b3%81-%e0%b2%ad%e0%b2%af%e0%b2%ac%e0%b3%87%e0%b2%a1-%e0%b2%8e%e0%b2%9a/feed/ 0